ಹಾಲಿನ ದರ ಹೆಚ್ಚಳ ಕುರಿತು ಮಹತ್ವದ ಮಾಹಿತಿ ನೀಡಿದ ಸಿದ್ದರಾಮಯ್ಯ
ಬೆಂಗಳೂರು, ಮಾರ್ಚ್ 25: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹಲವು ಗ್ಯಾರಂಟಿ ಯೋಜನೆಗಳನ್ನ ನೀಡಿದ್ದು, ಗ್ಯಾರಂಟಿ ಯೋಜನೆಗಳನ್ನ ನೀಡುವ ಮೂಲಕ ಟಿಕೆಟ್ ದರ ಸೇರಿದಂತೆ ಹಲವು ಅಗತ್ಯ ವಸ್ತುಗಳ ದರ ಏರಿಕೆ ಮಾಡಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ. ನೀರಿನ ದರ ಏರಿಕೆಗೆ ಈಗಾಗಲೇ ಸರ್ಕಾರ ಮುಂದಾಗಿದ್ದು, ಇದೀಗ ರಾಜ್ಯದಲ್ಲಿ ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ತೀವ್ರ ಚರ್ಚೆಗಳು ನಡೆಯುತ್ತಿವೆ.
ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್) ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ ಅವರ ಹೇಳಿಕೆಯಂತೆ, ಹಾಲಿನ ದರ ಏರಿಕೆ ಕುರಿತು ಪಶುಸಂಗೋಪನೆ ಸಚಿವರು ಈಗಾಗಲೇ ಒಕ್ಕೂಟಗಳ ಅಧ್ಯಕ್ಷರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಹಾಲಿನ ದರವನ್ನು ಎಷ್ಟು ಹೆಚ್ಚಿಸಬೇಕು ಮತ್ತು ಏಕೆ ಹೆಚ್ಚಿಸಬೇಕು ಎಂಬ ಬಗ್ಗೆ ವಿವಿಧ ಅಭಿಪ್ರಾಯಗಳು ವ್ಯಕ್ತವಾಗಿದ್ದು, ಸರ್ಕಾರ ಹಾಲಿನ ದರ ಏರಿಕೆಗೆ ಮುಂದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕೆಎಂಎಫ್‌ನ 16 ಹಾಲು ಒಕ್ಕೂಟಗಳ ಅಧ್ಯಕ್ಷರು ಪ್ರತಿ ಲೀಟರ್‌ಗೆ 5 ರೂಪಾಯಿ ದರ ಏರಿಕೆ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಈ ಬೇಡಿಕೆಯ ಹಿನ್ನೆಲೆಯಲ್ಲಿ ಉತ್ಪಾದನಾ ವೆಚ್ಚ ಹೆಚ್ಚಳ ಮತ್ತು ರೈತರಿಗೆ ಸೂಕ್ತ ಬೆಂಬಲ ಒದಗಿಸುವ ಅಗತ್ಯತೆಯನ್ನು ಒಕ್ಕೂಟಗಳು ಒತ್ತಿ ಹೇಳಿವೆ. ಆದರೆ, ಈ ದರ ಏರಿಕೆಯ ಅಂತಿಮ ತೀರ್ಮಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆಗೆದುಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ಇನ್ನೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತದ ಅಧ್ಯಕ್ಷರು ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರ ಹಾಗೂ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಕಾವೇರಿಯಲ್ಲಿ ನಡೆಸಿದ್ದು, ಹಾಲಿನ ದರ ಹೆಚ್ಚಳ ಕುರಿತು ಒಕ್ಕೂಟಗಳ ಅಭಿಪ್ರಾಯ ಸಂಗ್ರಹ ಮಾಡಲಾಯಿತು. ಹಾಲಿನದರ ಹೆಚ್ಚಳ ಮಾಡಿದರೆ ಮೊತ್ತವನ್ನು ಸಂಪೂರ್ಣವಾಗಿ ರೈತರಿಗೆ ವರ್ಗಾವಣೆಯಾಗಬೇಕು ಎಂಬುವುದು ಸರ್ಕಾರದ ದೃಢ ನಿಲುವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು.
