ದಿನಕ್ಕೆ ಕನಿಷ್ಠ 400 ರೂಪಾಯಿ ವೇತನ ನಮ್ಮ ಬೇಡಿಕೆ, ಮನರೇಗಾ ಮರುಜಾರಿಯಾಗಲಿ: ಸಿದ್ದರಾಮಯ್ಯ
ಜನರ ಉದ್ಯೋಗದ ಹಕ್ಕನ್ನು ಮರುಸ್ಥಾಪಿಸಬೇಕು. ಪಂಚಾಯಿಗಳ ಅಧಿಕಾರ ಪುನರ್ ಸ್ಥಾಪನೆಯಾಗಬೇಕು. ದೇಶಾದ್ಯಂತ ಕನಿಷ್ಠ 400 ರೂ.ಗಳ ವೇತನ ನೀಡಬೇಕು ಎನ್ನುವುದು ನಮ್ಮ ಬೇಡಿಕೆ. ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ಸಂಪೂರ್ಣವಾಗಿ ರದ್ದು ಗೊಳಿಸಿ, ಮನರೇಗಾ ಯೋಜನೆ ಮರುಜಾರಿಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು. ಮಹಾತ್ಮ ಗಾಂಧಿ ಹೆಸರು ತೆಗೆದುಹಾಕಿ ಅವರಿಗೆ ಪುನಃ ಅವಮಾನ ಮಾಡಬಾರದು. ಈ ಬಗ್ಗೆ ಕೇಂದ್ರ ಸರ್ಕಾರ ಹಾಗೂ ರಾಷ್ಟ್ರಪತಿಗಳಿಗೆ ಈ ಮನವಿ ಕಳುಹಿಸಿಕೊಡಲಾಗುವುದು ಎಂದಿದರು.
ವಿಧಾನಸಭೆಯ ಕಲಾಪದಲ್ಲಿ ವಿಬಿ ಜಿ ರಾಮ್ ಜಿ ಯೋಜನೆ ಕುರಿತಂತೆ ನಡೆದ ಚರ್ಚೆಯಲ್ಲಿ ಮುಖ್ಯಮಂತ್ರಿ ಮಾತನಾಡಿದರು. ಹಿಂದೆ ಜಾರಿಯಲ್ಲಿದ್ದ ಮನರೇಗಾ ಅಡಿಯಲ್ಲಿ ಎಲ್ಲ ವರ್ಗದ ಜನರಿಗೆ ಕೆಲಸವಿತ್ತು. ಮನರೇಗಾ ಬರುವ ಮುನ್ನ ಕೆಲಸ ಹುಡುಕಿಕೊಂಡು ಜನ ವಲಸೆ ಹೋಗುತ್ತಿದ್ದರು. ಬೇಡಿಕೆಗೆ ಅನುಸಾರವಾಗಿ ಕೆಲಸ ಒದಗಿಸಲಾಗುತ್ತಿತ್ತು. ಈ ಮೂಲಕ ಬಡ ವರ್ಗದ ಜನರಿಗೆ ಅನುಕೂಲ ಕಲ್ಪಿಸಲಾಯಿತು ಎಂದರು.

ಗ್ರಾಮ ಸಭೆ ತೀರ್ಮಾನಕ್ಕೆ ತಿಲಾಂಜಲಿ
ಮಕ್ಕಳನ್ನು ಶಾಲೆಗೆ ಕಳುಹಿಸಿ ಕೂಲಿಗೆ ಹೋಗುತ್ತಿದ್ದರು. ವಿಬಿ ಜಿ ರಾಮ್ ಜಿ ಪ್ರಕಾರ ಕೇಂದ್ರ ಸರ್ಕಾರವೇ ಕೆಲಸ ಎಲ್ಲಿ ನೀಡಬೇಕೆಂದು ತೀರ್ಮಾನಿಸುತ್ತದೆ. ಸಂವಿಧಾನದ 73/74 ತಿದ್ದುಪಡಿಯ ಪ್ರಕಾರ ವಿಕೇಂದ್ರೀಕರಣದಡಿ ಗ್ರಾಮ ಸಭೆಯಲ್ಲಿ ಎಲ್ಲಿ ಕೆಲಸವಾಗಬೇಕೆಂದು ತೀರ್ಮಾನವಾಗುತ್ತಿತ್ತು. ಈಗ ಅದಕ್ಕೆ ತಿಲಾಂಜಲಿ ಇಡಲಾಗಿದೆ. ಕರ್ನಾಟಕದಲ್ಲಿ 71.18 ಲಕ್ಷ ಕಾರ್ಮಿಕರಿದ್ದಾರೆ. ಈ ಪೈಕಿ 51% ಗಿಂತ ಹೆಚ್ಚು ಮಹಿಳೆಯರು ಇದ್ದಾರೆ ಎಂದು ಹೇಳಿದರು.
