Caste Census Report: ಜಾತಿ ಗಣತಿ: ಜಿಲ್ಲಾಧಿಕಾರಿಗಳಿಗೆ ಶಿಕ್ಷಕರಿಗೆ ಖಡಕ್ ಸೂಚನೆ ಕೊಟ್ಟ ಸಿದ್ದರಾಮಯ್ಯ
ಬೆಂಗಳೂರು, ಸೆಪ್ಟೆಂಬರ್ 26: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ರಾಜ್ಯಾದ್ಯಂತ ಆರಂಭವಾಗಿದ್ದು, ಆರಂಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳ ಕಾರಣ ಸಮೀಕ್ಷೆ ನಿಧಾನವಾಗಿತ್ತು. ಈಗ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಇಂದಿನಿಂದ ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಲಾಗಿದೆ.
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೊ ಕಾನ್ಫರೆನ್ಸ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಪ್ರತಿ ದಿನ ಜಿಲ್ಲಾವಾರು ಕನಿಷ್ಠ ಶೇಕಡಾ 10ರಷ್ಟು ಸಮೀಕ್ಷೆ ಗುರಿಯನ್ನು ಸಾಧಿಸಬೇಕು. ಪ್ರಾದೇಶಿಕ ಆಯುಕ್ತರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸಮೀಕ್ಷೆ ಪ್ರಗತಿಯ ಪರಿಶೀಲನೆ ನಡೆಸಬೇಕು ಮತ್ತು ಸಕ್ರಿಯವಾಗಿ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಸೂಚನೆ ನೀಡಲಾಗಿದೆ.

ಸಮೀಕ್ಷೆ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಗಣತಿದಾರರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಸಮೀಕ್ಷೆ ಕಾರ್ಯಕ್ಕೆ ಯಾವುದೇ ತಾಂತ್ರಿಕ ತೊಂದರೆಗಳು ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ತಾಂತ್ರಿಕ ತೊಂದರೆಗಳು ಎದುರಾದರೆ ತಕ್ಷಣ ಅದನ್ನು ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಸಮೀಕ್ಷೆ ಕಾರ್ಯವನ್ನು ಎಲ್ಲಾ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು.
ರಾಜ್ಯದಲ್ಲಿ ಒಟ್ಟು 1,43,81,702 ಕುಟುಂಬಗಳ ಸಮೀಕ್ಷೆ ಕಾರ್ಯವನ್ನು ನಡೆಸಬೇಕಾಗಿದ್ದು, ಇದುವರೆಗೆ 2,76,016 ಕುಟುಂಬಗಳ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಲಾಗಿದೆ.
ಸಮೀಕ್ಷೆ ಕಾರ್ಯಕ್ಕೆ ಒಟ್ಟು 1,20,728 ಗಣತಿದಾರರನ್ನು ನಿಯೋಜಿಸಲಾಗಿದೆ. ಒಟ್ಟು 1,22,085 ಗಣತಿ ಬ್ಲಾಕ್‌ಗಳನ್ನು ಗುರುತಿಸಲಾಗಿದೆ. ಅಕ್ಟೋಬರ್ 7ರ ಒಳಗಾಗಿ ಗಣತಿ ಕಾರ್ಯ ಪೂರ್ಣಗೊಳ್ಳಬೇಕು. ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಎಲ್ಲಾ ಶಿಕ್ಷಕರು ತಮಗೆ ವಹಿಸಲಾಗಿರುವ ಕಾರ್ಯವನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು. ಯಾವುದೇ ಶಿಕ್ಷಕರು ಗಣತಿ ಕಾರ್ಯಕ್ಕೆ ಅಸಹಕಾರ ತೋರಿಸಬಾರದು. ಇದು ಸರ್ಕಾರಿ ಕೆಲಸವಾಗಿದ್ದು, ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಬಾರದು. ನಿರ್ಲಕ್ಷ್ಯ ವಹಿಸುವ ಗಣತಿದಾರರ ಮೇಲೆ ಕ್ರಮ ಕೈಗೊಳ್ಳಬೇಕು.
ಶಿಕ್ಷಕರಿಗೆ ಗೌರವಧನದ ಬಗ್ಗೆ ಯಾವುದೇ ಅನುಮಾನ ಬೇಡ. ಈಗಾಗಲೇ ಗೌರವಧನವನ್ನು ಬಿಡುಗಡೆ ಮಾಡಿದ್ದೇವೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಗಣತಿ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು.
