Cabinet Reshuffle: ಸಚಿವ ಸಂಪುಟ ಪುನರ್ ರಚನೆ: ಬಿಗ್ ಅಪ್‌ಡೇಟ್ ಕೊಟ್ಟ ಸಿದ್ದರಾಮಯ್ಯ
ಬೆಂಗಳೂರು, ಅಕ್ಟೋಬರ್ 07: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಆಕ್ಟೀವ್ ಅಗಿದ್ದಾರೆ. ರಾಜ್ಯ ಸರ್ಕಾರದ ಶಾಸಕರು ಹಾಗೂ ಸಚಿವರಿಗೆ ಬಿಸಿ ಮುಟ್ಟಿಸಲು ಸಜ್ಜಾಗಿದ್ದು, ಸದ್ಯ ಸಿದ್ದರಾಮಯ್ಯ ಸಂಪುಟ ಸರ್ಜರಿಗೆ ಅಣಿಯಾಗುತ್ತಿದ್ದಾರೆ. ಸಚಿವ ಸಂಪುಟಕ್ಕೆ ಈ ಹಿಂದೆಯೇ ಸರ್ಜರಿ ನಡೆಯಬೇಕಿತ್ತು.ಆದರೆ ಹಲವು ಹಗರಣ ಸರ್ಕಾರದ ಮೂಡ್ ಅನ್ನೇ ಚೇಂಜ್ ಮಾಡಿತ್ತು, ಹೀಗಾಗಿ ಸಂಪುಟ ಸರ್ಜರಿಯ ಬಗ್ಗೆ ಸಿದ್ಧರಾಮಯ್ಯ ನಿರಾಸಕ್ತಿ ತೋರಿಸುತ್ತಿದ್ದರು. ಇದೀಗ ಸಚಿವ ಸಂಪುಟದಲ್ಲಿ ಮೇಜರ್ ಸರ್ಜರಿಗೆ ಸಿದ್ದರಾಮಯ್ಯ ಮುಂದಾಗಿದ್ದಾರೆ.
ಈ ಕುರಿತು ಇಂದು(ಮಂಗಳವಾರ) ಶ್ರೀ ಮಹರ್ಷಿ ವಾಲ್ಮೀಕಿ ತಪೋವನ ದಲ್ಲಿರುವ ಶ್ರೀ ವಾಲ್ಮೀಕಿ ಜಯಂತಿಯ ಅಂಗವಾಗಿ ಅವರ ಪ್ರತಿಮೆ ಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ನಾಯಕ ಸಮುದಾಯದ ಶಾಸಕರಿಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವ ಬಗ್ಗೆ ರಾಜ್ಯ ಪಾಳಯದಲ್ಲಿ ಚರ್ಚೆ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಸಚಿವಸಂಪುಟ ಪುನರ್ ರಚನೆ ನಡೆಯುವ ಸಂದರ್ಭದಲ್ಲಿ ಪರಿಗಣಿಸಲಾಗುವುದು ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ರಾಮಾಯಣ ದಂತಹ ಮಹಾನ್ ಗ್ರಂಥವನ್ನು ರಚಿಸಿದ ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಾಡಿನ ಜನತೆಗೆ ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳನ್ನು ತಿಳಿಸಿದರು. ವಾಲ್ಮೀಕಿ ಜಯಂತೋತ್ಸವದ ಮೂಲಕ ಅವರನ್ನುಸ್ಮರಿಸಲಾಗಿದೆ. ದೇಶ ಕಂಡ ಅಪರೂಪದ ಸಾಹಿತಿ. ರಾಮಾಯಣ ದಂತಹ ಮಹಾನ್ ಗ್ರಂಥದ ಕತೃ. ವಾಲ್ಮೀಕಿಯವರು ಶೂದ್ರ ಜನಾಂಗದಲ್ಲಿ ಜನಿಸಿದ್ದರೂ, ರಾಮಾಯಣದಂತಹ ಶ್ರೇಷ್ಠ ಗ್ರಂಥವನ್ನು ವಿಶ್ವಕ್ಕೆ ಪರಿಚಯಿಸಿದರು. ವಾಲ್ಮೀಕಿಯವರ ಪ್ರತಿಮೆಯನ್ನು 2017 ರಲ್ಲಿ ಸ್ಥಾಪಿಸಲಾಯಿತು. ವಾಲ್ಮೀಕಿ ಹಾಗೂ ಕನಕದಾಸರಂತಹ ಮಹಾನ್ ಸಂತರು ಸಮಾಜಮುಖಿಯಾಗಿ ಬದುಕಿದವರು. ಅವರು ಬೋಧಿಸಿದಂತೆ ಮಾನವೀಯ ಮೌಲ್ಯಗಳನ್ನು ಅನುಸರಿದವರು ಎಂದರು.
ಸರ್ವೋಚ್ಛ ನ್ಯಾಯಾಲಯದ ಮುಖ್ಯನ್ಯಾಯಮೂರ್ತಿಗಳ ಮೇಲೆ ಶೂ ಎಸೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುತ್ತಾ, ಮುಖ್ಯ ನ್ಯಾಯಮೂರ್ತಿಯವರೇ ಈ ಘಟನೆಯನ್ನು ಕ್ಷಮಿಸಿದ್ದು, ಅವರ ದೊಡ್ಡಗುಣವನ್ನು ಬಿಂಬಿಸುತ್ತದೆ. ಆದರೆ ಇಂತಹ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಇದು ಮನುವಾದಿಗಳ ಕೈವಾಡವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸಮೀಕ್ಷೆಗೆ ಕಾಲಾವಕಾಶ ವಿಸ್ತರಣೆ ಬಗ್ಗೆ ಪ್ರತಿಕ್ರಿಯೆ ನೀಡಿ, ಇಂದು ಸಮೀಕ್ಷೆಯ ಪ್ರಗತಿ ಬಗ್ಗೆ ಪರಿಶೀಲನೆ ನಡೆಸಲಾಗುವುದು. ನಂತರ ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಅವರು ಹೇಳಿದರು.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Government Employees: ಸರ್ಕಾರಿ ನೌಕರರ ವರ್ಗಾವಣೆ ಕುರಿತು ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ












Click it and Unblock the Notifications