ಮೋದಿಯವರ 10 ವರ್ಷದ ಅವಧಿಯಲ್ಲಿ ದೇಶದ ಸಾಲ ಎಷ್ಟು ಗೊತ್ತಾ? ಸಿದ್ದರಾಮಯ್ಯ ಕೊಟ್ಟ ಲೆಕ್ಕಾ ಇಲ್ಲಿದೆ.

ಬೆಂಗಳೂರು, ಸೆಪ್ಟೆಂಬರ್‌ 13: ಮೋದಿಯವರ 10 ವರ್ಷದ ಅವಧಿಯಲ್ಲಿ ಭಾರತದ ಮೇಲಿನ ಸಾಲ 182 ಲಕ್ಷ ಕೋಟಿಯನ್ನು ಮೀರುತ್ತಿದೆ. ಹಿಂದೆ ಸಾಲದ ಮೊತ್ತ 53.11 ಲಕ್ಷ ಕೋಟಿ ಇದ್ದ ಸಾಲದ ಮೊತ್ತ ಈಗ ಕಳೆದ 10 ವರ್ಷದಲ್ಲಿ 182 ಲಕ್ಷ ಕೋಟಿ ರೂ.ಗೆ ತಲುಪಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಗ್ಯಾರಂಟಿ ಯೋಜನೆಗಳಿಗೆ 56 ಸಾವಿರ ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ. ರಾಜ್ಯದ ಸುಮಾರು 1.20 ಲಕ್ಷ ಕುಟುಂಬಗಳಿಗೆ ವಾರ್ಷಿಕವಾಗಿ 50 ರಿಂದ 60 ಸಾವಿರ ರೂ.ಗಳ ಆರ್ಥಿಕ ಸಹಾಯವನ್ನು ಗ್ಯಾರಂಟಿಗಳ ಮೂಲಕ ಒದಗಿಸಲಾಗುತ್ತಿದೆ. ದೇಶದ ಸ್ವಾತಂತ್ರ್ಯಕ್ಕೆ ದುಡಿದ ನೆಹರೂ ರವರು ಹಾಗೂ ಇಂದಿರಾಗಾಂಧಿ ಸೇರಿದಂತೆ ಹಲವು ನಾಯಕರು ದೇಶಕ್ಕಾಗಿ ದುಡಿದಿದ್ದಾರೆ. ನರೇಂದ್ರ ಮೋದಿ ಸುಳ್ಳು ಹೇಳುತ್ತಾರೆ ಎಂದು ಈ ಬಾರಿ ಮೋದಿಯವರಿಗ ವೋಟು ನೀಡಲಾಗಿದೆಯೇ ಎಂದು ಪ್ರಶ್ನಿಸಿದ್ದಾರೆ.

Siddaramaiah During Narendra Modi s 10-year Term Country s Debt Reached 182 Lakh Crores

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದವರ ಅನುದಾನವನ್ನು ಬೇರೆಯವರಿಗೆ ನೀಡಲಾಗಿದೆ ಎಂದು ಸುಳ್ಳು ನುಡಿದರು. ಆದರೆ 89.62 ಕೋಟಿ ಮೊತ್ತದ ಅವ್ಯವಹಾರವಾಗಿದ್ದು, ಅದರಲ್ಲಿ 56 ಕೋಟಿ ವಸೂಲು ಮಾಡಲಾಗಿದೆ. ಆದರೂ ಅಭಿವೃದ್ಧಿ ನಿಗಮಕ್ಕೆ ಈ ಮುಂಚೆ ನಿಗದಿಪಡಿಸಿರುವಂತೆ ಅನುದಾನವನ್ನು ನೀಡಿ, ಸಮುದಾಯದ ಅಭಿವೃದ್ಧಿಗೆ ಬಳಸಲಾಗುವುದು. ಎಸ್ ಸಿ ಎಸ್ ಪಿ / ಟಿಎಸ್ ಪಿ ಕಾನೂನನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ.ಈ ರೀತಿಯ ಜನಪರ ಕಾನೂನು ಬಿಜೆಪಿ ಆಡಳಿತದಲ್ಲಿರುವ ಯಾವುದೇ ರಾಜ್ಯದಲ್ಲಿ ಜಾರಿಯಾಗಿಲ್ಲ. ಬಿಜೆಪಿಯವರಿಗೆ ಕಾಂಗ್ರೆಸ್ ಸರ್ಕಾರವನ್ನು ಮೂದಲಿಸಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದವರ ಜನಸಂಖ್ಯೆಗೆ ಅನುಗುಣವಾಗಿ ಅವರ ಅಭಿವೃದ್ಧೀಗೆ ಪ್ರತ್ಯೇಕ ಅನುದಾನ ನೀಡುವ ಕಾನೂನು ಕಾಂಗ್ರೆಸ್ ಸರ್ಕಾರ ಎಂದರು.

ಬಿಜೆಪಿಯವರ ಬಡವರ ಹಾಗೂ ರೈತರ ವಿರೋಧಿಗಳಾಗಿದ್ದಾರೆ. ಬಿಜೆಪಿಯವರು ಕೈಗಾರಿಕೋದ್ಯಮಿಗಳ 16 ಲಕ್ಷ ಕೋಟಿ ರೂ.ಗಳ ಸಾಲವನ್ನು ಮನ್ನಾ ಮಾಡಿದರು. ಮೋದಿಯವರು ಬಂಡವಾಳಶಾಹಿಗಳ ಪರವಾಗಿದ್ದಾರೆ. ರಾಜ್ಯದ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಬಹಳಷ್ಟು ಹಗರಣಗಳು ನಡೆದಿವೆ. ಸುಳ್ಳು ಹೇಳುವ ಬಿಜೆಪಿ ಪಕ್ಷವನ್ನು ನಂಬಬೇಡಿ ಎಂದು ಜನರಿಗೆ ತಿಳಿಸಿದರು.