ಮನರೇಗಾ ಇಲ್ಲದೇ ಹೋಗಿದ್ದರೆ ಕೋವಿಡ್-19 ಸಂದರ್ಭದಲ್ಲಿ ಕೂಲಿ ಕಾರ್ಮಿಕರ ಬದುಕು ದುಸ್ತರವಾಗುತಿತ್ತು. ಈಗ ಗ್ರಾಮ ಸಭೆಯಲ್ಲೂ ಅಲ್ಲ, ಪಂಚಾಯಿತಿ ಪ್ರಕಾರ ತೀರ್ಮಾನವಾಗುವುದಿಲ್ಲ. ಇದರಿಂದ ಉದ್ಯೋಗಕ್ಕೆ ಕೊಡಲಿ ಪೆಟ್ಟು ನೀಡಲಾಗಿದೆ. ಈಗ ವರ್ಷದಲ್ಲಿ 60 ದಿನ ಕೃಷಿ ಚಟುವಟಿಕೆಗಳು ಇದ್ದ ಸಂದರ್ಭದಲ್ಲಿ ಕೆಲಸಗಳಿಲ್ಲ. ಮನರೇಗಾ ಅಡಿಯಲ್ಲಿ ಕೃಷಿ ಚಟುವಟಿಕೆಗಳಿದ್ದಾಗಲೂ ಕೆಲಸ ಮಾಡಬಹುದಾಗಿತ್ತು. ಇಲ್ಲಿ ಗುತ್ತಿಗೆದಾರರಿಗೆ ನಿಷೇಧವಿತ್ತು. ಮನರೇಗಾ ಕಾಯ್ದೆಯಲ್ಲಿ ಗುತ್ತಿಗೆ ಎಂಬ ಪದವೇ ಇಲ್ಲ. ಈಗ ಎಲ್ಲ ಗುತ್ತಿಗೆದಾರರು ಪ್ರವೇಶ ಮಾಡಬಹುದಾಗಿದೆ. ಸೇತುವೆ, ಹೆದ್ದಾರಿ, ಮುಂತಾದ ದೊಡ್ಡ ಕೆಲಸಗಳಿಗೆ ಜನ ಹೋಗಬೇಕಾಗುತ್ತದೆ. ಪಂಚಾಯಿತಿಗಳಿಗೆ ಕೊಟ್ಟಿದ್ದ ಅಧಿಕಾರವನ್ನು ಕಸಿದುಕೊಳ್ಳಲಾಗಿದೆ ಎಂದು ಆರೋಪಿಸಿದರು.
ನಿರುದ್ಯೋಗದ ಪ್ರಮಾಣ ಹೆಚ್ಚಳ
ಮನರೇಗಾ ರದ್ದು ಮಾಡಿ ತಂದಿರುವ ವಿಬಿ ಜಿ ರಾಮ್ ಜಿ ಕಾಯ್ದೆಯ ದುಷ್ಪರಿಣಾಮಗಳ ದೊಡ್ಡ ಪಟ್ಟಿ ಇದೆ. ಅವುಗಳೆಂದರೆ ನಿರುದ್ಯೋಗದ ಪ್ರಮಾಣ ಹೆಚ್ಚಳವಾಗುತ್ತದೆ, ಉದ್ಯೋಗದಲ್ಲಿ ಮಹಿಳೆಯರ ಪಾಲುದಾರಿಕೆ ಇಳಿಕೆಯಾಗುತ್ತದೆ. ಕನಿಷ್ಠ ವೇತನದ ರಕ್ಷಣೆ ಇಲ್ಲದೆ ಕಾರ್ಮಿಕರು ಸಂಕಷ್ಟಕ್ಕೆ ತಳ್ಳಲ್ಪಡುತ್ತಾರೆ. ದಲಿತ ಮತ್ತು ಆದಿವಾಸಿಗಳ ಕುಟುಂಬಗಳ ಮೇಲೆ ಅಧಿಕ ಒತ್ತಡ ಸೃಷ್ಟಿಯಾಗುತ್ತದೆ. ಗ್ರಾಮೀಣಾಭಿವೃದ್ಧಿಗೆ, ಗ್ರಾಮೀಣ ಬದುಕಿಗೆ ಮಾರಕವಾದ ಕಾಯ್ದೆಯಿದು. ಪ್ರತಿ ವರ್ಷ ನೂರು ದಿನಗಳ ಉದ್ಯೋಗ ಖಾತ್ರಿ ಇತ್ತು. ಈಗ ಗ್ರಾಮೀಣ ಪ್ರದೇಶದ ಕೂಲಿಕಾರರ ಕೆಲಸ ಕಿತ್ತುಕೊಂಡಂತಾಗಿದೆ. 125 ದಿನಕೆಲಸ ಕೊಡುವುದಾಗಿ ಹೇಳಲಾಗಿದೆ. 