Siddaramaiah: ಒಳ ಮೀಸಲಾತಿ ಜಾರಿ ಕುರಿತು ಮಹತ್ವದ ಮಾಹಿತಿ ಕೊಟ್ಟ ಸಿದ್ದರಾಮಯ್ಯ

ಬೆಂಗಳೂರು, ಅಕ್ಟೋಬರ್‌ 31: ರಾಜ್ಯದಲ್ಲಿ ಒಳ ಮೀಸಲಾತಿ ಕುರಿತು 3 ದಶಕಗಳ ನಿರಂತರ ಬೇಡಿಕೆ, ಒತ್ತಾಯಗಳ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟವು ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸಲು ತಾತ್ವಿಕವಾಗಿ ಒಪ್ಪಿಗೆ ನೀಡಿದೆ. ಪರಿಶಿಷ್ಟ ಜಾತಿಗಳಲ್ಲಿ 101 ಒಳ ಪಂಗಡಗಳಿದ್ದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ವೈಜ್ಞಾನಿಕವಾಗಿ ಒಳ ಮೀಸಲಾತಿಯನ್ನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಈ ಹಿನ್ನೆಲೆಯಲ್ಲಿ ರಾಜ್ಯ ಹೈಕೋರ್ಟ್‌ ನ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಕಮಿಷನ್‌ ಆಫ್‌ ಇನ್‌ಕ್ವೈರಿ ಅಕ್ಟ್‌ 1952 ಅನ್ವಯ ಆಯೋಗವನ್ನು ರಚಿಸಲು ನಿರ್ಧರಿಸಲಾಗಿದೆ. ಸದರಿ ಆಯೋಗವು ಎರಡು ತಿಂಗಳ ಒಳಗಾಗಿ ವರದಿ ಸಲ್ಲಿಸುವ ಷರತ್ತು ವಿಧಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

Siddaramaiah Gave Important Information About The Implementation Of Internal Reservation

ಮುಂದಿನ ತೀರ್ಮಾನದವರೆಗೆ ರಾಜ್ಯ ಸರ್ಕಾರದ ಅಧೀನದ ಸಿವಿಲ್‌ ಸೇವೆಗಳಲ್ಲಿನ ಹಾಗೂ ಮೀಸಲಾತಿ ಅನ್ವಯವಾಗುವ ವೃಂದಗಳ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಹೊರಡಿಸದಿರುವ ನಿರ್ಧಾರವನ್ನು ಸಹ ಕೈಗೊಳ್ಳಲಾಗಿದೆ. ತೆಲಂಗಾಣ ಸರ್ಕಾರ ಸಹ ಒಳ ಮೀಸಲಾತಿ ಜಾರಿ ಸಂಬಂಧ ಈಗಾಗಲೇ ಇದೇ ಮಾದರಿಯಲ್ಲಿ ಒಂದು ಆಯೋಗ ರಚನೆ ಮಾಡಿದೆ.

ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಒಳ ಮೀಸಲಾತಿಯನ್ನು ವೈಜ್ಞಾನಿಕವಾಗಿ, ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸೂಕ್ತ ಅಂಕಿ ಅಂಶಗಳ ಅಗತ್ಯವಿರುತ್ತದೆ. ಈ ಅಂಕಿ ಅಂಶಗಳನ್ನು ವೈಜ್ಞಾನಿಕವಾಗಿ ನಿರ್ಧರಿಸಲು ರಾಜ್ಯ ಸರ್ಕಾರವು ಆಯೋಗವನ್ನು ರಚನೆ ಮಾಡಲು ನಿರ್ಧರಿಸಿದೆ. ಆಯೋಗವು ನಿಗಧಿತ ಗಡುವಿನೊಳಗೆ ವರದಿಯನ್ನು ಸಲ್ಲಿಸಲು ಬೇಕಾದ ಅಗತ್ಯ ಕ್ರಮಗಳನ್ನು ಸರ್ಕಾರವು ತೆಗೆದುಕೊಳ್ಳಲಿದೆ. ಆಯೋಗದ ವರದಿ ಬಂದ ತಕ್ಷಣ ಒಳ ಮೀಸಲಾತಿಯನ್ನು ಜಾರಿಗೊಳಿಸಲು ಕ್ರಮವಹಿಸಲಾಗುವುದು.

ಒಳ ಮೀಸಲಾತಿ ನೀಡುವುದು ಸಂವಿಧಾನ ಬದ್ಧವಾದ ಕ್ರಮ ಎಂದು ಸುಪ್ರೀಂಕೋರ್ಟ್‌ ಇತ್ತೀಚೆಗೆ ತಿಳಿಸಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸುವ ಕ್ರಾಂತಿಕಾರಿ ನಿರ್ಣಯ ಕೈಗೊಂಡಿದೆ. ಸಮರ್ಪಕವಾಗಿ, ವೈಜ್ಞಾನಿಕವಾಗಿ ಹಾಗೂ ವಿವಾದಗಳಿಗೆ ಆಸ್ಪದ ನೀಡದಂತೆ ಒಳ ಮೀಸಲಾತಿಯನ್ನು ಅನುಷ್ಠಾನಗೊಳಿಸಬೇಕೆಂಬ ಉದ್ದೇಶದಿಂದ ಸರ್ಕಾರ ಆಯೋಗ ಸರ್ಕಾರ ರಚಿಸಿದ್ದು, ಇದರಲ್ಲಿ ಯಾವುದೇ ವಿಳಂಬ ನೀತಿ ಅಥವಾ ಕಾಲಹರಣ ತಂತ್ರ ಇರುವುದಿಲ್ಲ. ಸಾಮಾಜಿಕ ನ್ಯಾಯದ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರ ಕಾರ್ಯ ನಿರ್ವಹಿಸಲಿದೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದರು.

ಇನ್ನೂ ಅರಣ್ಯ ಇಲಾಖೆಯೊಂದಿಗಿನ ಗೊಂದಲಗಳನ್ನು ನಿವಾರಿಸಿಕೊಂಡು ರಾಜಸ್ವ ಸಂಗ್ರಹಣೆಗೆ ತ್ವರಿತ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.‌ ಗಣಿ ಇಲಾಖೆ ಪ್ರಗತಿ ಯು ಕಳೆದ ವರ್ಷ ಇದೇ ಅವಧಿಯಲ್ಲಿ ಶೇ. 54ರಷ್ಟು ಇತ್ತು . ಪ್ರಸಕ್ತ ಸಾಲಿನಲ್ಲಿ ಶೇ 46 ರಾಜಸ್ವ ಸಂಗ್ರಹಣೆ ಆಗಿದೆ. ಅರಣ್ಯ ಇಲಾಖೆಯೊಂದಿಗಿನ ಇರುವ ಗೊಂದಲಗಳನ್ನು ನಿವಾರಿಸಿಕೊಂಡು ರಾಜಸ್ವ ಸಂಗ್ರಹಣೆಗೆ ತ್ವರಿತ ಕ್ರಮಗಳನ್ನು ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಪ್ರಸಕ್ತ ಸಾಲಿಗೆ ರಾಜಸ್ವ ಸಂಗ್ರಹಣೆ ಗುರಿ ರೂ 9000ಕೋಟಿ, ಅಕ್ಟೋಬರ್ ವರೆಗಿನ ರಾಜಸ್ವ ಸಂಗ್ರಹಣೆ ರೂ. 4070.22 ಕೋಟಿ. ರಾಜ್ಯದ ಅಭಿವೃದ್ಧಿಗೆ ಹಿತಾಸಕ್ತಿಗೆ ಪ್ರಾಮುಖ್ಯತೆ ನೀಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಮುಖ್ಯಮಂತ್ರಿಗಳು, ರಾಜ್ಯದ ಹಿತಾಸಕ್ತಿಗೆ, ಅಭಿವೃದ್ಧಿಗೆ ಧಕ್ಕೆ ಮಾಡಿದರೆ ಸಹಿಸಲ್ಲ. ನಿಯಮ ಉಲ್ಲಂಘಿಸಿದೆ ಕ್ರಿಯಾಶೀಲತೆ ತೋರಿ ಎಂದು ಅರಣ್ಯ ಇಲಾಖೆ ಪಿಸಿಸಿಎಫ್ ಅವರಿಗೆ ಸಿಎಂ ಸೂಚನೆ ನೀಡಿದರು. ಬೇರೆ ರಾಜ್ಯಗಳಲ್ಲಿ ಕಬ್ಬಿಣದ ಅದಿರನ್ನು ಅರಣ್ಯ ಉತ್ಪನ್ನ ಎಂದು ಪರಿಗಣಿಸಿರುವುದಿಲ್ಲ.ನಮ್ಮ ರಾಜ್ಯದಲ್ಲಿ ಇದೇ ಮಾದರಿ ಅಳವಡಿಸಿಕೊಳ್ಳಲು ಮುಂದಿನ ಸಚಿವ ಸಂಪುಟ ಸಭೆಗೆ ಪ್ರಸ್ತಾವನೆ ತರುವಂತೆ ಸೂಚಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+