Get Updates
Get notified of breaking news, exclusive insights, and must-see stories!

Siddaramaiah Love Story: ಪ್ರೀತಿಯಲ್ಲಿ ಬಿದ್ದ ಟಗರು: ಸಿದ್ದರಾಮಯ್ಯನನ್ನೇ ಒಲ್ಲೆ ಅಂದ ಹುಡುಗಿ

ಮೈಸೂರು ಮೇ 24: ನನಗೂ ಅಂತರ್ಜಾತಿ ವಿವಾಹ ಆಗೋ ಆಸೆ ಇತ್ತು. ನಾನು ಕಾನೂನು ಓದುವಾಗ ಬೇರೆ ಜಾತಿ ಸ್ನೇಹಿತೆಯನ್ನು ಮದುವೆ ಆಗಬೇಕು ಎಂದುಕೊಂಡಿದ್ದೆ. ಆದರೆ ಆ ಹುಡುಗಿ ಮದುವೆಗೆ ಒಪ್ಪಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಕಾಲೇಜು ದಿನಗಳಲ್ಲಿ ತಮ್ಮ ಒನ್​ಸೈಡ್​ ಲವ್​ ಸ್ಟೋರಿಯನ್ನ ನೆನೆಪಿಸಿಕೊಂಡಿದ್ದಾರೆ.

ಜನ ಸ್ಪಂದನ ಮತ್ತು ಮಾನವ ಮಂಟಪ ಆಯೋಜಿಸಿದ್ದ ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆಯ ವೆಬ್ ಸೈಟ್ ಉದ್ಘಾಟನೆ ಮಾಡಿ ಮಾತನಾಡಿದ ಸಿದ್ದರಾಮಯ್ಯ ಅವರು, ಬಳಿಕ ಅದಕ್ಕೆ ಸ್ಪಷ್ಟನೆ ನೀಡಿದ ಸಿಎಂ. ಅದರ ಬಗ್ಗೆ ತಪ್ಪುತಪ್ಪಾಗಿ ಅಂದುಕೊಳ್ಳಬೇಡಿ. ಹುಡುಗಿ ಜೊತೆ ಸ್ನೇಹ ಇತ್ತು ಅಷ್ಟೇ ಎಂದು ತಮ್ಮ ಕಾಲೇಜು ದಿನದ ನೆನಪು ಮೆಲುಕು ಹಾಕಿದರು. ಅಂತರ್ಜಾತಿ ವಿವಾಹಗಳ ಜತೆಗೆ ಮಹಿಳೆಯರಿಗೆ ಹಾಗೂ ಎಲ್ಲಾ ವರ್ಗದ ದುರ್ಬಲರಿಗೆ ಆರ್ಥಿಕ ಶಕ್ತಿ ಸಿಕ್ಕಾಗ ಸಮಾಜದಲ್ಲಿ ಚಲನೆಯುಂಟಾಗುತ್ತದೆ. ಸಮ ಸಮಾಜದ ಆಶಯ ಈಡೇರಲು, ಜಾತಿ ನಾಶವಾಗಲು ಸಾಧ್ಯ ಎಂದರು.

Siddaramaiah First Time Reveals His College Love Story In Public

ಅಂತರ್ಜಾತಿ ವಿವಾಹಗಳಿಂದ ಜಾತಿ ನಾಶ ಸಾಧ್ಯ. ನಮ್ಮ ಸರ್ಕಾರ ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದೇವೆ. ಅಂಬೇಡ್ಕರ್ ಮತ್ತು ಕುವೆಂಪು ಅವರ ಆಶಯದಂತೆ ಸಮ ಸಮಾಜ ನಿರ್ಮಾಣ ಆಗಬೇಕಾದರೆ ಅಂತರ್ಜಾತಿ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು. ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಜಾತಿ ವ್ಯವಸ್ಥೆ , ವರ್ಣಾಶ್ರಮದಿಂದ ಮನುಷ್ಯ ಮನುಷ್ಯನನ್ನು ಶೋಷಿಸುವ ಅಸಮಾನತೆ ಸೃಷ್ಟಿಯಾಯಿತು. ಅಸಮಾನತೆ ಪೋಷಿಸುವ ಜಾತಿ ವ್ಯವಸ್ಥೆ ಅಳಿಸಲು ಬುದ್ಧ, ಬಸವ, ಅಂಬೇಡ್ಕರ್ ರೀತಿ ಹಲವು ಮಹನೀಯರು ಶ್ರಮಿಸಿದರು, ಅತ್ಯಂತ ಕಡು ಬಡವ ಮೇಲ್ಜಾತಿಯವರನ್ನು ನಾವು ಬುದ್ದಿ, ಸ್ವಾಮಿ ಅಂತ ಗೌರವಿಸುತ್ತೇವೆ. ಅದೇ ಅನೂಲಸ್ಥ ಕೆಳ ಜಾತಿಯವರನ್ನು ಏಕವಚನದಲ್ಲಿ ಅಗೌರವದಿಂದ ಕರೆಯುತ್ತೇವೆ. ಇದೇ ಗುಲಾಮಗಿರಿ ಮನಸ್ಥಿತಿ. ಈ ಮನಸ್ಥಿತಿಯನ್ನು ಅಳಿಸಲು ಬುದ್ಧ, ಬಸವ ಅಂಬೇಡ್ಕರ್ ಸೇರಿ ಹಲವರು ಶ್ರಮಿಸಿದರು.

ಪಟ್ಟಭದ್ರ ಹಿತಾಸಕ್ತಿಗಳು ಬುದ್ದ, ಬಸವ, ಅಂಬೇಡ್ಕರ್, ಗಾಂಧಿ ಕಾಲದಲ್ಲೂ ಇದ್ದರು. ಈಗಲೂ ಇದ್ದಾರೆ. ಇವರು ಸಮಾಜದ ಪ್ರಗತಿಯ ಶತ್ರುಗಳು. ಆದರೆ ನಮ್ಮ ಸಂವಿಧಾನ ಎಲ್ಲಾ ಜಾತಿ ಸಮುದಾಯಗಳಿಗೂ ಸಮಾನ ಅವಕಾಶ ಕಲ್ಪಿಸುತ್ತದೆ. ಆದ್ದರಿಂದ ಸಂವಿಧಾನ ಜ್ಞಾನ ಸರ್ವರಿಗೂ ಅಗತ್ಯ ಎಂದರು.

ತಾವೊಬ್ಬರೇ ಶ್ರೇಷ್ಠರು ಎಂದು ಕರೆಸಿಕೊಳ್ಳುವವರು ಬಹಳ ಪುಕ್ಕಲರಾಗಿರುತ್ತಾರೆ. ಶ್ರೇಷ್ಠತೆಯ ವ್ಯಸನ ಹೊಂದಿದ್ದ ಹಿಟ್ಲರ್ ಲಕ್ಷಾಂತರ ಮನುಷ್ಯರ ಕೊಲೆಗೆ ಕಾರಣರಾದರು. ಪುಕ್ಕಲರು ಮಾತ್ರ ತಾವೊಬ್ಬರೇ ಶ್ರೇಷ್ಠರು ಎಂದು ಬಿಂಬಿಸಿಕೊಳ್ಳಲು ಒದ್ದಾಡುತ್ತಾರೆ ಎಂದು ವ್ಯಂಗ್ಯವಾಡಿದರು.

ನಾವುಗಳು ಬುದ್ಧ-ಬಸವ-ಕುವೆಂಪು ಆಗಲು ಸಾಧ್ಯವಿಲ್ಲ. ಆದರೆ ಇವರ ಹಾದಿಯಲ್ಲಾದರೂ ನಾವು ನಡೆಯಬೇಕು. ಬಸವಣ್ಣರನ್ನು ಪೂಜಿಸುತ್ತಾ ಯಾವ ಜಾತಿ ಎಂದು ಜಾತಿವಾದ ಮಾಡುವುದು ತಪ್ಪು. ವಿದ್ಯಾವಂತರೇ ಹೆಚ್ವು ಜಾತಿವಾದಿಗಳಾಗುತ್ತಿರುವುದು ದುರಂತದ ಸಂಗತಿ. ಆದ್ದರಿಂದ ವೈಚಾರಿಕತೆ ಮತ್ತು ಮಾನವೀಯತೆ ಇರುವ ಶಿಕ್ಷಣ ವ್ಯವಸ್ಥೆ ರೂಪಿಸಬೇಕಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ದೇವರು ಯಾರ ಹಣೆಯಲ್ಲೂ ತಾರತಮ್ಯ, ಬಡತನವನ್ನು ಬರೆಯುವುದಿಲ್ಲ. ಹೀಗೆ ಬರೆದವರನ್ನು ದೇವರು ಎಂದು ಜನ‌ ಒಪ್ಪುವುದಿಲ್ಲ. ಅಂಬೇಡ್ಕರ್, ಬುದ್ಧ ಎಲ್ಲರೂ ಹಣೆಬರಹ ಎನ್ನುವ ಮೌಡ್ಯವನ್ನು ಅಳಿಸಿ ವೈಚಾರಿಕತೆ ಬೆಳೆಸಲು ಯತ್ನಿಸಿದರು. ಆದ್ದರಿಂದ ಅಂಬೇಡ್ಕರ್ ಅವರು ಮೌಡ್ಯವಿಲ್ಲದ ಬೌದ್ಧ ಧರ್ಮವನ್ನು ಸ್ವೀಕರಿಸಿದರು ಎಂದರು. ಜಾತಿ ವ್ಯವಸ್ಥೆ ನೀರಿನ ಬಾವಿಗೆ ಬಿದ್ದ ಕಸದಂತೆ. ಕೊಡದಲ್ಲಿ ನೀರು ಸೇದುವಾಗ ಕಸ ಪಕ್ಕಕ್ಕೆ ಸರಿಯುತ್ತದೆ. ನೀರು ಸೇದಿದ ಮೇಲೆ ಮತ್ತೆ ಕಸ ತುಂಬಿಕೊಳ್ಳುತ್ತದೆ. ಆದ್ದರಿಂದ ಕಸವನ್ನೇ ನೀರಿನಿಂದ ತೆಗೆದು ಹೊರಗೆ ಹಾಕಿದರೆ ಜಾತಿ ವ್ಯವಸ್ಥೆ ಮತ್ತು ಅಸಮಾನತೆ ಹೋಗುತ್ತದೆ ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+