20 ರೂಪಾಯಿಗೆ ಲೀಟರ್ ಪೆಟ್ರೋಲ್ ನೀಡಿ : ಸಿದ್ದರಾಮಯ್ಯ

By: ಒನ್ ಇಂಡಿಯಾ
Subscribe to Oneindia Kannada

ಬೆಂಗಳೂರು, ಮಾರ್ಚ್ 31 : 'ಕಚ್ಚಾ ತೈಲ ಬೆಲೆಯಲ್ಲಿ ಇಳಿಕೆಯಾಗಿರುವುದರಿಂದ ಮೋದಿ ಸರ್ಕಾರ ಪ್ರತಿ ಲೀಟರ್ ಪೆಟ್ರೋಲ್‌ ದರವನ್ನು 20 ರೂಪಾಯಿಗೆ ಇಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಏರಿಕೆ ಮಾಡಿರುವುದನ್ನು ಅವರು ಸಮರ್ಥಿಸಿಕೊಂಡಿದ್ದಾರೆ.

ಬಜೆಟ್ ಮೇಲಿನ ಚರ್ಚೆಗೆ ವಿಧಾನಸಭೆಯಲ್ಲಿ ಬುಧವಾರ ಉತ್ತರ ನೀಡಿದ ಸಿದ್ದರಾಮಯ್ಯ ಅವರು, ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ರಾಜ್ಯ ಸರ್ಕರ ಹಾಕಿರುವ ತೆರಿಗೆಯನ್ನು ರದ್ದುಪಡಿಸಬೇಕೆಂದು ಬಿಜೆಪಿ ಸದಸ್ಯರು ಮಾಡಿದ ಒತ್ತಾಯವನ್ನು ತಳ್ಳಿ ಹಾಕಿದರು. [ಸಿದ್ದರಾಮಯ್ಯ ಬಜೆಟ್: ಯಾವುದು ಏರಿಕೆ? ಯಾವುದು ಇಳಿಕೆ?]

siddaramaiah

'ಕೇಂದ್ರದಲ್ಲಿ ಯುಪಿಎ ಸರ್ಕಾರವಿದ್ದಾಗ ಜಾಗತಿಕ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್ ಗೆ 130 ರಿಂದ 140 ಡಾಲರ್ ಇತ್ತು. ಇಂದಿನ ದಿನಗಳಲ್ಲಿ 27 ರಿಂದ 29 ಡಾಲರ್‌ಗೆ ಕುಸಿದಿದೆ. ಹೀಗಿರುವಾಗ ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆಯನ್ನು 20 ರೂ. ಗೆ ಇಳಿಸಬೇಕು' ಎಂದು ಸಿದ್ದರಾಮಯ್ಯ ಹೇಳಿದರು. [ಕರ್ನಾಟಕ ಬಜೆಟ್ 2016-17, ಮುಖ್ಯಾಂಶಗಳು]

'ತೈಲ ಬೆಲೆ ಈ ಪ್ರಮಾಣದಲ್ಲಿ ಕಡಿಮೆಯಾಗಿರುವುದರಿಂದ ತೈಲದ ಲೆಕ್ಕದಲ್ಲೇ ಕೇಂದ್ರಕ್ಕೆ 2 ಲಕ್ಷ ಕೋಟಿ ರೂ. ಗಳಷ್ಟು ಉಳಿತಾಯವಾಗುತ್ತಿದೆ. ಆದರೆ, ಇಷ್ಟು ಪ್ರಮಾಣದಲ್ಲಿ ತೈಲ ಬೆಲೆ ಇಳಿಕೆಯಾದರೂ ಕೇಂದ್ರ ನಾಲ್ಕು ಬಾರಿ ಅಬಕಾರಿ ಸುಂಕವನ್ನು ಹೆಚ್ಚಳ ಮಾಡಿದೆ' ಎಂದು ವಿಷಾದಿಸಿದರು. [ಕೇಂದ್ರ ಬಜೆಟ್ 2016: ಯಾವುದು ಅಗ್ಗ? ಯಾವುದು ತುಟ್ಟಿ?]

