ಬಿಕೆ ಹರಿಪ್ರಸಾದ್‌ಗೆ ಹೊಸ ಜವಾಬ್ದಾರಿ ನೀಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಮೇ 29: ನನಗೆ ಸಿಎಂ ಮಾಡುವುದು ನನಗೆ ಗೊತ್ತಿದೆ. ಅವರನ್ನು ಕೆಳಕ್ಕೆ ಇಳಿಸುವುದು ಗೊತ್ತಿದೆ ಎಂದು ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಬಿ.ಕೆ ಹರಿಪ್ರಸಾದ್ ಟಾಂಗ್ ನೀಡಿದ್ದರು. ಅಲ್ಲದೇ, ಇದೀಗ ತಮ್ಮನ್ನು ವಿರೋಧಿಸಿದ್ದಾರೆ ಎಂದರೆ ಶತ್ರುಗಳಂತೆ ನೋಡಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಪರೋಕ್ಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ಕಿಡಿಕಾಡಿರಿದ್ದರು, ಆದರೆ, ಇದೀಗ ಎಲ್ಲಾವನ್ನು ಮರೆತು ಸಿಎಂ ಸಿದ್ದರಾಮಯ್ಯ ಅವರು ಬಿ ಕೆ ಹರಿಪ್ರಸಾದ್ ಅವರನ್ನ ಭೇಟಿ ಮಾಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಗುರುವಾರ ಸದಾಶಿವ ನಗರದಲ್ಲಿ ಇರುವ ಅವರ ನಿವಾಸಕ್ಕೆ ದಿಢೀರ್ ಭೇಟಿ ಕೊಟ್ಟ ಸಿದ್ದರಾಮಯ್ಯ ಕೆಲ ಹೊತ್ತು ಮಾತುಕತೆ ನಡೆಸಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಅವರಿಗೆ ಸಿಎಂ ಸಿದ್ದರಾಮಯ್ಯ ಹೊಸ ಜವಾಬ್ದಾರಿ ನೀಡಿದ್ದಾರೆ. ಅಲ್ಲದೆ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಜವಾಬ್ದಾರಿ ನೀಡಿದ್ದಾರೆ.

ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಇಂದು ಬೆಳಗಿನ ಉಪಾಹಾರ ಮಾಡಿದ್ದು, ಸಾಮಾನ್ಯ ವಿಷಯಗಳ ಜೊತೆಗೆ ಮಂಗಳೂರಿನಲ್ಲಿ ಸೌಹಾರ್ದತೆ ನೆಲೆಸಬೇಕು, ದ್ವೇಷ ಯಾವುದೇ ಕಾರಣಕ್ಕೂ ಇರಬಾರದು ಎಂಬ ಬಗ್ಗೆ ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಿಕೆ ಹರಿಪ್ರಸಾದ್ ಅವರಿಗೆ ಮಂಗಳೂರಿಗೆ ಹೋಗಿ ಬನ್ನಿ ಎಂದಿದ್ದೇನೆ. ಅಲ್ಲಿನ ಪರಿಸ್ಥಿತಿ ಬಗ್ಗೆ ಅವಲೋಕಿಸಿ ಬನ್ನಿ ಎಂದಿದ್ದೇನೆ. ಕೋಮು ಗಲಭೆಗಳನ್ನು ಉಂಟುಮಾಡುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕೂಡ ಕಾನೂನಿನ ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು.ಯಾರೂ ಕಾನೂನಿಗಿಂತ ದೊಡ್ಡವರಲ್ಲ ಎಂದರು.
ಇನ್ನೂ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿರುವ ಕುರಿತು ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿ, ನಾಳೆ ಮತ್ತು ನಾಡಿದ್ದು ಎರಡು ದಿನಗಳ ಕಾಲ ನಡೆಯಲಿರುವ ಡಿ.ಸಿ.ಹಾಗೂ ಸಿಇಒ ಗಳ ಸಭೆಯಲ್ಲಿ ಮುಂಗಾರು ಮಳೆ ಪರಿಸ್ಥಿತಿಗಳ ಬಗ್ಗೆ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಚರ್ಚಿಸಲಾಗುವುದು ಎಂದು ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಹೆಚ್ಚೆಚ್ಚು ಭಾಷೆ ಕಲಿಯಿರಿ: ಕನ್ನಡದಲ್ಲಿ ಮುಂದಿರಿ
ಮಕ್ಕಳು ಎಷ್ಟು ಭಾಷೆ ಕಲಿತರೂ ಒಳ್ಳೆಯದೆ. ಹೆಚ್ಚೆಚ್ಚು ಭಾಷೆ ಕಲಿತು ಕನ್ನಡದಲ್ಲಿ ಮುಂದಿರಿ. ಕನ್ನಡದಲ್ಲಿ ಕಲಿತರೆ ಮಕ್ಕಳು ಪ್ರತಿಭಾವಂತರಾಗುವುದಿಲ್ಲ ಎನ್ನುವುದು ತಪ್ಪು. ವೈಜ್ಞಾನಿಕ ಶಿಕ್ಷಣ ಪಡೆದು, ವೈಜ್ಞಾನಿಕ ಗುಣಮಟ್ಟ ಬೆಳೆಸಿಕೊಂಡರೆ ಮಕ್ಕಳು ಉತ್ತಮ ಪ್ರತಿಭಾವಂತರಾದಂತೆ. ಆದ್ದರಿಂದ ಸರ್ಕಾರಿ ಶಾಲೆಗಳ ಹಾಜರಾತಿ ಹೆಚ್ಚಾಗಬೇಕು ಎಂದು ಸಿದ್ದರಾಮಯ್ಯ ಅವರು ಒತ್ತಿ ಹೇಳಿದರು. ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಈ ಬಾರಿಯೂ 725 ಕೋಟಿ ಹಣ ಕೊಟ್ಟಿದ್ದೇವೆ. ಕಳೆದ ವರ್ಷವೂ ಕೊಟ್ಟಿದ್ದೇವೆ. ಗುಣಮಟ್ಟದಲ್ಲಿ ಸರ್ಕಾರಿ ಶಾಲೆಗಳು ಹಿಂದುಳಿದಿಲ್ಲ ಎಂದರು.
ಗ್ರೇಸ್ ಮಾರ್ಕ್ಸ್ ಇಲ್ಲದೆ ಮಕ್ಕಳು ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಪ್ರಯತ್ನಿಸುತ್ತಿದೆ. ಎರಡನೇ ಮತ್ತು ಮೂರನೇ ಸಪ್ಲಿಮೆಂಟರಿ ಪರೀಕ್ಷೆಗಳಿಗೆ ಶುಲ್ಕ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಸಚಿವ ರಾಮಲಿಂಗಾರೆಡ್ಡಿಯವರ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳು ಉತ್ತಮ ಗುಣಮಟ್ಟ ಕಾಯ್ದುಕೊಂಡಿವೆ. ಇದೇ ಗುಣಮಟ್ಟ ಇಡೀ ರಾಜ್ಯಾದ್ಯಂತ ಆಗಬೇಕು ಎಂದು ಕರೆ ನೀಡಿದರು.
ಮಕ್ಕಳಿಗೆ ಉತ್ತಮ ಪೌಷ್ಠಿಕಾಂಶ ಸಿಕ್ಕರೆ ಮಾತ್ರ ಉತ್ತಮ ವಿದ್ಯಾರ್ಥಿಗಳಾಗಿ ಓದಲು ಸಾಧ್ಯ. ಈ ಕಾರಣಕ್ಕೇ ನಾವು ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ, ಹಾಲು ಕೊಡುತ್ತಿದ್ದೇವೆ. ಇದರ ಜೊತೆಗೆ ಪಠ್ಯ, ಸಮವಸ್ತ್ರ, ಶೂ, ಸಾಕ್ಸ್, ಪುಸ್ತಕಗಳನ್ನೂ ಸರ್ಕಾರದಿಂದಲೇ ಕೊಡುತ್ತಿದ್ದೇವೆ ಎಂದರು.












Click it and Unblock the Notifications