Siddaramaiah: ರೈತರಿಗೆ ಭರ್ಜರಿ ಗುಡ್‌ನ್ಯೂಸ್‌; ಬೆಳೆ ಕಳೆದುಕೊಂಡ ರೈತರ ಖಾತೆಗೆ ಹಣ ವರ್ಗಾವಣೆ : ಸಿದ್ದರಾಮಯ್ಯ ಘೋಷಣೆ

ಮೈಸೂರು, ನವೆಂಬರ್11:‌ ರಾಜ್ಯ ರೈತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಜಂಟಿ ಸಮೀಕ್ಷೆ ಬಳಿಕ ಅತಿವೃಷ್ಟಿಯಿ೦ದ ಬೆಳೆ ಕಳೆದುಕೊ೦ಡವರ ಖಾತೆಗೆ ಹಣ ವರ್ಗಾವಣೆ ಆಗಲಿದೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೃಷಿ-ತೋಟಗಾರಿಕೆ-ನೀರಾವರಿ ಇಲಾಖೆಗಳ ಅಧಿಕಾರಿಗಳು ಜಂಟಿ ಸಭೆ ಮಾಡಿ ರೈತರಿಗೆ ನೀರಿನ ನಿರ್ವಹಣೆ ಮತ್ತು ವೈಜ್ಞಾನಿಕ ಬಿತ್ತನೆ ಬಗ್ಗೆ ಹಾಗೂ ಇಳುವರಿ ಹೆಚ್ಚಿಗೆ ಬರುವ ಹೊಸ ಹೊಸ ತಳಿಗಳ ಬಗ್ಗೆ ರೈತರಿಗೆ ಮಾಹಿತಿ ಹಂಚಿಕೊಳ್ಳಬೇಕು. ಜಂಟಿ ಸಭೆಗಳನ್ನು ನಡೆಸಬೇಕು. ಹುರುಳಿ, ಮುಸುಕಿನ ಜೋಳ ಬಿತ್ತನೆ ಇನ್ನೂ ಆಗಬೇಕಿದೆ. ಕೆಲವು ರೈತರು ಬೆಳೆಯನ್ನು ಬದಲಾಯಿಸಿದ್ದಾರೆ. ಗೊಬ್ಬರ, ಬೀಜ ನಮ್ಮಲ್ಲಿ ಸಂಗ್ರಹ ಇದೆ. ರೈತರಿಗೆ ಅಗತ್ಯಕ್ಕಿಂತ ಹೆಚ್ಚು ಗೊಬ್ಬರವನ್ನೂ ದಾಸ್ತಾನು ಮಾಡಿಟ್ಟುಕೊಂಡಿದ್ದೇವೆ. ಯೂರಿಯಾ ಅಗತ್ಯ ಇರುವುದಕ್ಕಿಂತ ಹೆಚ್ಚು ಸಂಗ್ರಹವಿದೆ.

Siddaramaiah gives information about money transfer to farmers accounts

ಕುರಿಗಾಹಿಗಳಿಗೆ ಆಗುತ್ತಿದ್ದ ತೊಂದರೆಗಳು ಮತ್ತು ಕಳ್ಳ ಕಾಕರಿಂದ ರಕ್ಷಣೆ ಕೊಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದ್ದರಿಂದ ಜಿಲ್ಲೆಯಲ್ಲಿ ಕುರಿಗಾಹಿಗಳ ಮೇಲೆ ದೌರ್ಜನ್ಯ ಪ್ರಕರಣಗಳು ನಡೆದಿಲ್ಲ ಎನ್ನುವ ವರದಿಯನ್ನು ಅಧಿಕಾರಿಗಳು ಸಭೆಗೆ ನೀಡಿದರು. ಹಾಲಿನ ಉತ್ಪಾದನೆ ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವುದರ ಅಂಕಿ ಅಂಶಗಳನ್ನು ಮುಂದಿಟ್ಟ ಮುಖ್ಯಮಂತ್ರಿಗಳು ಉತ್ಪಾದನೆ ಹೆಚ್ಚಾದ ಹಾಗೆ ಮಾರುಕಟ್ಟೆ ವಿಸ್ತರಿಸಲು ಸಿದ್ಧತೆ ಮಾಡಿಕೊಳ್ಳಿ ಎನ್ನುವ ಸೂಚನೆಯನ್ನು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಹುಲಿ-ಆನೆಗಳು ಅರಣ್ಯದಿಂದ ಹೊರಗೆ ಬರಲು ಏನು ಕಾರಣ ? ವೈಜ್ಞಾನಿಕ‌ ಕಾರಣ ನೀಡಿ: ವೈಜ್ಞಾನಿಕ ಮಾರ್ಗದಲ್ಲಿ ಪರಿಣಾಮಕಾರಿ ಪರಿಹಾರ ಕಂಡು ಹಿಡಿಯುವ ತುರ್ತು ಇದೆ ಎಂದು ಅಧಿಕಾರಿಗಳಿಗೆ ತಿಳಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದೇನೆ. ಕಾಡಿನಲ್ಲಿರುವ ನೀರಿನ ಗುಂಡಿಗಳನ್ನು ತುಂಬಿಸಬೇಕು.‌ ಲಾಂಟೆನಾ ತೆಗೆಸಬೇಕು. ಅರಣ್ಯದಲ್ಲಿ ಮೇವು ಬೆಳೆಸಬೇಕು. ಆನೆ, ಹುಲಿಗಳು ಹೊರಗೆ ಬರುವ ಬಗ್ಗೆ ನಿರಂತರ ನಿಗಾ ವಹಿಸಬೇಕು.

