'ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ನೀಡಿ, ರಾಮಮಂದಿರಕ್ಕೆ ಒಂದು ರೂ. ಸಹ ದೇಣಿಗೆ ನೀಡದ ಸಿದ್ದರಾಮಯ್ಯ'
ಬೆಂಗಳೂರು, ಜನವರಿ 03: ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ನೀಡಿ, ರಾಮಮಂದಿರಕ್ಕೆ ಒಂದು ರೂ. ಸಹ ದೇಣಿಗೆ ನೀಡದ ಚುನಾವಣಾ ಹಿಂದೂ ಸಿಎಂ ಸಿದ್ದರಾಮಯ್ಯರವರ ಅಸಲಿ ಮುಖ ಇದು ಎಂದು ರಾಜ್ಯ ಬಿಜೆಪಿ ವಾಗ್ದಾಳಿ ನಡೆಸಿದೆ.
ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ವಿಜಯಪುರದ ದ್ಯಾಬೇರಿ ಗ್ರಾಮದ ವಾಗ್ದೇವಿ ದೇವಿಯ ದರ್ಶನವನ್ನು ಕಾಟಾಚಾರಕ್ಕೆ ಮಾಡಿದ ಹಿಂದೂ ವಿರೋಧಿ ಸಿದ್ದರಾಮಯ್ಯರವರು ಪ್ರಭು ಶ್ರೀರಾಮರ ಅಪರಾವತಾರವಂತೆ.ಸಿಎಂ ಸಿದ್ದರಾಮಯ್ಯ ಅವರೇ, ಮಸೀದಿ, ದರ್ಗಾಗಳಿಗೆ ಹೋಗಿ ಅವರು ನೀಡಿದ್ದೆಲ್ಲವನ್ನೂ ಮೈ ಮೇಲೆ ಹಾಕಿಕೊಂಡು ಫೋಸು ಕೊಡುವ ನಿಮಗೆ, ದೇವಿಯ ಬಳಿ ನಾಡಿನ ಒಳಿತಿಗಾಗಿ ಭಕ್ತಿಯಿಂದ ಕೈ ಮುಗಿಯುವಷ್ಟು ಸಮಯವಿಲ್ಲ.

ಹಿಂದೂ ಧರ್ಮ, ಹಿಂದೂ ದೈವ ಹಾಗೂ ಹಿಂದೂಗಳನ್ನು ಕಂಡರೆ ಈ ಪರಿ ಅಸಡ್ಡೆ ಏಕೆ..? ಎಂದು ಪ್ರಶ್ನಿಸಿದ ಬಿಜೆಪಿ, ಪ್ರಭು ಶ್ರೀ ರಾಮ ವಿರೋಧಿ ಕಾಂಗ್ರೆಸ್ ಸರ್ಕಾರದ ತುಘಲಕ್ ಧೋರಣೆಗಳು ಇವು ಎಂದು ಪಟ್ಟಿ ಮಾಡಿದೆ.
ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ನೀಡಿ, ರಾಮಮಂದಿರಕ್ಕೆ ಒಂದು ರೂ. ಸಹ ದೇಣಿಗೆ ನೀಡದ ಚುನಾವಣಾ ಹಿಂದೂ ಸಿಎಂ ಸಿದ್ದರಾಮಯ್ಯರವರ ಅಸಲಿ ಮುಖ ಇದು.
— BJP Karnataka (@BJP4Karnataka) January 3, 2024
ವಿಜಯಪುರದ ದ್ಯಾಬೇರಿ ಗ್ರಾಮದ ವಾಗ್ದೇವಿ ದೇವಿಯ ದರ್ಶನವನ್ನು ಕಾಟಾಚಾರಕ್ಕೆ ಮಾಡಿದ ಹಿಂದೂ ವಿರೋಧಿ ಸಿದ್ದರಾಮಯ್ಯರವರು ಪ್ರಭು ಶ್ರೀರಾಮರ ಅಪರಾವತಾರವಂತೆ.
ಸಿಎಂ @siddaramaiah ಅವರೇ,… pic.twitter.com/wd8LRjBGb4
▪️ಪ್ರಭು ಶ್ರೀರಾಮನ ವಿರೋಧ
▪️ರಾಮ ಮಂದಿರಕ್ಕೂ ವಿರೋಧ
▪️ರಾಮ ಭಕ್ತರ ಬಂಧನ
▪️ರಾಮನ ಅಸ್ತಿತ್ವದ ಬಗ್ಗೆ ಪ್ರಶ್ನೆ
▪️ದತ್ತ ಮಾಲಾಧಾರಿಗಳ ಮೇಲೆ ದೌರ್ಜನ್ಯ
▪️ಹಿಂದೂ ಕಾರ್ಯಕರ್ತರ ಗಡಿಪಾರು
ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಭವ್ಯ ರಾಮಮಂದಿರ ಲೋಕಾರ್ಪಣೆಗೆ ದಿನಗಣನೆ ಆರಂಭವಾಗಿರುವಾಗ ಶ್ರೀ ರಾಮ ಮಂದಿರಕ್ಕಾಗಿ ಹೋರಾಡಿದ 31 ವರ್ಷದ ಹಳೆಯ ಪ್ರಕರಣವನ್ನು ಕೆದಕಿ ರಾಮಭಕ್ತನನ್ನು ಕಾಂಗ್ರೆಸ್ ಸರ್ಕಾರ ಬಂಧಿಸಿದೆ. ಉಳಿದ ರಾಮಭಕ್ತರಿಗಾಗಿ ಪೊಲೀಸ್ ಇಲಾಖೆಯನ್ನು ಛೂ ಬಿಟ್ಟಿರುವ ಹಿಂದೂ ವಿರೋಧಿ ಮನಸ್ಥಿತಿಯ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ 3 ಜನವರಿ, 2024 ರಂದು ಬೆಳಗ್ಗೆ 10 ಗಂಟೆಗೆ ಪ್ರತಿಭಟನೆ ನಡೆಯಲಿದೆ ಎಂದು ಬಿಜೆಪಿ ಹೇಳಿದೆ.

ಇನ್ನೂ ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಟ್ವೀಟ್ ಮಾಡಿದ್ದು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರ ಮೇಲಿನ ಹಲ್ಲೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಲೇ ಇವೆ. ನಮ್ಮ ಶಿವಮೊಗ್ಗ ಜಿಲ್ಲೆಯಲ್ಲಂತೂ ಇದು ಮರುಕಳಿಸುತ್ತಲೇ ಇದೆ, ಹೊಸನಗರ ತಾಲ್ಲೂಕಿನ ಯುವ ಮೋರ್ಚಾ ಅಧ್ಯಕ್ಷ ನಿತಿನ್ ಅವರ ಮೇಲೆ ಕಾಂಗ್ರೆಸ್ ಗೂಂಡಾಗಳಿಂದ ನಡೆದ ಹಲ್ಲೆ ಅತ್ಯಂತ ಖಂಡನಾರ್ಹ.
ದಿನೇ ದಿನೇ ಗೂಂಡಾಗಳ ವರ್ತನೆ ಗಮನಿಸಿದರೆ, ಕಾಂಗ್ರೆಸ್ ಸರ್ಕಾರ ಗೂಂಡಾಗಳ ಪೋಷಣೆಗೆ ನಿಂತಂತಿದೆ, ತಕ್ಷಣ ಪೋಲಿಸರು ಕಿಡಿಗೇಡಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸುತ್ತೇನೆ. ಇಂಥಾ ಘಟನೆಗಳು ಮತ್ತೆ ಮತ್ತೆ ಮರುಕಳಿಸುವ ಪರಿಸ್ಥಿತಿ ಮುಂದುವರೆದರೆ, ಬಿಜೆಪಿ ಹೋರಾಟದ ಸ್ವರೂಪ ತೀವ್ರಗೊಳಿಸಬೇಕಾದೀತು ಎಂದು ಎಚ್ಚರಿಸುತ್ತಿದ್ದೇನೆ.












Click it and Unblock the Notifications