ಡಿ.ಕೆ.ಶಿವಕುಮಾರ್‌ ವಿರುದ್ಧ ಹೈಕೋರ್ಟ್‌ ಮೆಟ್ಟಿಲೇರಿದ ಯತ್ನಾಳ್‌: ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು, ನವೆಂಬರ್ 28 : ಸರ್ಕಾರದ ತೀರ್ಮಾನವನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಲು ಎಲ್ಲರಿಗೂ ಹಕ್ಕಿದೆ. ಆದರೆ ಅಂತಿಮ ತೀರ್ಮಾನ ನ್ಯಾಯಾಲಯದ್ದೇ ಆಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಡಿ ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ವಾಪಸ್ ಪಡೆದಿರುವುದಕ್ಕೆ ಶಾಸಕ ಬಸವರಾಜ ಯತ್ನಾಳ್ ಅವರು ಉಚ್ಛನ್ಯಾಯಾಲಯದಲ್ಲಿ ದಾವೆ ಹೂಡಿರುವ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ರಾಜ್ಯ ಸರ್ಕಾರ ಡಿಕೆಶಿವಕುಮಾರ್ ಅವರ ವಿರುದ್ಧ ತನಿಖೆಗೆ ನೀಡಿರುವ ಅನುಮತಿ ಕಾನೂನು ಬಾಹಿರವಾಗಿದ್ದು, ಆದೇಶವನ್ನು ವಾಪಸ್ಸು ಪಡೆದಿದೆ ಎಂದರು.

Siddaramaiah: Everyone Has The Right To Go To Court

ನಿಗಮಮಂಡಳಿಗಳ ಅಧ್ಯಕ್ಷ ಸ್ಥಾನದ ನೇಮಕಾತಿ ಬಗ್ಗೆ ಗೃಹ ಸಚಿವರು ಅಸಮಧಾನಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅಧ್ಯಕ್ಷರ ನೇಮಕಾತಿಯಲ್ಲಿ ಯಾರ ಅಭಿಪ್ರಾಯವನ್ನು ಪಡೆಯಲಾಗಿಲ್ಲ. ಆಯ್ಕೆ ಪ್ರಕ್ರಿಯೆ ಇನ್ನೂ ಪ್ರಾಥಮಿಕ ಹಂತದಲ್ಲಿದೆ. ಆಯ್ಕೆ ಪಟ್ಟಿ ಇನ್ನೂ ಅಂತಿಮವಾಗಿಲ್ಲದಿರುವುದರಿಂದ ಈ ಬಗ್ಗೆ ಪ್ರತಿಕ್ರಿಯೆ ನೀಡುವುದು ಸರಿಯಲ್ಲ ಎಂದರು. ಅಲ್ಲದೇ ಶಾಲೆಗಳಿಗೆ ಗುಣಮಟ್ಟದ ಹಾಲಿನ ಪೂರೈಕೆಯಾಗುತ್ತಿಲ್ಲ ಎಂದು ಆರೋಪದ ಹಿನ್ನಲೆಯಲ್ಲಿ ಉತ್ತರಿಸುತ್ತಾ, ಸರ್ಕಾರ ಕೆಎಂಎಫ್ ನ ನಂದಿನಿ ಗುಣಮಟ್ಟದ ಹಾಲನ್ನು ಪೂರೈಸುತ್ತಿದೆ ಎಂದರು.

ತೆಲಂಗಾಣದಲ್ಲಿ ಕರ್ನಾಟಕದ ಸಾಧನೆ ಬಗ್ಗೆ ಮಾಡಿದ ಪ್ರಚಾರದ ಬಗ್ಗೆ ಕೇಂದ್ರ ಚುನಾವಣಾ ಆಯೋಗ ಆಕ್ಷೇಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆಗಳ ಪ್ರಚಾರಕ್ಕೆ ಕೇಂದ್ರ ಚುನಾವಣಾ ಆಯೋಗ ಆಕ್ಷೇಪ ವ್ಯಕ್ತಪಡಿಸಿದ್ದು, ಪ್ರಚಾರವನ್ನು ಕೈಬಿಡಲಾಗಿದೆ ಎಂದರು.

ರಾಜ್ಯ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದನ್ನು ಹಿಂಪಡೆದಿತ್ತು. ಈ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಇದೀಗ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಡಿಸಿಎಂ ಡಿ.ಕೆ.ಶಿ. ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಕಳೆದ ಗುರುವಾರ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಡಿ.ಕೆ.ಶಿವಕುಮಾರ್‌ ವಿರುದ್ಧ ಸಿಬಿಐ ಪ್ರಕರಣ ಸಂಬಂಧ ತೆಗೆದುಕೊಂಡ ನಿರ್ಧಾರದ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದರು. ಅಲ್ಲದೇ ತಾವು ಸರ್ಕಾರದ ಕ್ರಮವನ್ನು ಕೋರ್ಟ್‌ನಲ್ಲಿ ಪ್ರಶ್ನಿಸುವುದಾಗಿ ತಿಳಿಸಿದ್ದರು.

ಸಿಬಿಐ ತನಿಖೆಗೆ ಒಪ್ಪಿಗೆ ಹಿಂಪಡೆದ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮಧ್ಯಂತರ ಅರ್ಜಿಯನ್ನು ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ರಾಜ್ಯ ಸರ್ಕಾರದ ನಿರ್ಧಾರ ಕ್ರಮವಾಗಿಲ್ಲ. ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐಗೆ ನೀಡಲಾಗಿದ್ದಂತಹ ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮದ ಬಗ್ಗೆ ಸೂಕ್ತ ನಿರ್ದೇಶವನ್ನು ಸರ್ಕಾರಕ್ಕೆ ನೀಡುವಂತೆ ಕೋರಿದ್ದಾರೆ ಎಂದು ತಿಳಿದುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+