Siddaramaiah: ಹಿರಿಯ ನಾಗರಿಕರಿಗೆ ಮಾಸಾಶನ ಹೆಚ್ಚಳದ ಕುರಿತು ಮಹತ್ವದ ಮಾಹಿತಿ ನೀಡಿದ ಸಿದ್ದರಾಮಯ್ಯ

ಬೆಂಗಳೂರು, ಅಕ್ಟೋಬರ್‌ 01: ರಾಜ್ಯದಲ್ಲಿ 50 ಲಕ್ಷಕ್ಕೂ ಹೆಚ್ಚು ಹಿರಿಯ ನಾಗರಿಕರಿಗೆ ಮಾಸಾಶನ ನೀಡಲಾಗುತ್ತಿದ್ದು, ಮಾಸಾಶನ ಹೆಚ್ಚಿಸುವ ಬಗ್ಗೆ ಇಲಾಖೆ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಆಯೋಜಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2024 ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹಿರಿಯರನ್ನು ಗೌರವಿಸಿ, ಅವರನ್ನು ಪಾಲನೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ತಿಳಿಸಿದರು.

Siddaramaiah Discussion On Increase In Massage For Senior Citizens

ಹಿರಿಯರು ಮಾಡಿದ ಸಾಮಾಜಿಕ ಕೊಡುಗೆಗಳನ್ನು ಸ್ಮರಿಸಬೇಕು. ಹಿರಿಯರ ನಾಗರಿಕರನ್ನು ಕೇವಲ ಗೌರವಿಸಲಷ್ಟೇ ಮೀಸಲಿರಿಸಬಾರದು, ಅವರ ಸಾಧನೆಗಳು ಯುವ ಸಮುದಾಯಕ್ಕೆ ಸ್ಪೂರ್ತಿಯಾಗಬೇಕು. ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಅದೇ ನಾವು ಸಮಾಜಕ್ಕೆ ಕೊಡುವ ದೊಡ್ಡ ಕೊಡುಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವೃದ್ಧಾಶ್ರಮಗಳು ಹೆಚ್ಚಾಗುತ್ತಿರುವುದಕ್ಕೆ ತೀವ್ರ ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿಯವರು, ಮನೆಗಳಲ್ಲಿ ಅನುಕೂಲಕರ ವಾತಾವರಣವಿದ್ದರೂ ವೃದ್ಧಾ ಶ್ರಮ ಸೇರುವುದು ಜಾಸ್ತಿಯಾಗುತ್ತಿದೆ. ಏಕೆಂದರೆ, ಮಕ್ಕಳು ವಿದೇಶದಲ್ಲಿ ನೆಲೆಸಿರುತ್ತಾರೆ. ಇದರಿಂದ ಹಿರಿಯರನ್ನು ವೃದ್ಧಾಶ್ರಮಕ್ಕೆ ಸೇರಿಸುವ ಪರಿಪಾಟ ನಡೆಯುತ್ತಿದೆ. ಇಂಥ ಸಂಸ್ಥೃತಿ ನಿಲ್ಲಬೇಕು ಎಂದು ಮುಖ್ಯಮಂತ್ರಿಗಳು ಹೇಳಿದರು.

ಅಶಕ್ತ, ದುರ್ಬಲ ವರ್ಗದವರಿಗೆ ಶಕ್ತಿತುಂಬುವ ಕೆಲಸವಾಗಬೇಕು. ಅವಕಾಶಗಳಿಂದ ವಂಚಿತರಾದವರಿಗೆ, ಆರ್ಥಿಕವಾಗಿ ದುರ್ಬಲರಾಗಿರುವ ಜನರಿಗೆ ಶಕ್ತಿ ತುಂಬುವಂಥ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದರು.

ಸಾಧಕ ಹಿರಿಯ ನಾಗರಿಕರಿಗೆ ಪ್ರಶಸ್ತಿ

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಗೈದ 6 ಮಂದಿ ಹಾಗೂ ಒಂದು ಸೇವಾ ಸಂಸ್ಥೆಗೆ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜೊತೆಗೆ 10 ಮಹಿಳೆಯರಿಗೆ ಪೌಷ್ಠಿಕಾಂಶ ಕಿಟ್‌ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಿಸಿದರು.