ಹಾಲು ಒಕ್ಕೂಟಗಳು ಖರ್ಚು ವೆಚ್ಚ ಕಡಿಮೆ ಮಾಡಬೇಕು. ಪಾರದರ್ಶಕತೆಯನ್ನು ಪಾಲಿಸಬೇಕು. ಒಕ್ಕೂಟಗಳು ಅಗತ್ಯಕ್ಕಿಂತ ಹೆಚ್ಚು ಜನರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಬಾರದು. ಇದರಿಂದಾಗಿಯೇ ವೆಚ್ಚ ಹೆಚ್ಚಾಗುತ್ತಿದೆ. ಅನಗತ್ಯ ಆಡಳಿತಾತ್ಮಕ ವೆಚ್ಚಗಳಿಂದಾಗಿಯೇ ಕೆಲವು ಒಕ್ಕೂಟಗಳು ನಷ್ಟ ಅನುಭವಿಸುವಂತಾಗಿದೆ. ಆಡಳಿತಾತ್ಮಕ ವೆಚ್ಚ ಯಾವುದೇ ಕಾರಣಕ್ಕೂ ಶೇ.2ಕ್ಕಿಂತ ಹೆಚ್ಚಾಗಬಾರದು.
ಮುಂದಿನ ಮೂರು ತಿಂಗಳಲ್ಲಿ ಆಡಳಿತಾತ್ಮಕ ವೆಚ್ಚವನ್ನು 2.5% ಕಡ್ಡಾಯವಾಗಿ ಇಳಿಸಬೇಕು. ಅಲ್ಲಿಂದ ಮುಂದಿನ ಮೂರು ತಿಂಗಳ ಒಳಗಾಗಿ ಎಲ್ಲಾ ಒಕ್ಕೂಟಗಳು ಆಡಳಿತಾತ್ಮಕ ವೆಚ್ಚವನ್ನು ಶೇ.2ಕ್ಕಿಂತ ಕೆಳಗೆ ಇಳಿಸಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಹಾಲಿನ ದರ ಕಡಿಮೆಯಿದೆ. ಹಾಲಿನ ದರ ಹೆಚ್ಚಳ ಮಾಡಿದರೆ ಉತ್ಪಾದನೆ ಹೆಚ್ಚಾಗುತ್ತದೆ. ಇದರ ಲಾಭ ಪೂರ್ಣವಾಗಿ ರೈತರಿಗೆ ತಲುಪಬೇಕು ಎಂಬುವುದು ಸರ್ಕಾರದ ನಿಲುವು ಎಂದು ಮುಖ್ಯಮಂತ್ರಿ ಅವರು ಹೇಳಿದರು.
ಬಳ್ಳಾರಿ ಹಾಲಿನ ಒಕ್ಕೂಟ 1.43 ಕೋಟಿಯಷ್ಟು ನಷ್ಟದಲ್ಲಿದ್ದು, ಫೆಬ್ರವರಿ ಅಂತ್ಯಕ್ಕೆ ಒಟ್ಟು 3 ಒಕ್ಕೂಟಗಳು ನಷ್ಟದಲ್ಲಿವೆ. ನಿರ್ವಹಣಾ ವೆಚ್ಚ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಲಿನ ದರ ಹೆಚ್ಚಳ ಮಾಡಿದರೆ ಸ್ವಲ್ಪ ಮೊತ್ತವನ್ನು ಒಕ್ಕೂಟಗಳಿಗೆ ವರ್ಗಾಯಿಸಲು ಒಕ್ಕೂಟಗಳಿಂದ ಮನವಿ ಮಾಡಲಾಗಿದ್ದು, ಆದರೆ, ಇದಕ್ಕೆ ಸಿಎಂ ಒಪ್ಪಿಗೆ ನೀಡಿಲ್ಲ.
ಹಾಲು ಒಕ್ಕೂಟಗಳು ಇರುವುದು ರೈತರಿಗೆ ಅನುಕೂಲ ಮಾಡುವುದಕ್ಕೆ ಮಾತ್ರ, ಲಾಭ ಮಾಡುವುದಕ್ಕಲ್ಲ ಒಕ್ಕೂಟಗಳ ದರ ಏರಿಕೆಯ ಒತ್ತಡಕ್ಕೆ ಮಣಿಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವ ಸಂಪುಟಕ್ಕೆ ವಿಷಯ ರವಾನೆ ಮಾಡಲಾಗಿದೆ. ಹೆಚ್ಚಳದ ಹಣ ಸಂಪೂರ್ಣವಾಗಿ ರೈತರಿಗೆ ವರ್ಗಾಯಿಸಲೇಬೇಕು ಎನ್ನುವ ನಿಲುವಿಗೆ ಸಿದ್ದರಾಮಯ್ಯ ಅವರು ಮುಂದಾಗಿದ್ದು, ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ಬಳಿಕ ದರ ಹೆಚ್ಚಳದ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಸಭೆ ನಿರ್ಣಯವನ್ನ ಕೈಗೊಂಡಿದೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದರು.
-
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್












Click it and Unblock the Notifications