ಕಾಂಗ್ರೆಸ್ ಸರ್ಕಾರ ಸದಾ ಬಡಜನರ ಪರವಾಗಿದೆ. ಶಕ್ತಿ ಯೋಜನೆಯಡಿ 3.50 ಕೋಟಿ ಜನ ಉಚಿತವಾಗಿ ಪ್ರಯಾಣಿಸಿದ್ದು, ಇದುವರೆಗೆ 287 ಕೋಟಿ ಮಹಿಳೆಯರು ಯೋಜನೆಯ ಲಾಭ ಪಡೆದಿದ್ದಾರೆ. ನಾನು ಬಡವರ ಏಳಿಗೆಗಾಗಿಯೇ ಅಧಿಕಾರದಲ್ಲಿರುವುದು ಎಂದು ತಿಳಿಸಿರುವುದು. ಸರ್ಕಾರ ಹಾಲು ಉತ್ಪಾದಕರ , ದಲಿತರ, ಅಲ್ಪಸಂಖ್ಯಾತರ, ಬಡವರ ಪರವಾಗಿರಲಿದೆ. ನನ್ನ ಜೀವನ ತೆರೆದ ಪುಸ್ತಕವಿದ್ದಂತೆ.ರಾಜ್ಯದ ಜನರ ಅಭಿವೃದ್ಧಿಯಲ್ಲಿ ಯಾವುದೇ ರಾಜಿ ಇಲ್ಲ ಎಂದು ತಿಳಿಸಿದರು.

ಮಾಗಡಿ ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಸರ್ಕಾರ ಎಲ್ಲಾ ರೀತಿಯ ಸಹಕಾರ ಬೆಂಬಲವನ್ನು ಕೊಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.ಬೆಂಗಳೂರಿನ ಹೊರವಲಯದಲ್ಲಿರುವ ಮಾಗಡಿ ಬಹಳ ಪ್ರಮುಖ ಪಟ್ಟಣ. ಕೆಂಪೇಗೌಡರ ರಾಜಧಾನಿಯಾಗಿದ್ದ ನಗರ. ಮಾಗಡಿ ಅಭಿವೃದ್ಧಿಯಾಗಬೇಕು ಎನ್ನುವ ವಾದದಲ್ಲಿ ನನ್ನ ಸಹಮತವೂ ಇದೆ ಎಂದರು. ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಆಚರಣೆಗೆ ತಂದು ಪ್ರಾಧಿಕಾರವನ್ನೂ ರಚನೆ ಮಾಡಲಾಯಿತು. ಇದರ ಉದ್ದೇಶ ಕೆಂಪೇಗೌಡರನ್ನು ಎಲ್ಲರೂ ಸ್ಮರಿಸಬೇಕು ಎನ್ನುವುದಾಗಿತ್ತು. ಒಕ್ಕಲಿಗರ ನಾಯಕರು ಎಂದು ಹೇಳಿಕೊಳ್ಳುವವರು ಇದನ್ನು ಮಾಡಲಿಲ್ಲ. ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದ್ದು, ಅವರ ಜಯಂತ್ಯೋತ್ಸವವನ್ನು ಆಚರಿಸುವುದು ಸರ್ಕಾರದ ಕರ್ತವ್ಯ ಎಂದು ಭಾವಿಸಿ 2016-17 ರಲ್ಲಿ ಆಚರಣೆಗೆ ತಂದಿದ್ದ ನಮ್ಮ ಸರ್ಕಾರ ಎಂದರು.

ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ ಮೇಲೆ ಅಭಿವೃದ್ಧಿ ಕೆಲಸಗಳಿಗೆ ಹಣವಿಲ್ಲ ಎಂದು ವಿರೋಧ ಪಕ್ಷದವರು ಆರೋಪಿಸುತ್ತಿದ್ದಾರೆ. ಹಾಗಾದರೆ ಅಭಿವೃದ್ಧಿ ಕೆಲಸಗಳಿಗೆ 120 ಕೋಟಿ ರೂ.ಗಳನ್ನು ಅನುದಾನವನ್ನು ಏಕೆ ಮೀಸಲಿಡಲಾಗಿದೆ ಎಂದು ಪ್ರಶ್ನಿಸಿದರು. ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಾರೆ. ಹಾಲಿಗೆ ಬೆಲೆಏರಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದರು, ರೈತರಿಗೆ ಹಣ ಸೇರಬೇಡವೇ? ರೈತರಿಗೆ ಇದನ್ನು ಪ್ರಶ್ನಿಸಲು ಸಾಧ್ಯವಿಲ್ಲವೇ ಎಂದು ಪ್ರಶ್ನಿಸಿದರು.

ಹಾಲಿಗೆ 5.೦೦ ರೂ.ಗಳ ಪ್ರೋತ್ಸಾಹಧನ ಘೋಷಿಸಿದ್ದು ನಮ್ಮ ಸರ್ಕಾರ. ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೆ ತಂದು ರೈತರಿಗೆ ಅನುಕೂಲ ಮಾಡಿಕೊಡಲಾಗಿದೆ. ಏನೂ ಮಾಡದೇ ರೈತರ ಮಕ್ಕಳು ,ಮಣ್ಣಿನ ಮಕ್ಕಳು ಎನ್ನುತ್ತಾರೆ. ಅಭಿವೃದ್ಧಿಗಾಗಿ ಮೀಸಲಿಡಲಾಗಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+