ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೆಟ್ರೋಲ್,ಡೀಸೆಲ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಟೀಕೆ

By Manjunatha
|
Google Oneindia Kannada News

Recommended Video

ಪೆಟ್ರೋಲ್ ಡಿಸೇಲ್ ಬೆಲೆ 18 ಪೈಸೆಗೆ ಏರಿಕೆ | ಕೇಂದ್ರ ಸರ್ಕಾರದ ಮೇಲೆ ಸಿದ್ದು ಫುಲ್ ಗರಂ | Oneindia Kannada

ಬೆಂಗಳೂರು, ಏಪ್ರಿಲ್ 03: ಇಂಧನ ಬೆಲೆ ಪದೇ ಪದೇ ಏರಿಕೆ ಆಗುತ್ತಲೇ ಇರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದು, ಕೇಂದ್ರದ ವಿರುದ್ಧ ವ್ಯಂಗ್ಯದ ಛಾಟಿ ಬೀಸಿದ್ದಾರೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | 2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಟ್ವೀಟ್ ಮಾಡಿ ಅಸಮಾಧಾನ ಹೊರಹಾಕಿರುವ ಮುಖ್ಯಮಂತ್ರಿಗಳು, ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯ ಕಾರ್ಟೂನನ್ನು ಬಳಸಿ ಕೇಂದ್ರಕ್ಕೆ ಕುಟುಕಿದ್ದಾರೆ.

ಪೆಟ್ರೋಲ್, ಡೀಸೆಲ್ ಬೆಲೆ ದಾಖಲೆ ಪ್ರಮಾಣದಲ್ಲಿ ಏರಿಕೆಪೆಟ್ರೋಲ್, ಡೀಸೆಲ್ ಬೆಲೆ ದಾಖಲೆ ಪ್ರಮಾಣದಲ್ಲಿ ಏರಿಕೆ

'2014ಕ್ಕೂ ಮೊದಲು, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಪ್ರತಿ ಬ್ಯಾರೆಲ್‌ಗೆ 100 ಡಾಲರ್ ಇದ್ದಾಗ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗ್ಗೆ ಬಿಜೆಪಿ ಪ್ರತಿಭಟನೆ ಮಾಡಿತ್ತು. ಈಗ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 68 ಡಾಲರ್‌ಗೆ ಇಳಿಕೆಯಾಗಿದೆ. ಆದರೂ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚುತ್ತಲೇ ಇರುವುದು ಯಾಕೆ' ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮುಂದುವರೆದು 'ಪ್ರಧಾನಿಯವರು ಬಡವರ ಮತ್ತು ಮಧ್ಯಮವರ್ಗದವರ ಬಗ್ಗೆ ಕಾಳಜಿ ವಹಿಸುವರೇ' ಎಂದು ಪ್ರಶ್ನಿಸಿದ್ದಾರೆ. ಜೊತೆಗೆ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಕುರಿತಾಗಿ ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯ ರಚಿಸಿರುವ ವ್ಯಂಗ್ಯಚಿತ್ರವನ್ನೂ ಲಗತ್ತಿಸಿದ್ದಾರೆ.

ಚಿತ್ರದಲ್ಲಿ ಬಿಜೆಪಿ ಬಾವುಟ ಹೊತ್ತ ಕಾರಿನಲ್ಲಿ ಮೋದಿ ಮತ್ತು ಅಮಿತ್ ಶಾ ಕೂತಿದ್ದಾರೆ, ಪೆಟ್ರೀಲ್, ಡೀಸೆಲ್ ಬೆಲೆ ಹೆಚ್ಚಾಗಿರುವ ಸುದ್ದಿ ಓದುತ್ತಿರುವ ಮೋದಿ ಅಮಿತ್ ಶಾ ರನ್ನು '2019ರ ವರೆಗೆ ಆಗುವಷ್ಟು ಇಂಧನ ನಮ್ಮ ಬಳಿ ಇದೆಯೇ?' ಎಂದು ಪ್ರಶ್ನಿಸುತ್ತಿದ್ದಾರೆ.

Siddaramaiah criticize central government over fuel price hike

ಭಾನುವಾರದಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ 18 ಪೈಸೆ ಏರಿಕೆಯಾದ ಬಳಿಕ ದೆಹಲಿಯಲ್ಲಿ ಭಾನುವಾರದಂದು ಪೆಟ್ರೋಲ್ ಪ್ರತಿ ಲೀಟರ್ ಗೆ 73.73 ರೂ. ತಲುಪಿದೆ. ಡೀಸೆಲ್ ಬೆಲೆ ಸಾರ್ವಕಾಲಿಕ ದಾಖಲೆ ಬರೆದಿದ್ದು, ಪ್ರತಿ ಲೀಟರ್ ಗೆ 64.58 ರೂ. ಮುಟ್ಟಿದೆ. ಇದು ಕಳೆದ 4 ವರ್ಷಗಳಲ್ಲಿಯೇ ಅತಿ ಹೆಚ್ಚಿನ ಪ್ರಮಾಣದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗಿದ್ದು, ದಾಖಲೆ ಬರೆದಿದೆ.

English summary
Cm Siddaramaiah criticize central government over fuel price hike, He tweeted about the issue and said Modi is not with Middle class and poor people.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X