Get Updates
Get notified of breaking news, exclusive insights, and must-see stories!

ಸಾಲದ ಬಡ್ಡಿ ಮನ್ನಾ, ರೈತರಿಗೆ ಗುಡ್‌ ನ್ಯೂಸ್ ಕೊಟ್ಟ ಸಿದ್ದರಾಮಯ್ಯ!

ಬೆಂಗಳೂರು, ಡಿಸೆಂಬರ್‌ 15: ಸಹಕಾರ ಬ್ಯಾಂಕುಗಳಲ್ಲಿನ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಬಡ್ಡಿಯನ್ನು ಸಂಪೂರ್ಣ ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರಿಗೆ ಭರವಸೆ ನೀಡಿದ್ದಾರೆ.

ಬರದಿಂದ ತತ್ತರಿಸಿರುವ ರಾಜ್ಯದ ರೈತರಿಗೆ ಸಿದ್ದರಾಮಯ್ಯ ಸರ್ಕಾರ ಈ ಮೂಲಕ ಸಿಹಿ ಸುದ್ದಿ ನೀಡಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತ ಚರ್ಚೆಗೆ ಉತ್ತರ ಕೊಡುವ ವೇಳೆ ಸಾಲಮನ್ನಾ ಮಾಡುವ ಕುರಿತು ನಾವು ನಮ್ಮ ಪ್ರಣಾಳಿಕೆಯಲ್ಲಿ ಹೇಳಿಲ್ಲ. ಆದರೆ ನಮ್ಮ ಸರ್ಕಾರ ಬಡ್ಡಿ ಮನ್ನಾ ಮಾಡಲು ತೀರ್ಮಾನಿಸಿದೆ ಎಂದು ಹೇಳಿದರು.

Siddaramaiah gave good news to farmers, loan interest waiver in cooperative banks

ಉತ್ತರ ಕರ್ನಾಟಕದ ಬಗ್ಗೆ ಸದನದಲ್ಲಿ ಚರ್ಚೆ ಮಾಡಬೇಕು ಎಂದು ಒತ್ತಾಯ ಕೇಳಿ ಬರುತ್ತಲೇ ಇತ್ತು. ಹೀಗಾಗಿ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಸದಾ ಬದ್ಧವಾಗಿದೆ. ನಂಜುಂಡಪ್ಪ ವರದಿಯ ಅನುಷ್ಠಾನ ಹಾಗೂ ಅದರ ಫಲಶ್ರುತಿಯನ್ನು ಅಧ್ಯಯನ ಮಾಡಲು ನುರಿತ ಅರ್ಥಶಾಸ್ತ್ರಜ್ಞರೊಬ್ಬರ ಅಧ್ಯಕ್ಷತೆಯಲ್ಲಿ ಉನ್ನತಾಧಿಕಾರ ಸಮಿತಿ ರಚಿಸಲಾಗುವುದು ಎಂದರು.

ನಂಜುಂಡಪ್ಪ ವರದಿ ಸಲ್ಲಿಕೆಯಾಗಿ 21 ವರ್ಷಗಳಾಗಿದೆ. ನಂಜುಂಡಪ್ಪನವರ ವರದಿಯನ್ನಾಧರಿಸಿ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮೂಲಕ ಇದುವರೆಗೆ 61330 ಕೋಟಿ ರೂ.ಅನುದಾನ ಒದಗಿಸಿದೆ. ಸುಮಾರು 42,000 ಕೋಟಿ ರೂ.ಗಳನ್ನು ಖರ್ಚು ಮಾಡಿದೆ. ನಂಜುಂಡಪ್ಪನವರ ವರದಿಯನ್ನಾಧರಿಸಿ ನೀಡಲಾಗುವ ವಿಶೆಷ ಅಭಿವೃದ್ಧಿ ಯೋಜನೆಯಡಿ 32,433.43 ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ತಿಳಿಸಿದರು.

ಧಾರವಾಡ ಜಿಲ್ಲೆಯಲ್ಲಿ ಕೈಗಾರಿಕಾ ಕ್ಲಸ್ಟರ್ ಅನ್ನು ಸ್ಥಾಪಿಸಲಾಗುತ್ತಿದ್ದು, ಈಗಾಗಲೇ 19 ಘಟಕಗಳು 1,255 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುತ್ತಿದ್ದು, ಸುಮಾರು 2450 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ. ಇದನ್ನು ಹೊರತುಪಡಿಸಿ 3000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ ಸ್ಥಾಪಿಸಲಾಗುತ್ತದೆ ಎಂದು ಅವರು ತಿಳಿಸಿದರು.

ರಾಯಚೂರಿನಲ್ಲಿ ಹತ್ತಿ ಆಧಾರಿತ ಕೈಗಾರಿಕೆಗಳ ಸ್ಥಾಪನೆಗೆ ಒತ್ತು ನೀಡಲಾಗುವುದು. ವಿಜಯಪುರದಲ್ಲಿ ಉತ್ಪಾದನಾ ಕ್ಲಸ್ಟರ್ ಅನ್ನು ಅಂದಾಜು 1500 ಎಕರೆ ಪ್ರದೇಶದಲ್ಲಿ ಸ್ಥಾಪಿಸಲಾಗುವುದು. ಉತ್ತರ ಕರ್ನಾಟಕದ ಪ್ರವಾಸೋದ್ಯಮ ಅಭಿವೃದ್ಧಿಗೆ ಸಮಗ್ರ ಕ್ರಿಯಾಯೋಜನೆ ರೂಪಿಸಸಲಾಗುವುದು ಎಂದು ಮುಖ್ಯಮಂತ್ರಿಯವರು ಭರವಸೆ ನೀಡಿದರು.

ಇದರ ಜತೆಗೆ ಬಯಲು ಸೀಮೆ ಅಭಿವೃದ್ಧಿ ಮಂಡಳಿ ವತಿಯಿಂದಲೂ ಅನುದಾನಗಳನ್ನು ಒದಗಿಸಲಾಗಿದೆ. ಇಷ್ಟೆಲ್ಲ ಮಾಡಿದರೂ ಮಾನವ ಅಭಿವೃದ್ಧಿ ಸೂಚ್ಯಂಕವು ನಿರೀಕ್ಷಿತ ಮಟ್ಟದಲ್ಲಿ ಸುಧಾರಿಸುತ್ತಿಲ್ಲ. ಶಿಕ್ಷಣ, ಆರೋಗ್ಯ, ಆದಾಯಗಳಿಕೆ ಮುಂತಾದವುಗಳಲ್ಲಿ ಹಿನ್ನಡೆಯನ್ನು ಈ ಜಿಲ್ಲೆಗಳು ಅನುಭವಿಸುತ್ತಿವೆ. ಹಾಗಾಗಿ ವಿಶೇಷವಾಗಿ ನಂಜುಂಡಪ್ಪನವರ ವರದಿಯ ಅನುಷ್ಠಾನ ಹಾಗೂ ಅದರ ಫಲಶ್ರುತಿಯನ್ನು ಅಧ್ಯಯನ ಮಾಡಲು ನುರಿತ ಅರ್ಥಶಾಸ್ತ್ರಜ್ಞರೊಬ್ಬರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗುವುದು ಎಂದು ತಿಳಿಸಿದರು.

ಉತ್ತರ ಕರ್ನಾಟಕದಲ್ಲಿ ಬೃಹತ್ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಆರ್ಥಿಕತೆಗೆ ಉತ್ತೇಜನ ನೀಡಲು ಹಾಗೂ ಸ್ಥಳೀಯರಿಗೆ ಉದ್ಯೋಗ ಒದಗಿಸಲಾಗುವುದು. ಬೆಳಗಾವಿ ಸಮೀಪ 2,000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ, 500 ಎಕರೆ ಪ್ರದೇಶದಲ್ಲಿ ಫೌಂಡ್ರಿ ಕ್ಲಸ್ಟರ್ ಅನ್ನು ಸ್ಥಾಪಿಸಲಾಗುವುದು. ಜಿಲ್ಲೆಯಲ್ಲಿ ಏರೋಸ್ಪೇಸ್ ಆಧಾರಿತ ಕೈಗಾರಿಕೆಗಳ ಬೆಳವಣಿಗೆಗೆ ವಿಶೇಷ ಒತ್ತು ನೀಡಲಾಗುವುದು ಎಂದು ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+