ಮುಖ್ಯಮಂತ್ರಿಗಳ ಭಾಷಣದ ಮಧ್ಯೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಹಿರಿಯ ನಾಗರಿಕರ ಮಾಸಾಶನ ಹೆಚ್ಚಳ ಮಾಡುವಂತೆ ಕೇಳಿಕೊಂಡಾಗ, ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಗೃಹಲಕ್ಷ್ಮಿ ಯೋಜನೆಯನ್ನು ಪಟ್ಟುಬಿಡದೆ ಜಾರಿಗೆ ತಂದಿದ್ದೆ ಈ ಹೆಣ್ಣು ಮಗಳು (ಸಚಿವೆ ಲಕ್ಷ್ಮೀ ಹೆಬ್ಬಾಳಕರ್), ಯಾವತ್ತೂ ಅಷ್ಟೆ, ಹಿಡಿದ ಕೆಲಸವನ್ನು ಪಟ್ಟು ಬಿಡದೆ ಮಾಡುತ್ತಾರೆ. ಈ ಮಾಸಾಶನ ಹೆಚ್ಚಳ ಮಾಡಿಸದೆ ಬಿಡುವುದಿಲ್ಲ ಅಂತ ಸಚಿವರ ಕಾರ್ಯವೈಖರಿ ಬಗ್ಗೆ ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ʼಗ್ಯಾರಂಟಿʼ ಯಿಂದ ಹಿರಿಯರಿಗೆ ಅನುಕೂಲ: ಲಕ್ಷ್ಮಿ ಹೆಬ್ಬಾಳ್ಕರ್‌

ನಮ್ಮ ಸರ್ಕಾರ ಜಾರಿಗೆ ತಂದ ಪಂಚ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿವೆ. ಗ್ಯಾರಂಟಿ ಯೋಜನೆಗಳಿಂದ ಹಿರಿಯ ನಾಗರಿಕರಿಗೆ ಬಹಳಷ್ಟು ಅನುಕೂಲವಾಗುತ್ತಿದೆ. ಶಕ್ತಿ ಯೋಜನೆಯಡಿ ನಮ್ಮ ಹಿರಿಯ ತಾಯಿಂದಿರರು ಕೂಡ ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾರೆ, ಇದು ಸಂತಸದ ಸಂಗತಿ ಆಗಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ರಾಜ್ಯದಲ್ಲಿ ಸದ್ಯ 57 ಲಕ್ಷದ 91 ಸಾವಿರ ಹಿರಿಯ ನಾಗರಿಕರಿದ್ದಾರೆ. ಇಲಾಖೆಗೆ 2024 -25ನೇ ಸಾಲಿನಲ್ಲಿ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿಗಾಗಿ ಸರ್ಕಾರ 10 ಕೋಟಿ 47 ಲಕ್ಷ ರೂಪಾಯಿ ಅನುದಾನ ನಿಗದಿಪಡಿಸಿದೆ. ಈ ಮೂಲಕ ಅನೇಕ ಜನಸ್ನೇಹಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ ಎಂದು ಸಚಿವರು ಹೇಳಿದರು.

ರಾಜ್ಯದಲ್ಲಿ ಅಶಕ್ತ ಮತ್ತು ನಿರ್ಗತಿಕ ಹಿರಿಯ ನಾಗರಿಕರಿಗಾಗಿ ಸ್ವಯಂಸೇವಾ ಸಂಸ್ಥೆಗಳ ಮೂಲಕ ರಾಜ್ಯದೆಲ್ಲೆಡೆ 63 ವೃದ್ಧಾಶ್ರಮಗಳನ್ನು ತೆರೆದಿದೆ. ಸದ್ಯ 1 ಸಾವಿರದ 575 ಮಂದಿ ಅಶಕ್ತ ಹಿರಿಯ ನಾಗರಿಕರು ಆಶ್ರಯ ಪಡೆದಿದ್ದಾರೆ. ಕೇಂದ್ರ ಸರ್ಕಾರದಿಂದಲೂ ನಡೆಸುತ್ತಿರುವ ವೃದ್ಧಾಶ್ರಯಗಳಲ್ಲೂ ಹಿರಿಯ ನಾಗರಿಕರಿದ್ದಾರೆ. ಇನ್ನೂ 19 ವೃದ್ಧಾಶ್ರಮಗಳನ್ನು ತೆರೆಯುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+