• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಒಟ್ಟಿಗೆ ರಾಹುಲ್ ಭೇಟಿಯಾದ ಡಿಕೆಶಿ, ಸಿದ್ದರಾಮಯ್ಯ!

|
Google Oneindia Kannada News

ಬೆಂಗಳೂರು, ಜುಲೈ 21; ನಾಯಕತ್ವ ಬದಲಾವಣೆ ವಿಚಾರದಲ್ಲಿ ಕರ್ನಾಟಕ ಬಿಜೆಪಿಯಲ್ಲಿ ಹಲವು ಬೆಳವಣಿಗೆ ನಡೆಯುತ್ತಿವೆ. ಈ ನಡುವೆಯೇ ಕಾಂಗ್ರೆಸ್ ನಾಯಕರು ದೆಹಲಿ ಪ್ರವಾಸದಲ್ಲಿದ್ದಾರೆ.

ಬುಧವಾರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಒಟ್ಟಿಗೆ ರಾಹುಲ್ ಗಾಂಧಿ ಭೇಟಿ ಮಾಡಿದರು. ಈ ಕುರಿತ ಚಿತ್ರವನ್ನು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

'ನಾವು ಜೊತೆಗಿದ್ದೇವೆ': ತನ್ನ, ಡಿಕೆಶಿ ನಡುವಿನ ಬಿರುಕು ಸುದ್ದಿ ನಿರಾಕರಿಸಿದ ಸಿದ್ದರಾಮಯ್ಯ'ನಾವು ಜೊತೆಗಿದ್ದೇವೆ': ತನ್ನ, ಡಿಕೆಶಿ ನಡುವಿನ ಬಿರುಕು ಸುದ್ದಿ ನಿರಾಕರಿಸಿದ ಸಿದ್ದರಾಮಯ್ಯ

ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರ ಜೊತೆಗೂಡಿ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರನ್ನು ಭೇಟಿಮಾಡಿ ಮಾತುಕತೆ ನಡೆಸಿದೆ ಎಂದು ಸಿದ್ದರಾಮಯ್ಯ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಸಂಪುಟ ವಿಸ್ತರಣೆ; ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಟ್ವೀಟ್ ಬಾಣ! ಸಂಪುಟ ವಿಸ್ತರಣೆ; ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಟ್ವೀಟ್ ಬಾಣ!

ದೆಹಲಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ್ದ ಡಿ. ಕೆ. ಶಿವಕುಮಾರ್, "ಕರ್ನಾಟಕ ಕಾಂಗ್ರೆಸ್‌ನಲ್ಲಿ ಯಾವುದೇ ಸಮಸ್ಯೆ ಇಲ್ಲ. ಸಾಮೂಹಿಕ ನಾಯಕತ್ವವಿದೆ. ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಇಲ್ಲ. ಸಿದ್ದರಾಮಯ್ಯ ಜೊತೆ ನನಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ" ಎಂದು ಸ್ಪಷ್ಟಪಡಿಸಿದ್ದರು.

ಬೆಣ್ಣೆನಗರಿಯಲ್ಲಿ ಸಿಎಂ ಡಿ. ಕೆ. ಶಿವಕುಮಾರ್ ಎಂಬ ಜೈಕಾರ! ಬೆಣ್ಣೆನಗರಿಯಲ್ಲಿ ಸಿಎಂ ಡಿ. ಕೆ. ಶಿವಕುಮಾರ್ ಎಂಬ ಜೈಕಾರ!

ಮುಂದಿನ ಮುಖ್ಯಮಂತ್ರಿ ಘೋಷಣೆ; ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು? ಎಂಬುದು ಬಹಳ ಚರ್ಚೆಯ ವಿಷಯವಾಗಿದೆ. ಸಿದ್ದರಾಮಯ್ಯ ಮತ್ತು ಡಿ. ಕೆ. ಶಿವಕುಮಾರ್ ಹೋದ ಕಡೆಯಲ್ಲಿ ಮುಂದಿನ ಮುಖ್ಯಮಂತ್ರಿ ಎಂಬ ಘೋಷಣೆ ಕೇಳಿಬರುತ್ತಿದೆ.

ಈ ವಿಚಾರ ರಾಜ್ಯ ಕಾಂಗ್ರೆಸ್‌ನಲ್ಲಿ ಬಹಳ ಚರ್ಚೆಗೆ ಕಾರಣವಾಗಿತ್ತು. ಬಿಜೆಪಿ ನಾಯಕರು ಇದೇ ವಿಚಾರ ಮುಂದಿಟ್ಟುಕೊಂಡು ಕಾಂಗ್ರೆಸ್ ನಾಯಕರ ವಿರುದ್ಧ ಟೀಕೆಗಳನ್ನು ಮಾಡಿದ್ದರು.

ಇಂತಹ ಸಂದರ್ಭದಲ್ಲಿ ಸಿದ್ದರಾಮಯ್ಯ ಮತ್ತು ಡಿ. ಕೆ. ಶಿವಕುಮಾರ್ ಒಟ್ಟಿಗೆ ದೆಹಲಿ ಪ್ರವಾಸವನ್ನು ಕೈಗೊಂಡಿದ್ದಾರೆ. ಇಂದು ಉಭಯ ನಾಯಕರು ಒಟ್ಟಿಗೆ ರಾಹುಲ್ ಗಾಂಧಿ ಭೇಟಿ ಮಾಡಿ ಹಲವಾರು ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ.

ಮಂಗಳವಾರ ಸಿದ್ದರಾಮಯ್ಯ ಮತ್ತು ಡಿ. ಕೆ. ಶಿವಕುಮಾರ್ ದೆಹಲಿಗೆ ತೆರಳಿದ್ದರು. ಎಐಸಿಸಿ ಪ್ರಧಾನ ಕಾರ್ಯರ್ಶಿ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಭೇಟಿ ಮಾಡಿದ್ದರು. ಅವರ ಜೊತೆ ಪತ್ರಿಕಾಗೋಷ್ಠಿಯನ್ನು ಸಹ ನಡೆಸಿದ್ದರು.

ಕರ್ನಾಟಕ ಬಿಜೆಪಿಯಲ್ಲಿ ಬೆಳವಣಿಗೆಗಳ ನಡುವೆಯೇ ಕಾಂಗ್ರೆಸ್ ನಾಯಕರ ದೆಹಲಿ ಭೇಟಿ ಕುತೂಹಲಕ್ಕೆ ಕಾರಣವಾಗಿದೆ. ರಣದೀಪ್ ಸುರ್ಜೇವಾಲಾ 5 ದಿನಗಳ ಪ್ರವಾಸಕ್ಕಾಗಿ ಜುಲೈ 22ರಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಜುಲೈ 31ರ ತನಕ ರಾಜ್ಯದಲ್ಲಿ ಪ್ರವಾಸ ನಡೆಸಲಿದ್ದಾರೆ.

English summary
Leader of opposition Siddaramaiah and KPCC president D. K. Shivakumar in New Delhi. On July 21 both leaders met Rahul Gandhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X