ಒಟ್ಟಿಗೆ ರಾಹುಲ್ ಭೇಟಿಯಾದ ಡಿಕೆಶಿ, ಸಿದ್ದರಾಮಯ್ಯ!
ಬೆಂಗಳೂರು, ಜುಲೈ 21; ನಾಯಕತ್ವ ಬದಲಾವಣೆ ವಿಚಾರದಲ್ಲಿ ಕರ್ನಾಟಕ ಬಿಜೆಪಿಯಲ್ಲಿ ಹಲವು ಬೆಳವಣಿಗೆ ನಡೆಯುತ್ತಿವೆ. ಈ ನಡುವೆಯೇ ಕಾಂಗ್ರೆಸ್ ನಾಯಕರು ದೆಹಲಿ ಪ್ರವಾಸದಲ್ಲಿದ್ದಾರೆ.
ಬುಧವಾರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಒಟ್ಟಿಗೆ ರಾಹುಲ್ ಗಾಂಧಿ ಭೇಟಿ ಮಾಡಿದರು. ಈ ಕುರಿತ ಚಿತ್ರವನ್ನು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರ ಜೊತೆಗೂಡಿ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರನ್ನು ಭೇಟಿಮಾಡಿ ಮಾತುಕತೆ ನಡೆಸಿದೆ ಎಂದು ಸಿದ್ದರಾಮಯ್ಯ ಟ್ವೀಟ್ನಲ್ಲಿ ತಿಳಿಸಿದ್ದಾರೆ.

ದೆಹಲಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ್ದ ಡಿ. ಕೆ. ಶಿವಕುಮಾರ್, "ಕರ್ನಾಟಕ ಕಾಂಗ್ರೆಸ್ನಲ್ಲಿ ಯಾವುದೇ ಸಮಸ್ಯೆ ಇಲ್ಲ. ಸಾಮೂಹಿಕ ನಾಯಕತ್ವವಿದೆ. ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಇಲ್ಲ. ಸಿದ್ದರಾಮಯ್ಯ ಜೊತೆ ನನಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ" ಎಂದು ಸ್ಪಷ್ಟಪಡಿಸಿದ್ದರು.
ಮುಂದಿನ ಮುಖ್ಯಮಂತ್ರಿ ಘೋಷಣೆ; ಕರ್ನಾಟಕ ಕಾಂಗ್ರೆಸ್ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು? ಎಂಬುದು ಬಹಳ ಚರ್ಚೆಯ ವಿಷಯವಾಗಿದೆ. ಸಿದ್ದರಾಮಯ್ಯ ಮತ್ತು ಡಿ. ಕೆ. ಶಿವಕುಮಾರ್ ಹೋದ ಕಡೆಯಲ್ಲಿ ಮುಂದಿನ ಮುಖ್ಯಮಂತ್ರಿ ಎಂಬ ಘೋಷಣೆ ಕೇಳಿಬರುತ್ತಿದೆ.
ಈ ವಿಚಾರ ರಾಜ್ಯ ಕಾಂಗ್ರೆಸ್ನಲ್ಲಿ ಬಹಳ ಚರ್ಚೆಗೆ ಕಾರಣವಾಗಿತ್ತು. ಬಿಜೆಪಿ ನಾಯಕರು ಇದೇ ವಿಚಾರ ಮುಂದಿಟ್ಟುಕೊಂಡು ಕಾಂಗ್ರೆಸ್ ನಾಯಕರ ವಿರುದ್ಧ ಟೀಕೆಗಳನ್ನು ಮಾಡಿದ್ದರು.
ಇಂತಹ ಸಂದರ್ಭದಲ್ಲಿ ಸಿದ್ದರಾಮಯ್ಯ ಮತ್ತು ಡಿ. ಕೆ. ಶಿವಕುಮಾರ್ ಒಟ್ಟಿಗೆ ದೆಹಲಿ ಪ್ರವಾಸವನ್ನು ಕೈಗೊಂಡಿದ್ದಾರೆ. ಇಂದು ಉಭಯ ನಾಯಕರು ಒಟ್ಟಿಗೆ ರಾಹುಲ್ ಗಾಂಧಿ ಭೇಟಿ ಮಾಡಿ ಹಲವಾರು ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ.
ಮಂಗಳವಾರ ಸಿದ್ದರಾಮಯ್ಯ ಮತ್ತು ಡಿ. ಕೆ. ಶಿವಕುಮಾರ್ ದೆಹಲಿಗೆ ತೆರಳಿದ್ದರು. ಎಐಸಿಸಿ ಪ್ರಧಾನ ಕಾರ್ಯರ್ಶಿ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಭೇಟಿ ಮಾಡಿದ್ದರು. ಅವರ ಜೊತೆ ಪತ್ರಿಕಾಗೋಷ್ಠಿಯನ್ನು ಸಹ ನಡೆಸಿದ್ದರು.
ಕರ್ನಾಟಕ ಬಿಜೆಪಿಯಲ್ಲಿ ಬೆಳವಣಿಗೆಗಳ ನಡುವೆಯೇ ಕಾಂಗ್ರೆಸ್ ನಾಯಕರ ದೆಹಲಿ ಭೇಟಿ ಕುತೂಹಲಕ್ಕೆ ಕಾರಣವಾಗಿದೆ. ರಣದೀಪ್ ಸುರ್ಜೇವಾಲಾ 5 ದಿನಗಳ ಪ್ರವಾಸಕ್ಕಾಗಿ ಜುಲೈ 22ರಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಜುಲೈ 31ರ ತನಕ ರಾಜ್ಯದಲ್ಲಿ ಪ್ರವಾಸ ನಡೆಸಲಿದ್ದಾರೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ












Click it and Unblock the Notifications