'ಹಲವಾರು ರಾಜ್ಯಗಳು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಸುಂಕವನ್ನು ಹೆಚ್ಚಳ ಮಾಡಿದ್ದವು. ಆದರೆ, ನಾವು ಮಾತ್ರ ಹೆಚ್ಚಳ ಮಾಡಿರಲಿಲ್ಲ. ಹೀಗಾಗಿ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಪೆಟ್ರೋಲ್ ಬೆಲೆಯನ್ನು ಲೀಟರ್ ಗೆ 1.89 ರೂ ಹಾಗೂ ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್ ಗೆ 98 ಪೈಸೆಯಷ್ಟು ಹೆಚ್ಚಳ ಮಾಡಿದ್ದೇವೆ' ಎಂದರು.

'ನಾವು ಅಲ್ಪಪ್ರಮಾಣದಲ್ಲಿ ದರ ಏರಿಕೆ ಮಾಡಿದ್ದಕ್ಕೇ ಪ್ರತಿಪಕ್ಷಗಳು ಕೂಗಾಡುತ್ತಿವೆ. ಹಣದುಬ್ಬರ ಹೆಚ್ಚಾಗುತ್ತದೆ ಎಂದು ಹೇಳುತ್ತಿವೆ. ಆದರೆ, ಕೇಂದ್ರ ಸರ್ಕಾರ ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖರೀದಿ ಮಾಡುತ್ತಿರುವ ತೈಲ ಬೆಲೆ ಇಳಿಕೆಯಾಗಿರುವುದರಿಂದ 20 ರೂ.ಗೆ 1 ಲೀಟರ್ ನಂತೆ ಪೆಟ್ರೋಲ್ ಹಾಗೂ ಡೀಸೆಲ್ ನೀಡಬಹುದು' ಎಂದರು.

'ಪೆಟ್ರೋಲ್ ಹಾಗೂ ಡೀಸೆಲ್ ದರಗಳಲ್ಲಿ ತೀವ್ರ ಇಳಿಕೆಯಾದ ಹಿನ್ನೆಲೆಯಲ್ಲಿ ರಾಜ್ಯ ಆಯವ್ಯಯದ ಕಳೆದ ಬಾರಿಯ ನೀರೀಕ್ಷಿತ ರಾಜಸ್ವ ಸಂಗ್ರಹಣೆಯಲ್ಲಿ ಸುಮಾರು 800 ಕೋಟಿ ರೂ.ಕೊರತೆ ಉಂಟಾಗಿದೆ' ಎಂದು ಮುಖ್ಯಮಂತ್ರಿಗಳು ಹೇಳಿದರು.

ರಾಜ್ಯದಲ್ಲಿ ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು ಶೇ. 26ರಿಂದ ಶೇಕಡಾ 30ಕ್ಕೆ ಹೆಚ್ಚಿಸಿರುವ ಹಿನ್ನೆಲೆಯಲ್ಲಿ ಏಪ್ರಿಲ್ 1 ರಿಂದ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 1.89 ರೂ ಹಾಗೂ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಶೇ 16.65 ರಿಂದ ಶೇಕಡಾ 19 ಕ್ಕೆ ಹೆಚ್ಚಿಸಿರುವ ಹಿನ್ನೆಲೆಯಲ್ಲಿ ಪ್ರತಿ ಲೀಟರ್ ಡೀಸೆಲ್ ಬೆಲೆ 98 ಪೈಸೆ ಏರಿಕೆಯಾಗಲಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka Chief Minister Siddaramaiah on Wednesday defended the decision to increase tax rates on several commodities and services, imposed in the budget proposals for 2016-17. BJP demanded for roll back of hike in tax rates on petrol and diesel.
Please Wait while comments are loading...