Siddaramaiah: 2028 ಮೇ 28ರ ವರೆಗೂ ಸಿದ್ದರಾಮಯ್ಯನೇ ಮುಖ್ಯಮಂತ್ರಿ..! ಏನಿದು ಪತ್ರದ ಸೀಕ್ರೆಟ್?
ಬೆಂಗಳೂರು: ಡಿ. ದೇವರಾಜು ಅರಸು ಅವರ ದಾಖಲೆ ಮುರಿದು ರಾಜ್ಯದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾತ್ರರಾಗಿದ್ದಾರೆ. ಇತ್ತ ಕೈ ಪಾಳಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆಯಾಗುತ್ತಿದ್ದು, ಕಾಂಗ್ರೆಸ್ ಹೈಕಮಾಂಡ್ ಗೆ ನಾಯಕತ್ವ ಬದಲಾವಣೆಯೇ ದೊಡ್ಡ ತಲೆಬಿಸಿಯಾಗಿದೆ.
ಸದ್ಯ ರಾಜ್ಯದಲ್ಲಿ ಚರ್ಚೆಯಾಗುತ್ತಿರುವ ಪವರ್ ಶೇರಿಂಗ್ ಒಪ್ಪಂದ ಚರ್ಚೆ ಕೋಲಾಹಲವನ್ನೇ ಸೃಷ್ಟಿಸಿತು. ಮುಖ್ಯಮಂತ್ರಿ ಕುರ್ಚಿ ಕಾದಾಟದ ಕಿಚ್ಚು ಬೂದಿ ಮುಚ್ಚಿದ ಕೆಂಡದಂತಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಬರೆದ ಅಭಿನಂದನ ಪತ್ರ ಭಾರೀ ಚರ್ಚೆಗೆ ಕಾರಣವಾಗಿದೆ. ಇನ್ನೂ ಸಿದ್ದರಾಮಯ್ಯ ಅವರು ದೇವರಾಜು ಅರಸು ದಾಖಲೆ ಸರಿಗಟ್ಟಿದ ದಿನವೇ ಪೂರ್ಣಾವಧಿ ಸಿಎಂ ವಿಚಾರ ಮುನ್ನಲೆಗೆ ಬಂದಿದ್ದು, 2028ರ ವರೆಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಎಂಬ ವಿಶ್ವಾಸವನ್ನ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ವ್ಯಕ್ತಪಡಿಸಿದ್ದಾರೆ.

ಬಸವರಾಜ ರಾಯರೆಡ್ಡಿ ಬರೆದ ಪತ್ರದಲ್ಲಿ ಏನಿದೆ?
ಕರ್ನಾಟಕದ ಸಾಮಾಜಿಕ ನ್ಯಾಯ ಹಾಗೂ ಜನಪರ ಸರ್ವಾಂಗೀಣ ಅಭಿವೃದ್ಧಿ ಪರಂಪರೆಯನ್ನು ಸಮರ್ಥವಾಗಿ ಮುಂದುವರೆಸುತ್ತಿರುವ ನಿಮ್ಮ ದೂರದೃಷ್ಟಿಯ ನಾಯಕತ್ವಕ್ಕೆ ಅಭಿನಂದನೆಗಳು ಸಲ್ಲಿಸುತ್ತಾ, ಕರ್ನಾಟಕದ ರಾಜಕೀಯ ಇತಿಹಾಸವು ಜನಪರ ಆಡಳಿತ, ಸಾಮಾಜಿಕ ನ್ಯಾಯ ಹಾಗೂ ಸಂವಿಧಾನಾತ್ಮಕ ಸಮಾನತೆಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ನಾಯಕರ ದಿಟ್ಟ ಹೋರಾಟಗಳಿಂದ ರೂಪುಗೊಂಡ ಸುವರ್ಣ ಪರಂಪರೆಯನ್ನು ಹೊಂದಿದೆ. ಶೋಷಿತರು, ಹಿಂದುಳಿದವರು ಮತ್ತು ಸಮಾಜದ ಅಂಚಿನಲ್ಲಿರುವ ಸಮುದಾಯಗಳ ಪರವಾಗಿ ಧೈರ್ಯವಾಗಿ ನಿಂತ ನಾಯಕರಿಂದಲೇ ಈ ನಾಡಿನ ಪ್ರಗತಿಪರ ರಾಜಕೀಯ ಸಂಸ್ಕೃತಿ ಬೆಳೆದಿದೆ.
ಆ ಪರಂಪರೆಯಲ್ಲಿ ಅಚ್ಚಳಿಯದ ಗುರುತು ಮೂಡಿಸಿದ ಮಹಾನ್ ನಾಯಕರಲ್ಲಿ ಸನ್ಮಾನ್ಯ ಶ್ರೀ ದಿವಂಗತ ದೇವರಾಜ ಅರಸು ಅವರು ಅಗ್ರಗಣ್ಯರು. ಅವರು 20-03-1972 ರಿಂದ 31-12-1977 ರವರೆಗೆ ಹಾಗೂ 28-02-1978 ರಿಂದ 07-01-1980 ರವರೆಗೆ ಒಟ್ಟಾರೆ 2792 ದಿನಗಳ ಕಾಲ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿ, ಭೂ ಸುಧಾರಣೆ, ಸಾಮಾಜಿಕ ನ್ಯಾಯ, ಹಿಂದುಳಿದ ವರ್ಗಗಳ ಉನ್ನತಿ ಮತ್ತು ಶೋಷಿತರ ಸಬಲೀಕರಣದ ಮೂಲಕ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಅಮರ ಅಧ್ಯಾಯವೊಂದನ್ನು ರಚಿಸಿದರು.
ಅದಲ್ಲದೆ ಕರ್ನಾಟಕ ರಾಜ್ಯವನ್ನು ಪ್ರಗತಿಪರ ಚಿಂತನೆಯತ್ತ ತರುವುದರಲ್ಲಿ ಹಿಂದಿನ ಮುಖ್ಯಮಂತ್ರಿಗಳಾದ ಶ್ರೀಯುತ ಕೆಂಗಲ್ ಹನುಮಂತಯ್ಯ ,ಶ್ರೀಯುತ ನಿಜಲಿಂಗಪ್ಪ, ಶ್ರೀಯುತ ರಾಮಕೃಷ್ಣ ಹೆಗಡೆ ಇವರುಗಳ ವಿಶಾಲ ದೃಷ್ಟಿಕೋನದ ವಿಚಾರಗಳು ಹಾಗೂ ಪ್ರಾಮಾಣಿಕ ಚಿಂತನೆಗಳು ನಮ್ಮ ಮುಂದೆ ಇಂದಿಗೂ ಜೀವಂತ ಇರುತ್ತವೆ
ಅದೇ ಸಾಮಾಜಿಕ ನ್ಯಾಯ ತಾತ್ವಿಕ ಮತ್ತು ರಾಜಕೀಯ ಪರಂಪರ ಮತ್ತು ಸರ್ವಾಂಗೀಣ ಅಭಿವೃದ್ಧಿ ಚಿಂತನೆಗಳನ್ನು ಸಮಕಾಲೀನ ಅಗತ್ಯಗಳಿಗೆ ತಕ್ಕಂತೆ ಮುಂದುವರೆಸಿಕೊಂಡು, ಕರ್ನಾಟಕದ ಇತಿಹಾಸಕ್ಕೆ ಹೊಸ ಮೈಲಿಗಲ್ಲು ಸ್ಥಾಪಿಸಿ ನೀವು 13-05-2013 ರಿಂದ 15-05-2018 ರವರೆಗೆ ಹಾಗೂ 20-05-2023 ರಿಂದ 06-01-2026 ರವರೆಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು, ಸುದೀರ್ಘ ಮತ್ತು ಸಾರ್ಥಕ ಆಡಳಿತದ ಮೂಲಕ ಚಾರಿತ್ರಿಕ ದಾಖಲೆ ನಿರ್ಮಿಸುತ್ತಿರುವುದು ರಾಜ್ಯದ ಜನತೆಗೆ ಅಪಾರ ಹೆಮ್ಮೆಯ ವಿಷಯವಾಗಿದೆ. ಹಾಗೂ ಮುಂದಿನ ಎರಡುವರೆ ವರ್ಷಗಳ ಕಾಲ ಅಂದರೆ 28 ಮೇ 2028 ರವರೆಗೆ ಈ ರಾಜ್ಯದ ಮುಖ್ಯಮಂತ್ರಿಗಳಾಗಿ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸುತ್ತಿರಿ ಎಂದು ನನ್ನ ನಂಬಿಕೆಯಾಗಿದೆ.
ನಿಮ್ಮ ಪ್ರಾಮಾಣಿಕ ಹಾಗೂ ಪಾರದರ್ಶಕ ಆಡಳಿತವು ಸ್ಪಷ್ಟವಾಗಿ ಜನಪರ, ಸಂವಿಧಾನಬದ್ಧ ಮತ್ತು ಸಾಮಾಜಿಕ ನ್ಯಾಯ ಕೇಂದ್ರಿತವಾಗಿದೆ. ರಾಜ್ಯದ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಆರ್ಥಿಕವಾಗಿ ಹಿಂದುಳಿದ ಜನಾಂಗಕ್ಕೆ ಯಾವುದೇ ಧರ್ಮ ಜಾತಿ ಭೇದವಿಲ್ಲದೆ ಅನ್ನಭಾಗ್ಯ, ಕ್ಷೀರಭಾಗ್ಯ, ವಿದ್ಯಾಸಿರಿ, ಇಂದಿರಾ ಕ್ಯಾಂಟೀನ್, ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ ಹಾಗೂ ರೈತ ಸಮುದಾಯಕ್ಕೆ ಮಹತ್ವಾಕಾಂಕ್ಷಿ ಯೋಜನೆಗಳ ಮೂಲಕ ಬಡವರು, ಮಹಿಳೆಯರು, ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಯುವಜನತೆಗೆ ಆರ್ಥಿಕ ಭದ್ರತೆ ಮತ್ತು ಸಾಮಾಜಿಕ ಗೌರವವನ್ನು ಒದಗಿಸುವಲ್ಲಿ ನಿಮ್ಮ ನಿಮ್ಮ ಪ್ರಾಮಾಣಿಕ ವಿಚಾರಗಳು ಮಹತ್ವದ ಪಾತ್ರ ವಹಿಸಿದೆ.
ಈ ಯೋಜನೆಗಳು ಕರ್ನಾಟಕವನ್ನು ನಿಜಾರ್ಥದಲ್ಲಿ ಕಲ್ಯಾಣರಾಜ್ಯದ ಮಾದರಿಯಾಗಿ ರೂಪಿಸುವ ದಿಟ್ಟ ರಾಜಕೀಯ ಸಂಕಲ್ಪದ ಪ್ರತಿಬಿಂಬಗಳಾಗಿವೆ. ನಿಮ್ಮ ಆಡಳಿತದಲ್ಲಿ ಪಾರದರ್ಶಕತೆ, ಹಣಕಾಸು ಶಿಸ್ತು, ಸಂವಿಧಾನದ ಮೌಲ್ಯಗಳಿಗೆ ಅಚಲ ನಿಷ್ಠೆ ಹಾಗೂ ಜಾತಿ-ಧರ್ಮ-ಭಾಷೆಗಳ ಅತೀತವಾಗಿ ಎಲ್ಲರನ್ನು ಒಟ್ಟಿಗೆ ಕೊಂಡೊಯ್ಯುವ ಸಮನ್ವಯದ ರಾಜಕಾರಣವು ನಿಮ್ಮ ನಾಯಕತ್ವದ ವಿಶಿಷ್ಟ ಗುರುತುಗಳಾಗಿವೆ.ನಿಮ್ಮ ಸಮಾಜಮುಖಿ ಮತ್ತು ಪ್ರಗತಿಪರ ದೃಷ್ಟಿಕೋನಕ್ಕೆ ಸಮಕಾಲೀನ ರಾಜಕೀಯ ರೂಪ ನೀಡಿದ ನಾಯಕರೆಂದು ನಿಮ್ಮನ್ನು ಗೌರವದಿಂದ ಮುಂದಿನ ಇತಿಹಾಸ ಪುಟಗಳಲ್ಲಿ ಸ್ಮರಿಸುವುದು ನಿಶ್ಚಿತ.
ಈ ಹಿನ್ನೆಲೆಯಲ್ಲಿ, ಕರ್ನಾಟಕದ ಕೋಟ್ಯಂತರ ಜನತೆಯ ಪರವಾಗಿ, ನಿಮ್ಮ ದೂರದೃಷ್ಟಿಯ ನಾಯಕತ್ವಕ್ಕೆ, ಜನಪರ ನೀತಿಗಳಿಗೆ ಹಾಗೂ ರಾಜ್ಯವನ್ನು ಸಮಾನತೆ, ಸೌಹಾರ್ದ ಮತ್ತು ಸಾಮಾಜಿಕ ನ್ಯಾಯದ ದಾರಿಯಲ್ಲಿ ದಿಟ್ಟವಾಗಿ ಮುನ್ನಡೆಸುತ್ತಿರುವ ನಿಮ್ಮ ಅವಿರತ ಸೇವೆಗೆ ಗೌರವಪೂರ್ವಕ ಹಾಗೂ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ನಿಮ್ಮ ಆಡಳಿತವು ಮುಂದಿನ ಪೀಳಿಗೆಗಳಿಗೆ ದಾರಿದೀಪವಾಗಲಿ.
ಕರ್ನಾಟಕವು ಸರ್ವಾಂಗೀಣ ಅಭಿವೃದ್ಧಿ, ಸಾಮಾಜಿಕ ನ್ಯಾಯ ಮತ್ತು ಸೌಹಾರ್ದದ ಮಾದರಿ ರಾಜ್ಯವಾಗಿ ರಾಷ್ಟ್ರಮಟ್ಟದಲ್ಲಿ ತನ್ನ ಸ್ಥಾನವನ್ನು ಇನ್ನಷ್ಟು ದೃಢಪಡಿಸಲಿ ಎಂಬುದು ನನ್ನ ಹಾರೈಕೆ ಎಂದು ಬಸವರಾಜ್ ರಾಯರೆಡ್ಡಿ ಅವರು ಪತ್ರದಲ್ಲಿ ತಿಳಿಸಿದ್ದಾರೆ.
-
ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ 104 ಕೋಟಿ ರೂ. ವೆಚ್ಚದಲ್ಲಿ ಉಚಿತ ಶೂ, ಸಾಕ್ಸ್ ವಿತರಣೆಗೆ ಸರ್ಕಾರದ ಆದೇಶ -
ಬೆಂಗಳೂರಿಗರಿಗೆ ಬಂಪರ್ ಗಿಫ್ಟ್: ನೀರಿನ ಬಿಲ್ ಮೇಲಿನ ಬಡ್ಡಿ ಶೇ.100ರಷ್ಟು ಮನ್ನಾ; ಡಿಕೆಶಿ ಮಹತ್ವದ ಘೋಷಣೆ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications