ಕುತೂಹಲ ಕೆರಳಿಸಿದ ಮಾಜಿ ಸಿದ್ದರಾಮಯ್ಯ ದೆಹಲಿ ಭೇಟಿ!

ಬೆಂಗಳೂರು, ಜೂನ್ 17 : ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿದ್ದಾರೆ. ಮೂರು ದಿನಗಳ ಕಾಲ ಸಿದ್ದರಾಮಯ್ಯ ದೆಹಲಿಯಲ್ಲಿಯೇ ಇರಲಿದ್ದು, ಈ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.

ಸೋಮವಾರ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿದರು. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಸಿದ್ದರಾಮಯ್ಯ ಭೇಟಿ ಮಾಡಲಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ನ ಹಲವು ನಾಯಕರನ್ನು ಸಹ ಭೇಟಿಯಾಗಲಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಬಳಿಕ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿದ್ದು ಕುತೂಹಲಕ್ಕೆ ಕಾರಣವಾಗಿದೆ. ಅದರಲ್ಲೂ ಎಚ್.ಡಿ.ದೇವೇಗೌಡ, ಮಲ್ಲಿಕಾರ್ಜುನ ಖರ್ಗೆ ಅವರು ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಬಳಿಕ ಸಿದ್ದರಾಮಯ್ಯ ದೆಹಲಿಗೆ ಭೇಟಿ ನೀಡುತ್ತಿದ್ದಾರೆ.

ಕರ್ನಾಟಕದ ಕಾಂಗ್ರೆಸ್‌-ಜೆಡಿಎಸ್ ಸಮ್ಮಿಶ್ರ ಸರ್ಕಾರ, ಲೋಕಸಭಾ ಚುನಾವಣೆ ಸೋಲು ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಜೊತೆ ಚರ್ಚೆ ನಡೆಸುವ ನಿರೀಕ್ಷೆ ಇದೆ. ಪಕ್ಷ ಸಂಘಟನೆ ವಿಚಾರದಲ್ಲಿ ಹಲವು ಮಹತ್ವದ ತೀರ್ಮಾನವನ್ನು ಕೈಗೊಳ್ಳುವ ಸಾಧ್ಯತೆ ಇದೆ...

ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದರು

ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದರು

ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಎಚ್.ಡಿ.ದೇವೇಗೌಡ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದರು. ಆಗ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಸರಿಯಾಗಿ ನಡೆಯಲು ಸಿದ್ದರಾಮಯ್ಯ ಬಿಡುತ್ತಿಲ್ಲ ಎಂದು ದೂರು ನೀಡಿದ್ದರು ಎಂಬ ಸುದ್ದಿ ಹಬ್ಬಿತ್ತು. ಈಗ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುತ್ತಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಭೇಟಿ

ಮಲ್ಲಿಕಾರ್ಜುನ ಖರ್ಗೆ ಭೇಟಿ

ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಳೆದ ವಾರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿಯಾಗಿದ್ದರು. ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡುವ ಕುರಿತು ಚರ್ಚೆ ನಡೆಸಲಾಗಿತ್ತು. ಸಿದ್ದರಾಮಯ್ಯ ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿ ಮಾಡಲಾಗುತ್ತದೆ ಎಂಬ ಸುದ್ದಿಯೂ ಹಬ್ಬಿದೆ. ಖರ್ಗೆ ಭೇಟಿ ಬಳಿಕ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರನ್ನು ಭೇಟಿಯಾಗುತ್ತಿದ್ದಾರೆ.

ಸಂಪುಟ ವಿಸ್ತರಣೆ ಬಳಿಕ ಭೇಟಿ

ಸಂಪುಟ ವಿಸ್ತರಣೆ ಬಳಿಕ ಭೇಟಿ

ಕರ್ನಾಟಕದ ಮೈತ್ರಿ ಸರ್ಕಾರದ ಸಚಿವ ಸಂಪುಟವನ್ನು ಶುಕ್ರವಾರ ವಿಸ್ತರಣೆ ಮಾಡಲಾಗಿದೆ. ಸಂಪುಟ ವಿಸ್ತರಣೆ ಬಳಿಕ ಪಕ್ಷದ ಕೆಲವು ಶಾಸಕರು ಅಸಮಾಧಾನಗೊಂಡಿದ್ದಾರೆ. ಈ ವಿಚಾರದ ಕುರಿತು ಹೈಕಮಾಂಡ್ ನಾಯಕರ ಜೊತೆ ಸಿದ್ದರಾಮಯ್ಯ ಮಾತುಕತೆ ನಡೆಸುವ ಸಾಧ್ಯತೆ ಇದೆ.

ಸಂಪುಟ ಪುನಾರಚನೆ ಬಗ್ಗೆ ಚರ್ಚೆ

ಸಂಪುಟ ಪುನಾರಚನೆ ಬಗ್ಗೆ ಚರ್ಚೆ

ಶಾಸಕರ ಅತೃಪ್ತಿ ಬಗೆಹರಿಸಲು ಸಂಪುಟ ಪುನಾರಚನೆ ಮಾಡಬೇಕು ಎಂಬ ಬೇಡಿಕೆ ಕೇಳಿಬರುತ್ತಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಸಹ ಈ ಕುರಿತು ಸುಳಿವು ಕೊಟ್ಟಿದ್ದಾರೆ. ಸಂಪುಟ ಪುನಾರಚನೆ ಮಾಡಬೇಕೆ? ಎಂಬ ಬಗ್ಗೆ ಸಹ ಸಿದ್ದರಾಮಯ್ಯ ಹೈಕಮಾಂಡ್ ನಾಯಕರ ಜೊತೆ ಮಾತುಕತೆ ನಡೆಸಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+