Muda Scam: ಮುಡಾ ಮೇಲೆ ಇಡಿ ಕಣ್ಣು: ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ಕುತ್ತು?
ಬೆಂಗಳೂರು, ಜನವರಿ 18: ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದ ತನಿಖೆ ಮತ್ತಷ್ಟು ಬಿಗಿಯಾಗುತ್ತಿದೆ. ಜಾರಿ ನಿರ್ದೇಶನಾಲಯ ಪ್ರಕರಣದ ಸಂಬಂಧ ಒಟ್ಟು 300 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿರುವುದಾಗಿ ತಿಳಿಸಿದೆ.
ಈ ಕುರಿತು ED ಟ್ವೀಟ್ ಮೂಲಕ ಅಕ್ರಮ ಹಣ ವರ್ಗಾವಣೆ ತಡೆ (ಪಿಎಂಎಲ್ಎ) ಕಾಯ್ದೆಯಡಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ. ತನಿಖಾ ಸಂಸ್ಥೆ ವಶಕ್ಕೆ ಪಡೆದಿರುವ 142 ಸ್ಥಿರಾಸ್ತಿಯ ಒಟ್ಟು ಮೌಲ್ಯ 300 ಕೋಟಿ ರೂಪಾಯಿಗಳಾಗಿವೆ.

ಸಿಎಂ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ದಾಖಲಾಗಿದ್ದ ಮುಡಾ ನಿವೇಶನ ಹಂಚಿಕೆ ಹಗರಣ ಸಂಬಂಧ ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆ ಇದೆ.
ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಡಿ ಅಧಿಕಾರಿಗಳಿಂದ ಯಾವುದೇ ಕ್ಷಣದಲ್ಲಾದರೂ ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ಇಡಿ ಅಧಿಕಾರಿಗಳು ನೋಟಿಸ್ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿದ್ದ ಇಡಿ ಅಧಿಕಾರಿಗಳು ನಿನ್ನೆ ಪತ್ರಿಕ ಪ್ರಕಟಣೆ ಹೊರಡಿಸಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ 300 ಕೋಟಿ ಮೌಲ್ಯದ ಹಣ ಜಪ್ತಿ ಮಡಿಕೊಂಡಿದ್ದು, ಈ ಹಗರಣದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಗಳು, ರಾಜಕೀಯ ನಾಯಕರು ಸೇರಿ ಬೇರೆ ಬೇರೆ ವ್ಯಕ್ತಿಗಳು ಬೇನಾಮಿ ನಿವೇಶನ ಪಡೆದುಕೊಂಡಿರುವ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿತ್ತು. ಹಾಗಾಗಿ ಇದೀಗ ಯಾವುದೇ ಕ್ಷಣದಲ್ಲಾದರೂ ಕೂಡ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಇನ್ನೂ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ದಾಖಲಾಗಿದ್ದ ಮುಡಾ ನಿವೇಶನ ಹಂಚಿಕೆ ಹಗರಣ ಸಂಬಂಧ ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿಗಳ ಹೆಸರಿನಲ್ಲಿ, ಏಜೆಂಟ್‌ಗಳಾಗಿ ಕೆಲಸ ಮಾಡುವವರ ಹೆಸರಿನಲ್ಲೂ ಸ್ಥಿರಾಸ್ತಿ ನೋಂದಣಿಯಾಗಿದ್ದವು. ಸ್ನೇಹಮಯಿ ಕೃಷ್ಣ ದೂರಿನನ್ವಯ ತನಿಖೆ ನಡೆಸಿದ್ದ ED ಈಗ ಆಸ್ತಿ ಜಪ್ತಿ ಮಾಡಿದೆ.
ಜಾರಿ ನಿರ್ದೇಶನಾಲಯ 2002 ರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ನಿಬಂಧನೆಗಳ ಅಡಿಯಲ್ಲಿ ರೂ. 300 ಕೋಟಿ ಮಾರುಕಟ್ಟೆ ಮೌಲ್ಯದ 142 ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಈ ಆಸ್ತಿಗಳನ್ನು ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಏಜೆಂಟ್‌ಗಳಾಗಿ ಕೆಲಸ ಮಾಡುತ್ತಿರುವ ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ಇಡಿ ಹೇಳಿದೆ.
ಮುಡಾ ಸ್ವಾಧೀನಪಡಿಸಿಕೊಂಡ 3 ಎಕರೆ 16 ಗುಂಟೆ ಭೂಮಿಗೆ ಬದಲಾಗಿ ತಮ್ಮ ಪತ್ನಿ ಬಿ.ಎಂ. ಪಾರ್ವತಿ ಅವರ ಹೆಸರಿನಲ್ಲಿರುವ 14 ನಿವೇಶನಗಳ ಪರಿಹಾರವನ್ನು ಪಡೆಯಲು ಸಿದ್ದರಾಮಯ್ಯ ತಮ್ಮ ರಾಜಕೀಯ ಪ್ರಭಾವವನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೇ ವಿಪಕ್ಷಗಳು ಮುಡಾ ಹಗರಣದ ಸಂಬಂಧ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನ ನೀಡಬೇಕು ಎಂದು ಆಗ್ರಹಿಸಿವೆ.












Click it and Unblock the Notifications