'ಕಾಂಗ್ರೆಸ್ ಪಕ್ಷ ಮತ ಕಳ್ಳತನ ಬಯಲು ಮಾಡಿದ ಸಿದ್ದರಾಮಯ್ಯ'
ಬೆಂಗಳೂರು, ಆಗಸ್ಟ್ 30: ಕಾಂಗ್ರೆಸ್ ಪಕ್ಷದ ಮತ ಕಳ್ಳತನವನ್ನ ಸಿಎಂ ಸಿದ್ದರಾಮಯ್ಯ ಅವರು ಬಯಲು ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಮತಗಳ್ಳತನ ಆಗಿದೆ ಎಂದು ಹೇಳಿದ್ದು, ಈ ಕುರಿತು ಜನತೆಗೆ ಉತ್ತರ ನೀಡಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.
1991 ರ ಲೋಕಸಭೆ ಚುನಾವಣೆಯಲ್ಲಿ ನನ್ನನ್ನು ಮೋಸದಿಂದ ಸೋಲಿಸಲಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದರು. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಆರ್ ಅಶೋಕ್ ಅವರು, "ಮತಗಳ್ಳತನ"ದ ಎಂಬ ಕಪೋಲಕಲ್ಪಿತ ನಾಟಕದ ಬಗ್ಗೆ ಸತ್ಯ ನುಡಿದಿದ್ದ ಮಾಜಿ ಸಚಿವ ಕೆ ಎನ್ ರಾಜಣ್ಣ ಅವರನ್ನು ಅತ್ಯಂತ ಅಗೌರವವಾಗಿ ಸಂಪುಟದಿಂದ ವಜಾ ಮಾಡಿದ್ದ ರಾಹುಲ್ ಗಾಂಧಿ ಅವರಿಗೆ, ಈಗ ಕಾಂಗ್ರೆಸ್ ಪಕ್ಷದ ಮೋಸವನ್ನು ಬಯಲು ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ, ಕಾಂಗ್ರೆಸ್ ಪಕ್ಷದಿಂದ ವಜಾ ಮಾಡುವ ಧೈರ್ಯ ಇದೆಯಾ? ಅಥವಾ ಪಕ್ಷದ ಪ್ರತಾಪ, ಶಿಸ್ತು ಕ್ರಮ ಏನಿದ್ದರೂ ದಲಿತ ನಾಯಕರ ಮೇಲೆ ಪ್ರಯೋಗ ಮಾಡಲು ಮಾತ್ರ ಸೀಮಿತನಾ? ಎಂದು ಪ್ರಶ್ನಿಸಿದರು.

2018ರಲ್ಲಿ ಸಿದ್ದರಾಮಯ್ಯನವರು ಬಾದಾಮಿಯಲ್ಲಿ ಹೇಗೆ ಮತ ಖರೀದಿ ಮೂಲಕ ಗೆದ್ದರು ಎಂದು ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ ಅವರು ಈಗಾಗಲೇ ಬಯಲು ಮಾಡಿದ್ದಾರೆ. ಪಂಚಾಯಿತಿ ಇಂದ ಪಾರ್ಲಿಮೆಂಟ್ ವರೆಗೆ ಕಾಂಗ್ರೆಸ್ ಪಕ್ಷದ ಏಕಚಕ್ರಾಧಿಪತ್ಯ ಇದ್ದ ಕಾಲದಲ್ಲಿ, "ಆಗೆಲ್ಲಾ ಇವಿಎಂ ಇರಲಿಲ್ಲ, ಒಬ್ರೋ ಇಬ್ರೋ ಕೂತ್ಕೊಂಡು ಒತ್ತು ಬುಡ್ರೋ ಅನ್ನೋರು" ಎಂದು ಕಾಂಗ್ರೆಸ್ ಪಕ್ಷ 60 ವರ್ಷ ಹೇಗೆ ಚುನಾವಣೆ ಗೆಲ್ಲುತ್ತಿತ್ತು ಎನ್ನುವುದನ್ನ ಗೃಹ ಸಚಿವ ಪರಮೇಶ್ವರ್ ಅವರು ಲೀಲಾಜಾಲವಾಗಿ ವಿವರಿಸಿದ್ದಾರೆ.
