Government Employees: ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ : ಗುಡ್ ನ್ಯೂಸ್ ಕೊಟ್ಟ ಸಿದ್ದರಾಮಯ್ಯ
ಮೈಸೂರು, ಅಕ್ಟೋಬರ್ 1: ರಾಜ್ಯ ಸರ್ಕಾರಿ ನೌಕರರು ಬಹು ದಿನಗಳಿಂದ ಹಳೆ ಪಿಂಚಣಿ ಯೋಜನೆ ಕುರಿತು ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಟ್ಟಿಭತ್ಯ ಕುರಿತು ಗುಡ್ ನ್ಯೂಸ್ ನೀಡಿದ್ದಾರೆ. ಕೇಂದ್ರಸರ್ಕಾರ ತುಟ್ಟಿಭತ್ಯೆ ನೀಡಿದ ನಂತರ ರಾಜ್ಯ ಸರ್ಕಾರವೂ ತನ್ನ ನೌಕರರಿಗೆ ತುಟ್ಟಿಭತ್ಯೆ ನೀಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಇಂದು ಮೈಸೂರು ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಸಂವಿಧಾನದ ಬಗ್ಗೆ ಅರಿವಿಲ್ಲದವರೇ ದಸರಾ ಉದ್ಘಾಟಿಸುವವರ ಬಗ್ಗೆ ವಿರೋಧವನ್ನು ವ್ಯಕ್ತಪಡಿಸಿದವರಿಗೆ ಸುಪ್ರೀಂ ಕೋರ್ಟ್ ನಲ್ಲಿಯೂ ಛೀಮಾರಿ ಹಾಕಲಾಯಿತು. ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರು ದಸರಾಕ್ಕೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸಲಿದ್ದಾರೆ. ದಸರಾದಲ್ಲಿ ಏರ್ ಶೋ, ದೀಪಾಲಂಕಾರ, ಡ್ರೋನ್ ಶೋ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜನಪ್ರಿಯವಾಗಿದೆ. ಜನರು ಸಂತಸದಿಂದ ಪಾಲ್ಗೊಳ್ಳುವುದೇ ದಸರಾ ಉತ್ಸವ. ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ, ವಸ್ತು ಪ್ರದರ್ಶನ ಪ್ರಾಧಿಕಾರ ಈಗಾಗಲೇ ಅಸ್ತಿತ್ವದಲ್ಲಿರುವುದರಿಂದ ದಸರಾ ಪ್ರಾಧಿಕಾರದ ಅವಶ್ಯಕತೆ ಇಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.
ದಸರಾ ಉದ್ಘಾಟಕರ ಬಗ್ಗೆ ಬಿಜೆಪಿಯವರು ವಿರೋಧದ ಧ್ವನಿಯೆತ್ತಿದ್ದರು. ಕರ್ನಾಟಕ ಜಾತ್ಯಾತೀತ ರಾಜ್ಯವಾಗಿದ್ದು, ಸಂವಿಧಾನದ ಬಗ್ಗೆ ಅರಿವಿಲ್ಲದವರೇ ಇಂತಹ ವಿರೋಧವನ್ನು ವ್ಯಕ್ತಪಡಿಸುತ್ತಾರೆ. ಆದ್ದರಿಂದ ಸುಪ್ರೀಂ ಕೋರ್ಟ್ ನಲ್ಲಿಯೂ ಕೂಡ ವಿರೋಧಕ್ಕೆ ಛೀಮಾರಿಯಾಯಿತು.ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ದಸರಾ ಉದ್ಘಾಟನೆ ಬಗ್ಗೆ ಜನರ ಪ್ರತಿಕ್ರಿಯೆ ಹೇಗಿತ್ತು ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ವರ್ಷಕ್ಕೊಮ್ಮೆ ನಡೆಯುವ ದಸರಾ ಉತ್ಸವದಲ್ಲಿ ಸಾರ್ವಜನಿಕರು, ವ್ಯಾಪಾರಸ್ಥರು ಸಂತೋಷದಿಂದ ಭಾಗವಹಿಸಿ ಸಂತಸ ವ್ಯಕ್ತಪಡಿಸಿದ್ದಾರೆ ಎಂದರು.
ದಸರಾವೇಳೆಗೆ ಮುಖ್ಯಮಂತ್ರಿಗಳು ಪುಷ್ಪಾರ್ಚನೆ ಮಾಡುವುದಿಲ್ಲ ಎಂದು ವಿಪಕ್ಷಗಳು ಭವಿಷ್ಯ ನುಡಿದಿದ್ದ ಬಗ್ಗೆ ಪ್ರತಿಕ್ರಿಯೆ ನೀಡಿ, ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ. ಆದರೆ ಪಕ್ಷದ ವರಿಷ್ಠರ ಆದೇಶದಂತೆ ಎಲ್ಲರೂ ನಡೆಯಬೇಕಿದೆ. ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಉತ್ಸವದಲ್ಲಿ ಪುಷ್ಪಾರ್ಚನೆ ಮಾಡುತ್ತೇನೆಂಬ ಭರವಸೆ ಇದೆ. ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಲು , ಬಜೆಟ್ ಮಂಡಿಸಲು ಸಾಧ್ಯವಿಲ್ಲ ವೆಂದಿದ್ದರು. ಆದರೂ ನಾನೇ ಎರಡನೇ ಬಾರಿಗೂ ಮುಖ್ಯಮಂತ್ರಿಯಾಗಿ ಮುಂದುವರೆದು ಬಜೆಟ್ ಮಂಡಿಸಿದ್ದೇನೆ ಎಂದರು.
ಜಾತಿಸಮೀಕ್ಷೆಯಿಂದ ಸಮಾಜದ ಉದ್ಧಾರ ಸಾಧ್ಯವಿಲ್ಲ ಎಂದು ಕೇಂದ್ರಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಎಂದು ತಿಳಿಸಿರುವ ಬಗ್ಗೆ ಪ್ರತಿಕ್ರಯಿಸುತ್ತಾ, ಈ ಸಮೀಕ್ಷೆ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ತಿಳಿಸಿದಂತೆ ಅಸಮಾನತೆ ಹೋಗಲಾಡಿಸಲು ದುರ್ಬಲರು ಸಮಾಜದ ಮುಖ್ಯವಾಹಿನಿಗೆ ಬರುವಂತಾಗಬೇಕು. ಸಮಾಜದಲ್ಲಿ ಅಸಮಾನತೆ ನಿರಂತರವಾಗಿರಬೇಕು ಎಂಬುದು ಬಿಜೆಪಿಯವರ ಬಯಕೆ. ನಿರ್ದಿಷ್ಠವಾದ ಜಾತಿಯೊಂದು ಉತ್ತುಂಗದಲ್ಲಿರಬೇಕೆಂದು ಬಿಜೆಪಿ ಬಯಸುತ್ತದೆ. ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಹಾಗೂ ರಾಜ್ಯ ಸರ್ಕಾರದ ಒತ್ತಾಯದ ಮೇರೆಗೆ, ಕೇಂದ್ರ ಸರ್ಕಾರವೂ ಜಾತಿಗಣಿತಿ ನಡೆಸಲು ಮುಂದಾಗಿದೆ ಎಂದರು.












Click it and Unblock the Notifications