Gruha Lakshmi Scheme: ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ಕುರಿತು ಗುಡ್ ನ್ಯೂಸ್ ಕೊಟ್ಟ ಸಿದ್ದರಾಮಯ್ಯ

ಬೆಂಗಳೂರು, ಫೆಬ್ರವರಿ 17: ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮೀ ಫಲಾನುಭವಿಗಳ ಖಾತೆ ಹಣ ಜಮಾ ಆಗದ ಹಿನ್ನೆಲೆ ಮಹಿಳೆಯರು ಆತಂಕಕ್ಕೆ ಒಳಗಾಗಿದ್ದಾರೆ. ಪೆಂಡಿಂಗ್‌ ಇರುವ ಮೂರು ತಿಂಗಳ ಹಣ ಯಾವಾಗ ಮಹಿಳೆಯರ ಖಾತೆ ಹಣ ಜಮಾ ಆಗಲಿದೆ ಎಂಬ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದ್ದಾರೆ. ಈ ಕುರಿತು ಇಂದು(ಸೋಮಾವಾರ) ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅನ್ನಭಾಗ್ಯ ಯೋಜನೆಯ ಮೊತ್ತ ಐದು ತಿಂಗಳಿನಿಂದ ಹಾಗೂ ಗೃಹಲಕ್ಷ್ಮೀ ಯೋಜನೆಯ ಮೊತ್ತ ಮೂರು ತಿಂಗಳಿನಿಂದ ಜಮಾ ಆಗಿಲ್ಲ. ಯಾವ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಪಾವತಿ ಮಾಡೇ ಹೋಗಿದ್ದರೆ ಮಾಡುತ್ತೇವೆ . ಪಾವತಿಯಲ್ಲಿ ವಿಳಂಬವಾಗಿದ್ದರೆ ಪರಿಶೀಲಿಸಿ ಕೂಡಲೇ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ವಿಧಾನಮಂಡಲದ ಅಧಿವೇಶನ ಮಾರ್ಚ್ 3, 2025 ರಿಂದ ಪ್ರಾರಂಭವಾಗಲಿದ್ದು, ನೂತನ ವರ್ಷದ ಮೊದಲನೇ ಅಧಿವೇಶನವಾದ್ದರಿಂದ ರಾಜ್ಯಪಾಲರು ಮೂರನೇ ತಾರೀಖಿನಂದು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಂಗಳವಾರದಿಂದ ಗುರುವಾರದವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆದು, ಮಾರ್ಚ್ 7 ರಂದು, 2025-2026 ನೇ ಸಾಲಿನ ಆಯವ್ಯಯವನ್ನು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Siddaramaiah Gives Good News About The Release Of Funds For The Gruhalakshmi scheme

ಆಯವ್ಯಯದ ಮೇಲೆ ಚರ್ಚೆ ನಡೆದು ಉತ್ತರವನ್ನು ಮಾರ್ಚ್ ತಿಂಗಳ ಕೊನೆಯಲ್ಲಿ ನೀಡಲಾಗುವುದು. ಅಧಿವೇಶನ ಎಷ್ಟು ದಿನದವರೆಗೆ ನಡೆಸಬೇಕೆಂದು ವ್ಯವಹಾರ ಸಲಹಾ ಸಮಿತಿಯಲ್ಲಿ ತೀರ್ಮಾನ ಮಾಡಲಾಗುವುದು ಎಂದರು. ವಿವಿಧ ಇಲಾಖೆಗಳೊಂದಿಗೆ ಆಯವ್ಯಯ ಪೂರ್ವಭಾವಿ ಸಭೆ ನಡೆಸಲಾಗಿದ್ದು, ಇಂದು ರೈತ ಸಂಘಟನೆಯ ಮುಖಂಡರೊಂದಿಗೆ ಸಭೆ ನಡೆಸಿದ್ದು, ಅವರ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ತಯಾರಿಸುವಾಗ ಇತಿಮಿತಿಯೊಳಗೆ ಸಲಹೆಗಳನ್ನು ಸೇರ್ಪಡೆ ಮಾಡಲಾಗುವುದು. ಕರ್ನಾಟಕ ಸರ್ಕಾರ ರೈತರ ಹಿತವನ್ನು ಕಾಪಾಡುವುದರಲ್ಲಿ ಹಿಂದೆ ಬಿದ್ದಿಲ್ಲ. ಯಾವತ್ತೂ ರೈತರ ಪರವಾಗಿದ್ದು, ಕೃಷಿ ಕ್ಷೇತ್ರದ ಬೆಳವಣಿಗೆಗೆ ಪೂರಕವಾಗಿ ಇರಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬೆಲೆಯೇರಿಕೆ ಹೆಚ್ಚಾಗಿರುವುದರಿಂದ ನಿರೀಕ್ಷೆಗಳು ಕೂಡ ಹೆಚ್ಚಾಗಿವೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಎರಡೂ ಮಾಡುತ್ತವೆ. ಕೇಂದ್ರ ಸರ್ಕಾರದ ಬೆಲೆ ಏರಿಕೆ ಕುರಿತು ಹೆಚ್ಚಿನ ಒತ್ತು ನೀಡಬೇಕು. ರಾಜ್ಯ ಸರ್ಕಾರ ಬೆಲೆಯೇರಿಕೆ ತಗ್ಗಿಸಲು ಸಾಧ್ಯವಾದಷ್ಟೂ ಪ್ರಯತ್ನ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಮೆಟ್ರೋ ರೈಲಿನ ದರ ನಿಗದಿ ಮಾಡುವುದು ಕೇಂದ್ರ ಸರ್ಕಾರ ನೇಮಕ ಮಾಡಿರುವ ಸಮಿತಿ. ಮೆಟ್ರೋ ಸ್ವಾಯತ್ತ ಸಂಸ್ಥೆಯಾದರೂ, ಸಮಿತಿಯಲ್ಲಿ ಇಬ್ಬರು ಕೇಂದ್ರ ಸರ್ಕಾರದ ಪ್ರತಿನಿಧಿಗಳು ಹಾಗೂ ಇಬ್ಬರು ರಾಜ್ಯ ಸರ್ಕಾರದ ಪ್ರತಿನಿಧಿಗಳಿರುತ್ತಾರೆ. ಬೆಲೆ ನಿಗದಿ ಮಾಡಲು ರಾಜ್ಯ ಸರ್ಕಾರ ಪ್ರಸ್ತಾವನೆ ನೀಡುತ್ತದೆ. ಬೆಲೆ ನಿಗದಿ ಮಾಡುವುದು ಸಮಿತಿ. ಅಧ್ಯಕ್ಷರನ್ನು ನೇಮಕ ಮಾಡುವುದು ಕೇಂದ್ರ ಸರ್ಕಾರ. ಪ್ರಸ್ತುತ ತಮಿಳುನಾಡು ರಾಜ್ಯದ ನಿವೃತ್ತ ನ್ಯಾಯಾಧೀಶರು ಅಧ್ಯಕ್ಷರಾಗಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿ ಚುನಾವಣೆಗಳಿಗೆ ನಾವು ಸಿದ್ಧರಾಗಿದ್ದು, ಉಚ್ಛ ನ್ಯಾಯಾಲಯದ ಸೂಚನೆ ಮೇರೆಗೆ ಚುನಾವಣೆ ಮಾಡಲಾಗುವುದು ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜಲ್ ಜೀವನ್ ಮಿಷನ್ ಯೋಜನೆಯಡಿ ಕಾಮಗಾರಿಗಳನ್ನು ನಮ್ಮ ವೇಗಕ್ಕೆ ಅನುಗುಣವಾಗಿ ಮಾಡುತ್ತಿಲ್ಲ. ಕೇಂದ್ರ ಸರ್ಕಾರದ ಪಾಲನ್ನು ಅವರು ಕೊಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಲಾಗಿತ್ತು ಎಂದು ತಿಳಿಸಿದರು. ಇನ್ನೂ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಪಕ್ಷದ ಹೈ ಕಮಾಂಡ್ ತೀರ್ಮಾನಿಸಲಿದ್ದಾರೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+