60:40 ಅನುದಾನದ ಅನುಪಾತ ಮಾಡಿರುವುದು ಕೇಂದ್ರ ಪುರಸ್ಕೃತ ಯೋಜನೆಯಂತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಪ್ರಧಾನಿಗಳಿಗೆ ಮಹಾತ್ಮ ಗಾಂಧಿ ಅವರ ಹೆಸರು ತೆಗೆದುಹಾಕಲು ಈಗ ಜ್ಞಾನೋದಯವಾಗಿದೆಯೇ? ಮನರೇಗಾ ಅಡಿ ಪ್ರತಿ ಪಂಚಾಯಿತಿಗೆ ಕನಿಷ್ಠ ₹1 ಕೋಟಿವರೆಗೂ ಕೆಲಸ ನೀಡಬಹುದಾಗಿತ್ತು. ಈಗ ಅದಕ್ಕೆ ಅವಕಾಶವಿಲ್ಲ, ಏಕೆಂದರೆ ಅನೇಕ ರಾಜ್ಯಗಳು ಆರ್ಥಿಕ ಮುಗ್ಗಟ್ಟು ಎದುರಿಸುತ್ತಿವೆ. ಕೇಂದ್ರ ಸರ್ಕಾರ ರಾಜ್ಯಗಳಿಗೆ ಕೊಡಬೇಕಾದ ಅನುದಾನ ಕೊಡುವುದಿಲ್ಲ. ಹಣಕಾಸು ಆಯೋಗ ಶಿಫಾರಸು ಮಾಡಿದ ಅನುದಾನವನ್ನೂ ಬಿಡುಗಡೆ ಮಾಡುವುದಿಲ್ಲ ಎಂದು ದೂರಿದರು.
ಕೂಲಿಗೆ ಖಾತ್ರಿ ಇಲ್ಲ
ಪ್ರತಿ ಗ್ರಾಮವೂ ಯೋಜನೆಯನ್ನು ಜಾರಿ ಮಾಡಬಹುದಾಗಿತ್ತು. ಈಗ ವರ್ಷದ 10 ತಿಂಗಳು ಮಾತ್ರ ಕೆಲಸ ಮಾಡಬಹುದು. ಕೂಲಿಯ ಮೊತ್ತವನ್ನು ಪುರುಷರು ಮತ್ತು ಮಹಿಳೆಯರಿಗೆ ಸಮಾನವಾಗಿ ಕೊಡಲಾಗುತ್ತಿತ್ತು. ಕೂಲಿಯನ್ನು ಬೆಲೆಯೇರಿಕೆಗೆ ಸರಿದೂಗಿಸಲಾಗುತ್ತಿತ್ತು. ಈಗಿನ ಕಾಯ್ದೆ ಪ್ರಕಾರ ಕೂಲಿಗೆ ಯಾವುದೇ ಖಾತ್ರಿ ಇಲ್ಲ. ಗ್ರಾಮ ಪಂಚಾಯಿತಿಗೆ ನೀಡುವ ಅನುದಾನದ ಮೇಲೆ ನಿರ್ಧಾರವಾಗುತ್ತದೆ. ಕೂಲಿಯನ್ನು ಕೇಂದ್ರ ಸರ್ಕಾರವೇ ನೀಡುತ್ತಿತ್ತು. ಈಗ ಕೇಂದ್ರ ಸರ್ಕಾರ ಶೇ 60ರಷ್ಟು ಹಾಗೂ ರಾಜ್ಯ ಸರ್ಕಾರ ಶೇ40ರಷ್ಟು ಅನುದಾನ ನೀಡಬೇಕೆಂದಿದೆ. ಈಗಿನ ಪ್ರಧಾನಿಗಳು ಗುಜರಾತ್ ಮುಖ್ಯಮಂತ್ರಿಗಳಾಗಿದ್ದಾಗ ಶೇ 50ರಷ್ಟು ದಿನಗಳ ಕೆಲಸ ನೀಡಬೇಕೆಂದು ಒತ್ತಾಯಿಸಿದರು. ಮುಖ್ಯಮಂತ್ರಿಗಳಾಗಿದ್ದಾಗ ಒಂದು ನಿಲುವು, ಪ್ರಧಾನಿಗಳಾದಾಗ ಮತ್ತೊಂದು ನಿಲುವೇ? ಎಂದು ಪ್ರಶ್ನಿಸಿದರು.
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications