• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ರೈತ ಹೋರಾಟದಲ್ಲಿ ಮಡಿದ ಕುಟುಂಬಳಿಗೆ ತಲಾ 25 ಲಕ್ಷ ಪರಿಹಾರ ನೀಡಿ: ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ನ.19: ಕರಾಳ ಕೃಷಿ ಕಾಯ್ದೆ ವಿರೋಧಿಸಿ ಹೋರಾಟದಲ್ಲಿ ಮೃತಪಟ್ಟ ಕುಟುಂಬಳಿಗೆ ತಲಾ 25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರ ದೇಶದ ಮಣ್ಣಿನ ಮಕ್ಕಳ ಅಭೂತಪೂರ್ವ ಹೋರಾಟಕ್ಕೆ ಸಿಕ್ಕ ಗೆಲುವಾಗಿದೆ. ರೈತ ಹೋರಾಟಗಾರರಿಗೆ ಅಭಿನಂದನೆಗಳು. ಕೇವಲ ಕೃಷಿ ಕಾಯ್ದೆಯನ್ನು ರದ್ದುಗೊಳಿಸಿದರಷ್ಟೇ ಸಾಲದು. ಈ ಕರಾಳ ಕಾಯ್ದೆ ರದ್ದತಿಗಾಗಿ ನಡೆದ ಹೋರಾಟದಲ್ಲಿ ಹುತಾತ್ಮರಾದ ರೈತ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಲಾ 25 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

Timeline: ವಿವಾದಿತ ಕೃಷಿ ಕಾಯ್ದೆ ವಿರುದ್ಧ ಅನ್ನದಾತರ ಹೋರಾಟದ ಹಾದಿTimeline: ವಿವಾದಿತ ಕೃಷಿ ಕಾಯ್ದೆ ವಿರುದ್ಧ ಅನ್ನದಾತರ ಹೋರಾಟದ ಹಾದಿ

ಈ ಹೋರಾಟದಲ್ಲಿ ಅಪಾರ ಸಾವು ನೋವುಗಳು ಸಂಭವಿಸಿವೆ. 700 ಕ್ಕೂ ಹೆಚ್ಚು ರೈತರು ಹುತಾತ್ಮರಾಗಿದ್ದಾರೆ. ಶಾಂತಿಯುತವಾಗಿ ಹೋರಾಟ ಮಾಡುತ್ತಿದ್ದ ರೈತರ ಮೇಲೆ ಗುಂಡು ಹಾರಿಸಿ, ವಾಹನಗಳನ್ನು ನುಗ್ಗಿಸಿ ಕೊಲ್ಲಲಾಯಿತು. ಪೋಲೀಸ್ ಮುಂತಾದ ಶಕ್ತಿಗಳನ್ನು ಬಳಸಿ ದಮನಿಸಲು ಪ್ರಯತ್ನಿಸಲಾಯಿತು. ಆದರೂ ಕೂಡ ರೈತರು ಉಕ್ಕಿನಂತೆ ನಿಂತು ಸರ್ವಾಧಿಕಾರಿ ಪ್ರಭುತ್ವವನ್ನು ಸೋಲಿಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಹುತಾತ್ಮ ರೈತರ ಕುಟುಂಬಗಳಿಗೆ ದೇಶ ಕಾಯುವ ಯೋಧರು ಹುತಾತ್ಮರಾದಾಗ ನೀಡುವ ಎಲ್ಲ ಸವಲತ್ತುಗಳನ್ನು ನೀಡಬೇಕು. ಮುಖ್ಯವಾಗಿ ಯೋಧರಿಗೆ ನೀಡಿದಷ್ಟೇ ಪರಿಹಾರ ನೀಡಬೇಕು. ಹುತಾತ್ಮರ ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು. ಅವರ ಮಕ್ಕಳ ಶಿಕ್ಷಣವನ್ನು ಸರ್ಕಾರವೇ ನೋಡಿಕೊಳ್ಳಬೇಕು. ವೃದ್ಧ ತಂದೆ ತಾಯಿಗಳಿದ್ದರೆ ಅವರನ್ನು ಸರ್ಕಾರವೆ ಪೋಷಿಸಬೇಕು ಎಂದು ಆಗ್ರಹಿಸಿದ್ದಾರೆ.

ರೈತರ ಹೋರಾಟ ಸ್ಮರಣೀಯ:

ದೇಶದ ಜನ ಕೊರೋನ ಬೆಂಕಿಯಲ್ಲಿ ನರಳುತ್ತಿದ್ದಾಗ ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ 2020ರ ಮೇ-ಜೂನ್‌ನಲ್ಲಿ ರೈತದ್ರೋಹಿಯಾದ ಕಾಯ್ದೆಗಳಾದ ಎಪಿಎಂಸಿ ಕಾಯ್ದೆ, ಅಗತ್ಯ ವಸ್ತುಗಳ ಕಾಯ್ದೆ-2020, ರೈತರೊಂದಿಗೆ ಕೃಷಿ ಬೆಲೆ ಖಾತ್ರಿ ಒಪ್ಪಂದ ಮತ್ತು ಕೃಷಿ ಸೇವೆಗಳ ಕಾಯ್ದೆ- 2020 ಮುಂತಾದವನ್ನು ಸುಗ್ರೀವಾಜ್ಞೆಗಳ ಮೂಲಕ ಜಾರಿಗೆ ತಂದಿತ್ತು. ರೈತರು ವೀರೋಚಿತವಾದ, ಧೀರೋದಾತ್ತವಾದ ಹೋರಾಟವನ್ನು ಮಾಡುತ್ತಾ ಬಂದರು. ಕಡೆಗೂ ಮೋದಿಯವರು ಗುರುನಾನಕ್ ಜಯಂತಿಯ ದಿನದಂದು ಈ ಜನದ್ರೋಹಿಯಾದ ಕಾಯ್ದೆಗಳನ್ನು ವಾಪಸ್ಸು ಪಡೆಯುವುದಾಗಿ ಹೇಳಿದ್ದಾರೆ. ಹಾಗಾಗಿ ರೈತರ ಹೋರಾಟವನ್ನು ಇಡೀ ದೇಶ ಇಂದು ಹೆಮ್ಮೆಯಿಂದ ಸ್ಮರಿಸುತ್ತಿದೆ ಎಂದು ಹೇಳಿದ್ದಾರೆ.

ಕೃಷಿ ಕಾಯ್ದೆ ವಾಪಸ್: ರೈತರ ಶಾಂತಿಯುತ ಸತ್ಯಾಗ್ರಹಕ್ಕೆ ಸಂದ ಜಯ ಎಂದ ಸುಬ್ರಮಣಿಯನ್ ಸ್ವಾಮಿ ಕೃಷಿ ಕಾಯ್ದೆ ವಾಪಸ್: ರೈತರ ಶಾಂತಿಯುತ ಸತ್ಯಾಗ್ರಹಕ್ಕೆ ಸಂದ ಜಯ ಎಂದ ಸುಬ್ರಮಣಿಯನ್ ಸ್ವಾಮಿ

'ನಮ್ಮ ಹೆಮ್ಮೆಯ ರೈತರು ತಾವೂ ಗೆದ್ದು ದೇಶವನ್ನೂ ತುಸು ಮಟ್ಟಿಗೆ ಗೆಲ್ಲಿಸಿದ್ದಾರೆ. ಈ ದೇಶದ್ರೋಹಿ ಕಾನೂನುಗಳನ್ನು ದೇಶದ ಜನರ ಮೇಲೆ ಹೇರಿದಾಗಿನಿಂದಲೂ ಈ ಕಾನೂನುಗಳು ರೈತರ ವಿರೋಧಿಗಳು ಮಾತ್ರವಲ್ಲ, ಇವು ನಗರ, ಪಟ್ಟಣಗಳ ಬಡವರು, ಮಧ್ಯಮ ವರ್ಗದವರನ್ನು ನಾಶ ಮಾಡುವ ಕಾನೂನುಗಳು. ದೇಶದ ಕೃಷಿ ಅಂಬಾನಿ, ಅದಾನಿಗಳ ಕೈಗೆ ಹೋದರೆ, ಅವರು ಏಕಸ್ವಾಮ್ಯ ಸಾಧಿಸಿ ದೇಶದ ಜನರನ್ನು, ಅವರ ಆರ್ಥಿಕತೆಯನ್ನು ನಾಶ ಮಾಡಿ ಬಿಡುತ್ತಾರೆಂದು ನಾನು ಹೇಳುತ್ತಾ ಬಂದಿದ್ದೆ. ಇದರ ಜೊತೆಗೆ ರೈತ ಹೋರಾಟವನ್ನು ಬೆಂಬಲಿಸಿ ಎಂದು ಮನವಿ ಮಾಡಿದ್ದೆ. ಅದಕ್ಕಾಗಿ ಹಲವು ಮನವಿ ಪತ್ರಗಳನ್ನು ಬರೆದು ರಾಜ್ಯದ ಜನರ ಮುಂದೆ ಇಟ್ಟಿದ್ದೆ. ಹಾಗೂ" ಬಿಜೆಪಿ ಸರ್ಕಾರಗಳ ಐದು ಕಾಯ್ದೆಗಳು; ಅಸಂಖ್ಯಾತ ಸುಳ್ಳುಗಳು" ಎಂಬ ಕಿರು ಪುಸ್ತಕ ಬರೆದು ಜನರ ಮುಂದೆ ಇಟ್ಟಿದ್ದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದು ತಾತ್ಕಾಲಿಕ ಗೆಲುವು:

ಸ್ವಾತಂತ್ರ್ಯ ಹೋರಾಟದ ನಂತರ ಅಹಿಂಸೆಯ ಮಾರ್ಗದಲ್ಲಿ ನಡೆದ ಬೃಹತ್ ಹೋರಾಟವನ್ನು ನಮ್ಮ ರೈತರು ಚಳಿ, ಮಳೆ, ಸುಡುವ ಬಿಸಿಲು, ಕೊಲೆಗಡುಕ ಕೊರೋನ ಎಲ್ಲವನ್ನು ನಿಗ್ರಹಿಸಿ ದೇಶದ ಜನರಿಗೆ ಹೋರಾಟ ಮತ್ತು ಗೆಲುವಿನ ಮಹತ್ವವೇನು ಎಂದು ತೋರಿಸಿಕೊಟ್ಟಿದ್ದಾರೆ. ಆದರೂ ಇದು ತಾತ್ಕಾಲಿಕ ಗೆಲುವು. ಯಾಕೆಂದರೆ ಕೇಂದ್ರ ಮತ್ತು ಹಲವು ರಾಜ್ಯಗಳಲ್ಲಿ ಚುನಾವಣೆಗಳ ಅಗ್ನಿ ಪರೀಕ್ಷೆ ಎದುರಾಗುತ್ತಿದೆ. ಹಿಟ್ಲರ್ ಶಾಹಿ ಆಡಳಿತ ಮಾಡಿದರೆ ಚುನಾವಣೆಗಳಲ್ಲಿ ನಾವು ಚಿಂದಿಯಾಗಿ ಹೋಗುತ್ತೇವೆ ಎಂದು ಮೋದಿ ಮತ್ತು ಅಮಿತ್ ಶಾ ಅವರಿಗೆ ಬಹುಶಃ ಇಂಟೆಲಿಜೆನ್ಸ್ ಮಾಹಿತಿ ದೊರೆತಿದೆ. ಹಾಗಾಗಿ ಚುನಾವಣೆಗಳು ಮುಗಿಯಲಿ ಆಮೇಲೆ ನೋಡೋಣ ಎಂದು ರೈತ ದ್ರೋಹಿ ಕಾಯ್ದೆಗಳನ್ನು ತಾತ್ಕಾಲಿಕವಾಗಿ ವಾಪಸ್ಸು ಪಡೆದಿದ್ದಾರೆ ಎಂದು ಸಿದ್ದರಾಮಯ್ಯ ಶಂಕೆ ವ್ಯಕ್ತಪಡಿಸಿದ್ದಾರೆ.

ಇಷ್ಟೆಲ್ಲ ಆದರೂ ಹೋರಾಟವಿನ್ನೂ ಮುಗಿದಿಲ್ಲ ಎಂದು ಜನರಿಗೆ ಗೊತ್ತಿದೆ. ಯಾಕೆಂದರೆ ಪ್ರಧಾನಿ ಮೋದಿಯವರು " ಕಾಯ್ದೆಗಳು ಸರಿಯಾಗಿದ್ದವು, ಆದರೆ ಅವುಗಳನ್ನು ಅರ್ಥಮಾಡಿಸುವಲ್ಲಿ ಸೋತೆವು ಎಂದು ಹೇಳಿದ್ದಾರೆ". ತಾವು ಕೆಟ್ಟ ಮತ್ತು ಜನದ್ರೋಹಿಯಾದ ಕಾಯ್ದೆಗಳನ್ನು ತಂದಿದ್ದೆವು ಎಂದು ಅವರಿಗೆ ಗೊತ್ತಿದ್ದರೂ ಈ ಮಾತುಗಳನ್ನು ಹೇಳಿದ್ದಾರೆ. ಹಾಗಾಗಿ ಕಾಯ್ದೆಗಳ ಹಿಂತೆಗೆತವೆಂಬುದು ತಾತ್ಕಾಲಿಕ ಎನ್ನಿಸುತ್ತಿದೆ ಎಂದಿದ್ದಾರೆ ಸಿದ್ದರಾಮಯ್ಯ.

ಸ್ವಾಮಿನಾಥನ್ ವರದಿ ಜಾರಿಯಾಗಲಿ:

ಈಗ ನಾವು ಒತ್ತಾಯಿಸಬೇಕಿರುವುದು ಕೂಡಲೆ ಸ್ವಾಮಿನಾಥನ್ ಅವರ ವರದಿಯನ್ನು ಅಂಗೀಕರಿಸಿ ವೈಜ್ಞಾನಿಕ ಬೆಲೆಗಳನ್ನು ಜಾರಿಗೊಳಿಸಬೇಕು. ನಾನು ಹಿಂದಿನಿಂದಲೂ ಒತ್ತಾಯಿಸುತ್ತಾ ಬಂದಿರುವ ವಿಚಾರವನ್ನು ಈಗಲೂ ಒತ್ತಾಯಿಸುತ್ತೇನೆ. ರೈತರು ಬೆಳೆವ ಪ್ರತಿ ಉತ್ಪನ್ನಕ್ಕೂ ವೈಜ್ಞಾನಿಕ ಬೆಲೆ ನಿಗಧಿಗೊಳಿಸಿ ಆ ಬೆಲೆಗಳನ್ನು ಕಾನೂನುಬದ್ಧಗೊಳಿಸಬೇಕು. ಸರ್ಕಾರ ನಿಗಧಿಗೊಳಿಸಿದ ಬೆಲೆಗಳಿಗಿಂತ ಕಡಿಮೆ ದರಕ್ಕೆ ಕೊಳ್ಳುವುದನ್ನು ನಿರ್ಬಂದಿಸಬೇಕು.

ಸಿದ್ದರಾಮಯ್ಯ
Know all about
ಸಿದ್ದರಾಮಯ್ಯ

ವೈಜ್ಞಾನಿಕ ದರವು ಕೊಳ್ಳುವ ಗ್ರಾಹಕರಿಗೂ ಅನ್ವಯಿಸಬೇಕು. ಅದಾನಿ, ಅಂಬಾನಿ, ದಮಾನಿ ಮುಂತಾದ ಬೃಹತ್ ಕಾರ್ಪೊರೇಟ್ ಮಧ್ಯವರ್ತಿಗಳನ್ನು ಮುಲಾಜಿಲ್ಲದೆ ನಿರ್ಬಂಧಿಸಬೇಕು. ಇವರೆಲ್ಲ ರೈತನಿಂದ ಹತ್ತು ರೂಪಾಯಿಗೆ ಕೊಂಡು ಗ್ರಾಹಕರಿಗೆ ನೂರು ರೂಪಾಯಿಗೆ ಮಾರುವ ಜನ. ಇಂಥ ದರ ಪದ್ಧತಿಯನ್ನು ಕಾನೂನಾತ್ಮಕವಾಗಿ ನಿಷೇಧಿಸಬೇಕು. ರೈತರು ಮತ್ತು ಗ್ರಾಹಕರನ್ನು ಒಂದೆ ವೇದಿಕೆಗೆ ತರುವ ವ್ಯವಸ್ಥೆಗಳನ್ನು ರೂಪಿಸಬೇಕು. ಹೋಬಳಿ, ದೊಡ್ಡ ಗ್ರಾಮ ಪಂಚಾಯತ್ ಕೇಂದ್ರಗಳಲ್ಲೂ ಎಪಿಎಂಸಿ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

English summary
Siddaramaiah welcomes PM Modi decision to repeal 3 farm laws and he also demand Rs 25 lakh compensation to Farmers Who Died in Protest Against Farm Laws.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X