ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೈನಿಕರಿಗೆ ಸಂಬಳ, ಪಿಂಚಣಿ ಕೊಡದಷ್ಟು ಕೇಂದ್ರ ಸರ್ಕಾರ ದಿವಾಳಿಯಾಗಿದೆಯೇ? ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ಜೂ.17: ದೇಶದ ಯುವಜನರನ್ನು ನಿರುದ್ಯೋಗದ ಕೂಪಕ್ಕೆ ತಳ್ಳುವ ಮತ್ತು ದೇಶದ ಭದ್ರತೆಗೆ ಅಪಾಯಕಾರಿಯಾಗಬಲ್ಲ 'ಅಗ್ನಿಪಥ್' ಎಂಬ ಯೋಜನೆಯನ್ನು ಕೇಂದ್ರದ ಬಿಜೆಪಿ ಸರ್ಕಾರ ತಕ್ಷಣ ರದ್ದುಪಡಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಪ್ರಸ್ತುತ ಇರುವ ಸೇನಾ ನೇಮಕಾತಿ ಯೋಜನೆಯಡಿಯಲ್ಲಿಯೇ ಸೈನಿಕರ ನೇಮಕಾತಿ ನಡೆಯಬೇಕು. ಈಗಾಗಲೇ ರೈತರನ್ನು ಬಲಿಗೊಟ್ಟಾಯಿತು, ಈಗ ಸೈನಿಕರ ಸರದಿಯೇ? ಎಂದು ಅವರು ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.

ಅಗ್ನಿಪಥ್ ಯೋಜನೆ ಗೊಂದಲಗಳಿಗೆ ಸ್ಪಷ್ಟನೆ ಕೊಟ್ಟ ಕೇಂದ್ರಅಗ್ನಿಪಥ್ ಯೋಜನೆ ಗೊಂದಲಗಳಿಗೆ ಸ್ಪಷ್ಟನೆ ಕೊಟ್ಟ ಕೇಂದ್ರ

ವರ್ಷಕ್ಕೆ ಎರಡು ಕೋಟಿ ಉದ್ಯೋಗದ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರೇ ಉದ್ಯೋಗಾವಕಾಶದ ಬಾಗಿಲುಗಳನ್ನು ಒಂದೊಂದಾಗಿ ಮುಚ್ಚುತ್ತಾ ಇರುವ ನಿಮಗೆ ಪ್ರತಿವರ್ಷ ಎರಡು ಕೋಟಿ ನಿರುದ್ಯೋಗಿಗಳನ್ನು ಸೃಷ್ಟಿಸುವ ಗುಪ್ತಾ ಅಜೆಂಡಾ ಏನಾದರೂ ಇದೆಯೇ?

Siddaramaiah Demand Central Govt to Cancel Agneepath Recruitment scheme

ಉದ್ಯೋಗದ ಅಭದ್ರತೆ, ಭವಿಷ್ಯದ ಬಗೆಗಿನ ಭಯ ಮತ್ತು ವೃತ್ತಿ ಬಗೆಗಿನ ಅತೃಪ್ತಿಯನ್ನು ಹುಟ್ಟುಹಾಕಲಿರುವ ಅಗ್ನಿಪಥ್ ಯೋಜನೆಯಡಿ ನೇಮಕಗೊಂಡ ಸೈನಿಕರು ತಮ್ಮ ವೃತ್ತಿಯಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಲು ಸಾಧ್ಯವೇ? ಶತ್ರುಗಳ ಜೊತೆ ಕಾದಾಡಲಿರುವ ಸೈನಿಕರ ಈ ಮನಸ್ಥಿತಿ ಅಪಾಯಕಾರಿಯಲ್ಲವೇ?

ದೇಶಕ್ಕಾಗಿ ಪ್ರಾಣತ್ಯಾಗ ಮಾಡಲು ಸಿದ್ಧರಾಗುವ ಸೈನಿಕರಿಗೆ ಉದ್ಯೋಗದ ಭದ್ರತೆ, ನ್ಯಾಯಬದ್ಧ ಸಂಬಳ, ಪಿಂಚಣಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲಾಗದಷ್ಟು ಕೇಂದ್ರದ ಬಿಜೆಪಿ ಸರ್ಕಾರ ದಿವಾಳಿಯಾಗಿದೆಯೇ? ನಿಮ್ಮ ದಿವಾಳಿತನ ಮುಚ್ಚಿಡಲು ದೇಶದ ಭದ್ರತೆಯ ಜೊತೆ ಚೆಲ್ಲಾಟವಾಡಲು ಹೋಗಬೇಡಿ.

Siddaramaiah Demand Central Govt to Cancel Agneepath Recruitment scheme

ಹೊಸಸೇನಾ ನೇಮಕಾತಿ ಅಗ್ನಿಪಥ್ ಕೇವಲ ಸೇನಾ ನೇಮಕಾತಿಗಷ್ಟೇ ಸೀಮಿತವಾಗಲಾರದು. ಸೈನಿಕರ ಅನ್ನ ಕಸಿಯಲು ಹೊರಟಿರುವ ಈ ದೇಶದ್ರೋಹಿ, ಜನವಿರೋಧಿ ಬಿಜೆಪಿ ಸರ್ಕಾರ ಮುಂದಿನ ದಿನಗಳಲ್ಲಿ ಇತರ ಸರ್ಕಾರಿ ಉದ್ಯೋಗಗಳ ಮೇಲೆಯೂ ಸವಾರಿ ಮಾಡಲು ಹೊರಡುವುದು ಖಚಿತ. ಎಚ್ಚೆತ್ತುಕೊಳ್ಳಲು ಇದು ಸಕಾಲ!..

ರೈತರ ಬದುಕು ನಾಶ ಮಾಡಲು ಕರಾಳ ಕೃಷಿ ಕಾಯ್ದೆಗಳನ್ನು ತಂದಿದ್ದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ದೇಶದ ಜನ ಪಾಠ ಕಲಿಸಿದ್ದಾರೆ. ಈಗ ಯುವಜನರ ಬದುಕು ನಾಶದ ಜೊತೆಯಲ್ಲಿ ಸೈನಿಕರ ಬದುಕಿನ ಜೊತೆ ಚೆಲ್ಲಾಟವಾಡುತ್ತಿರುವವರಿಗೂ ಪಾಠ ಕಲಿಸಲು ದೇಶದ ಜನತೆ ಮುಂದಾಗಬೇಕು ಎಂದು ಸಿದ್ದರಾಮಯ್ಯ ಟ್ವೀಟ್‌ಗಳ ಮೂಲಕ ಹೇಳಿದ್ದಾರೆ.

English summary
Siddaramaiah Demand Central Govt to Cancel Agnipath Recruitment scheme; he says is govt don't have money to pay pension and salary to soldiers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X