ಇದು ಕೇವಲ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಮೀಕ್ಷೆಯಲ್ಲ. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ನಿಗದಿತ ಗುರಿಯ ಪ್ರಗತಿ ಬಗ್ಗೆ ಪ್ರತಿ ದಿನ ಪರಿಶೀಲನೆ ನಡೆಸಬೇಕು. ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು.
ಕೆಲವು ಜಿಲ್ಲೆಗಳಲ್ಲಿ ಸಮೀಕ್ಷೆ ನಿಧಾನಗತಿಯಲ್ಲಿದ್ದು, ಚುರುಕುಗೊಳಿಸಬೇಕು. ಅಗತ್ಯವಿರುವ ಕಡೆ ಅನುದಾನಿತ ಶಾಲೆಗಳ ಶಿಕ್ಷಕರ ಸೇವೆಯನ್ನು ಪಡೆದುಕೊಳ್ಳಬೇಕು. ಜಿಲ್ಲಾ ಉಸ್ತುವಾರಿ ಸಚಿವರೊಂದಿಗೂ ಈ ಕುರಿತು ಸಂಪರ್ಕದಲ್ಲಿರಬೇಕು. ಸಮೀಕ್ಷೆ ಕಾರ್ಯದ ಮೇಲ್ವಿಚಾರಣೆ ನಡೆಸಲು ಪ್ರತಿ ತಾಲೂಕಿಗೆ ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ.
ಜಿಲ್ಲಾ ಮಟ್ಟದಲ್ಲಿ ಯಾವುದೇ ತಾಂತ್ರಿಕ ತೊಂದರೆಗಳು ಎದುರಾದರೆ ಸ್ಥಳೀಯವಾಗಿ ಸಮಸ್ಯೆ ಬಗೆಹರಿಸಲು ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳಲ್ಲಿರುವ ಐಟಿ ತಂತ್ರಜ್ಞರ ನೆರವನ್ನು ಪಡೆದುಕೊಳ್ಳಬೇಕು.
ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಸಮೀಕ್ಷೆ ಕಾರ್ಯ ಇಂದಿನಿಂದ ಆರಂಭವಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 50ಲಕ್ಷ ಮನೆಗಳಿದ್ದು, ಆದಷ್ಟು ಬೇಗನೆ ಗಣತಿ ಕಾರ್ಯವನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು. ರಾಜ್ಯದ ಪ್ರತಿಯೊಂದು ಕುಟುಂಬಗಳ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಬೇಕು. ಯಾವುದೇ ಕುಟುಂಬ ಸಮೀಕ್ಷೆಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಬೇಕು. ಗುಡ್ಡಗಾಡು ಪ್ರದೇಶಗಳ ವ್ಯಾಪ್ತಿಯಲ್ಲಿ ಶಾಲೆಗಳಲ್ಲಿ ಸಮೀಕ್ಷೆ ಕೇಂದ್ರಗಳನ್ನು ಆರಂಭಿಸಲು ಅವಕಾಶ ನೀಡಲಾಗಿದೆ. ಜನರು ಕೇಂದ್ರಕ್ಕೆ ಬಂದು ಸಮೀಕ್ಷೆ ಕಾರ್ಯದಲ್ಲಿ ಪಾಲ್ಗೊಳ್ಳಬಹುದಾಗಿದೆ. ಆನ್‌ಲೈನ್ ಮೂಲಕ ಸಹ ಸಮೀಕ್ಷೆ ಕಾರ್ಯದಲ್ಲಿ ಭಾಗಿಯಾಗಲು ಅವಕಾಶ ಕಲ್ಪಿಸಲಾಗಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕು. ಸಮೀಕ್ಷೆ ಸಂದರ್ಭದಲ್ಲಿ ಮನೆಗಳಿಗೆ ಬೀಗ ಹಾಕಿದ್ದರೆ, ಅಂತಹ ಮನೆಗಳಲ್ಲೂ ಗಣತಿ ಕಾರ್ಯವನ್ನು ಮುಂದಿನ ದಿನಗಳಲ್ಲಿ ಕೈಗೊಳ್ಳಲು ಕ್ರಮ ಕೈಗೊಳ್ಳಬೇಕು.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications