ಬೆಳೆ ಪರಿಹಾರ ಬಿಡುಗಡೆ: ಯಾವ ಜಮೀನಿಗೆ ಎಷ್ಟು ಪರಿಹಾರ: ಮಾಹಿತಿ ಕೊಟ್ಟ ಸಿದ್ದರಾಮಯ್ಯ

ಮೈಸೂರು, ಅಕ್ಟೋಬರ್‌ 02: ಈ ವರ್ಷ ರಾಜ್ಯದೆಲ್ಲೆಡೆ ಉತ್ತಮ ಮಳೆಯಾಗಿದ್ದು, ಎಲ್ಲ ಜಲಾಶಯಗಳು ತುಂಬಿ, ಉತ್ತಮ ಬೆಳೆಯೂ ಆಗುತ್ತಿದೆ. ಆದರೆ ಉತ್ತರಕರ್ನಾಟಕದ ಕೆಲವು ಜಿ್ಲ್ಲೆಗಳಲ್ಲಿ ಅತಿವೃಷ್ಠಿಯಿಂದ ರಾಜ್ಯದಲ್ಲಿ ಸುಮಾರು 10ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿ ಸಂಭವಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಇಂದು (ಗುರುವಾರ) ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ರೈತರಿಗೆ ಸಮೀಕ್ಷೆ ನಡೆಸಿ ಬೆಳೆಪರಿಹಾರ ನೀಡುವುದಾಗಿ ಕಲ್ಬುರ್ಗಿಯ ಭೇಟಿ ಸಂದರ್ಭದಲ್ಲಿ ತಿಳಿಸಲಾಗಿದ್ದು, ಸರ್ಕಾರ ಮತ್ತು ಎನ್ ಡಿಆರ್ ಎಫ್ ಸೇರಿದಂತೆ ಕೃಷಿ ಜಮೀನಿನ ತಲಾ ಹೆಕ್ಟೇರ್ ಗೆ 17000 ರೂಪಾಯಿ, ನೀರಾವರಿ ಜಮೀನಿಗೆ 17,500 ರೂಪಾಯಿ. ಮತ್ತು ಬಹುಬೆಳೆ ಬೆಳೆಯುವ ಜಮೀನಿಗೆ 31ಸಾವಿರ ರೂ.ಗಳ ಪರಿಹಾರ ನೀಡುವುದಾಗಿ ತಿಳಿಸಲಾಗಿದೆ. ಆದರೆ ಹೆಚ್ಚಿನ ಮಳೆಯಿರುವುದರಿಂದ ಬೆಳೆಹಾನಿಯ ಜಂಟಿ ಸಮೀಕ್ಷೆ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಸಮೀಕ್ಷೆಯ ನಂತರ ಬೆಳೆಹಾನಿಯಾದ ಎಲ್ಲ 10 ಲಕ್ಷ ಹೆಕ್ಟೇರ್ ಗೂ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Siddaramaiah Gave Important Information About The Release Of Crop Compensation

ದಸರಾ ಜನರ ಹಬ್ಬ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದಾಗ ಮಾತ್ರ ದಸರಾ ಆಯೋಜನೆ ಯಶಸ್ವಿಯಾಗುತ್ತದೆ. ಮೈಸೂರು ದಸರಾಕ್ಕೆ ಪ್ರವಾಸಿಗರನ್ನು ಸ್ವಾಗತಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಈ ಬಾರಿ ದಸರಾ ಹಬ್ಬವು ಹನ್ನೊಂದು ದಿನಗಳ ಕಾಲ ನಡೆದಿದ್ದು, ನಾಡಿನ ಜನತೆಗೆ ದಸರಾ ಮಹೋತ್ಸವದ ಶುಭಾಶಯಗಳನ್ನು ಕೋರುತ್ತೇನೆ. ಮೈಸೂರು ದಸರಾ ವಿಶ್ವವಿಖ್ಯಾತವಾಗಿದ್ದು, ಹೆಚ್ಚಿನ ಪ್ರವಾಸಿಗರನ್ನು ಸ್ವಾಗತಿಸುವುದಾಗಿ ತಿಳಿಸಿದರು. ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿ , ಎಲ್ಲ ದಸರಾ ಉತ್ಸವಗಳಲ್ಲಿ ಭಾಗಿಯಾಗಿದ್ದೇನೆ. ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ 8 ಬಾರಿ ದಸರಾದಲ್ಲಿ ಪಾಲ್ಗೊಳ್ಳುವ ಅವಕಾಶ ದೊರೆತಿದ್ದು, ಅತ್ಯಂತ ಸಂತೋಷವನ್ನು ತಂದಿದೆ ಎಂದರು.

ದಸರಾ ಜನರ ಹಬ್ಬ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದಾಗ ಮಾತ್ರ ದಸರಾ ಆಯೋಜನೆ ಯಶಸ್ವಿಯಾಗುತ್ತದೆ. ದಸರಾ ಉತ್ಸವವನ್ನು ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಅಭಿನಂದಿಸಿದ ಮುಖ್ಯಮಂತ್ರಿಗಳು, ದಸರಾ ಉತ್ಸವ ಯಾವುದೇ ಅಡಚಣೆಗಳಿಲ್ಲದೇ ಯಶಸ್ವಿಯಾಗಿ ನಡೆದಿರುವುದು ಸಂತಸ ತಂದಿದೆ. ಇದಕ್ಕಾಗಿ ಶ್ರಮಿಸಿದ ಸಚಿವರು, ಶಾಸಕರು ಹಾಗೂ ಅಧಿಕಾರಿಗಳನ್ನು ಅಭಿನಂದಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅವರ ನೇತೃತ್ವದಲ್ಲಿ ನಡೆದ ಹೋರಾಟದ ಫಲದಿಂದ ನಾವಿಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಅವರ
ತ್ಯಾಗ, ಬಲಿದಾನಗಳು ಸದಾ ನಮಗೆ ಆದರ್ಶಪ್ರಾಯವಾಗಿರುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಇಂದು ಮಾಜಿ ಪ್ರಧಾನ ಮಂತ್ರಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜನ್ಮದಿನವೂ ಕೂಡಾ ಹೌದು, ದೇಶ ಕಂಡ ಅತ್ಯಂತ ಪ್ರಾಮಾಣಿಕ ಪ್ರಧಾನಿ ಅವರು ಎಂದು ಲಾಲ್ ಬಹಾದ್ದೂರ್ ಶಾಸ್ತ್ರೀ ಜಿಯವರನ್ನು ಸ್ಮರಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+