ಅರಣ್ಯ ಪ್ರಾಣಿ ಮತ್ತು ಮಾನವ ಸಂಘರ್ಷ ತಪ್ಪಿಸಲು ಪ್ರತ್ಯೇಕವಾದ ಸಭೆ ಕರೆಯುತ್ತಿದ್ದೇವೆ. ಸಮಗ್ರ ಮಾಹಿತಿ ಮತ್ತು ಪರಿಹಾರದ ಬಗ್ಗೆ ಅಧ್ಯಯನ‌ ನಡೆಸಿ ಪೂರ್ತಿ ಸಿದ್ಧತೆಯೊಂದಿಗೆ ಸಭೆಗೆ ಬರಬೇಕು ಎಂದು ಸೂಚಿಸಿದ್ದೇನೆ. ಈಗಾಗಲೇ ಹೆಲ್ಪ್ ಲೈನ್ ತೆರೆಯಲಾಗಿದೆ. ಕಮಾಂಡ್ ಸೆಂಟರ್ ತೆರೆಯುವ ಕಾರ್ಯ ಪ್ರಗತಿಯಲ್ಲಿದೆ ಎಂದು ಅಧಕಾರಿಗಳು ಸಭೆಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಹಕ್ಕು ಕಾಯ್ದೆಗೆ ಬಂದಿರುವ 7000 ಅರ್ಜಿಗಳಲ್ಲಿ 5900 ಅರ್ಜಿಗಳು ತಿರಸ್ಕರಿಸಲ್ಪಟ್ಟಿರುವುದಕ್ಕೆ ಕಾರಣ ಏನು ಎಂದು ಪ್ರಶ್ನಿಸಿದರು.

ಇವು 2019-20 ರಿಂದ ತಿರಸ್ಕರಿಲ್ಪಟ್ಟ ಅರ್ಜಿಗಳು. ತಿರಸ್ಕರಿಸುವಾಗ ಸ್ಪಷ್ಟವಾದ, ನೈಜವಾದ ಕಾರಣ ನೀಡದಿದ್ದರೆ ಅಂತಹ ಅರ್ಜಿಗಳನ್ನು ಮರುಪರಿಶೀಲನೆಗೆ ಸ್ವೀಕರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ನನಗೆ ತಿಳಿಸಿದ್ದಾರೆ. ಹಾಡಿಗಳಿಗೆ ಕುಡಿಯುವ ನೀರು, ವಿದ್ಯುತ್ ಸಮರ್ಪಕವಾಗಿರಲುಸೂಚನೆ ನೀಡಿದ್ದೇನೆ. ಹಾಡಿಗಳು, ಅರಣ್ಯವಾಸಿಗಳ ವಿಚಾರದಲ್ಲಿ ಅಂತಃಕರಣದಿಂದ ವರ್ತಿಸಿ ಎನ್ನುವ ಸೂಚನೆ ನೀಡಿದ್ದೇನೆ. ಅಧಿಕಾರಿಗಳ ಹೊಂದಾಣಿಕೆ ಕೊರತೆಯಿಂದ, ಕರ್ತವ್ಯಲೋಪದಿಂದ ಮಾವ ಜೀವ ಹಾನಿ ಆದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದೇನೆ.

ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಪ್ರತಿ ಹಾಸ್ಟೆಲ್‌ಗಳಿಗೆ ಒಬ್ಬ ನೋಡೆಲ್‌ ಅಧಿಕಾರಿಯನ್ನು ನೇಮಿಸಬೇಕು. ಆಹಾರದ ಗುಣಮಟ್ಟ, ಶೈಕ್ಷಣಿಕ ವಾತಾವರಣ, ಕಟ್ಟಡಗಳ ಸ್ಥಿತಿ ಗತಿಯನ್ನು ಅವಲೋಕಿಸಬೇಕು. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ನೋಡಲ್‌ ಅಧಿಕಾರಿಗಳ ಮೇಲೆ ನಿಗಾ ಇಡಬೇಕು.

ಹೆಚ್‌.ಡಿ.ಕೋಟೆ ವ್ಯಾಪ್ತಿಯ ಹಾಡಿಗಳಲ್ಲಿನ 16 ಹಾಡಿಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ. ಆದರೆ ವಿದ್ಯುತ್‌ ಮಾತ್ರ ಬರುತ್ತಿಲ್ಲ. ಹಾಡಿಗಳ ಕುಡಿಯುವ ನೀರು, ಹಕ್ಕು ಪತ್ರ, ಅಂಗನವಾಡಿ, ಮನೆ, ಆಹಾರ ವಿತರಣೆ, ಹಾಡಿ ನಿವಾಸಿಗಳ ಅರಣ್ಯ ಉತ್ಪನ್ನ ಸಂಗ್ರಹ, ಮಾರಾಟದ ವಿಚಾರದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದೌರ್ಜನ್ಯ ಮತ್ತು ಅಸಹಾಕಾರದ ಬಗ್ಗೆ ಸಭೆಯಲ್ಲಿ ವ್ಯಾಪಕ ಚರ್ಚೆ ಆಗಿ ಈ ಬಗ್ಗೆ ಸೂಕ್ತವಾಗಿ ವರ್ತಿಸಲು, ಅರಣ್ಯವಾಸಿಗಳ ಜೊತೆ ಅಂತಃಕರಣದಿಂದ ವರ್ತಿಸುವಂತೆ ಸೂಚಿಸಿದ್ದೇನೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+