ನಮ್ಮ ದೇಶದಲ್ಲಿ ಮತಗಳ್ಳತನ, ಚುನಾವಣಾ ಅಕ್ರಮದ ಪಿತಾಮಹ ಯಾರಾದರೂ ಇದ್ದರೆ ಅದು ಕಾಂಗ್ರೆಸ್ ಪಕ್ಷ ಮತ್ತು ನೆಹರೂ-ಗಾಂಧಿ ಕುಟುಂಬ. ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ಅವರು ಮಾತನಾಡಿದರೆ ಅದು ಭೂತದ ಬಾಯಲ್ಲಿ ಭಗವದ್ಗೀತೆ ನುಡಿದಂತೆ. ಸಿಎಂ ಸಿದ್ದರಾಮಯ್ಯನವರು ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಮತಗಳ್ಳತನ ಆಗಿದೆ ಎಂದು ಹೇಳಿದ್ದು, ಈಗ ಅವರೇ ಹೋರಾಟಕ್ಕೆ ಸೇರಿದ್ದಾರೆ. ಕಾಂಗ್ರೆಸ್ ಪರವಾಗಿ ಅವರು ಹೇಗೆ ಹೋರಾಡುತ್ತಾರೆ ಎಂದು ಅರ್ಥವಾಗುತ್ತಿಲ್ಲ. ಇದರಿಂದಾಗಿ ಕಾಂಗ್ರೆಸ್ ಮಾಡುತ್ತಿರುವ ಹೋರಾಟ ಸುಳ್ಳು ಎಂದು ಸಾಬೀತಾಗಿದೆ. ಬಿಜೆಪಿ ಮೇಲೆ ಮಾಡಿರುವ ಸುಳ್ಳು ಎಂದು ಸಾಬೀತಾಗಿದೆ. ಮತಗಳ್ಳತನ ಕಾಂಗ್ರೆಸ್‌ನ ಸಂಸ್ಕೃತಿಯಾಗಿದೆ ಎಂದು ತಿಳಿದುಬಂದಿದೆ. ಸಿ.ಎಂ.ಇಬ್ರಾಹಿಂ ಬಾದಾಮಿ ಕ್ಷೇತ್ರದಲ್ಲಿ ಮತ ಖರೀದಿಸಿದ್ದೇನೆಂದು ಹೇಳಿದ್ದಾರೆ. ಈ ಬಗ್ಗೆ ಅವರು ಉತ್ತರ ನೀಡಬೇಕು ಎಂದು ಆಗ್ರಹಿಸಿದರು.
ಡಿ.ಕೆ.ಶಿವಕುಮಾರ್ ಒಬ್ಬಂಟಿಯಾಗಿ ಬಿಹಾರ ಚುನಾವಣೆಗೆ ಹೋದರೆ, ಸಿಎಂ ಸಿದ್ದರಾಮಯ್ಯ ತಂಡ ಬೇರೆ ಕಡೆ ಚುನಾವಣೆಗೆ ಹೋಗಿದೆ. ಡಿ.ಕೆ.ಶಿವಕುಮಾರ್ ಬಂಡೆಯಂತೆ ಆಗುತ್ತಿದ್ದಾರೆ. ಇವರು ಚಾಮುಂಡಿ ಬೆಟ್ಟವನ್ನು ಹಿಂದೂಗಳ ಆಸ್ತಿಯಲ್ಲ ಎನ್ನುವುದಾದರೆ, ಈ ದೇವಸ್ಥಾನಕ್ಕೆ ಯಾವಾಗ ಮುಲ್ಲಾಗಳನ್ನು ಹಾಗೂ ಪಾದ್ರಿಗಳನ್ನು ನೇಮಿಸುತ್ತಾರೆ? ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂಗಳ ಕಗ್ಗೊಲೆಯಾಗಿದೆ. ಅವರು ಯಾವಾಗಲೂ ಹಿಂದೂ ವಿರೋಧಿ ಎಂದರು.












Click it and Unblock the Notifications