ಸಂಪುಟ ಸೇರಲಿರುವವರ ಪಟ್ಟಿ ಹಿಡಿದು ನಾಗ್ಪುರಕ್ಕೆ ಹಾರಲಿದ್ದಾರೆ ಸಿದ್ದರಾಮಯ್ಯ
Recommended Video

ಬೆಂಗಳೂರು, ಅಕ್ಟೋಬರ್ 01: 'ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ನಾನೇ' ಎಂದು ಹೇಳಿಕೊಂಡಿರುವ ಸಿದ್ದರಾಮಯ್ಯ ಅವರು, ಹೊಸದಾಗಿ ಸಂಪುಟ ಸೇರಲಿರುವ ಕಾಂಗ್ರೆಸ್ ಶಾಸಕರ ಪಟ್ಟಿ ಹಿಡಿದು ಇಂದು ಸಂಜೆ ನಾಗ್ಪುರಕ್ಕೆ ಹಾರಲಿದ್ದಾರೆ.
ನಾಗ್ಪುರದಲ್ಲಿ ನಾಳೆ (ಅಕ್ಟೋಬರ್ 02) ಕಾಂಗ್ರೆಸ್‌ನ ಕಾರ್ಯಕಾರಿಣಿ ಸಭೆ ನಡೆಯಲಿದೆ. ಎಐಸಿಸಿ ಕಾರ್ಯಕಾರಿಣಿ ಸದಸ್ಯರಾಗಿರುವ ಸಿದ್ದರಾಮಯ್ಯ ಅವರು ಅದರಲ್ಲಿ ಪಾಲ್ಗೊಳ್ಳಲು ಇಂದು ಸಂಜೆ ನಾಗ್ಪುರಕ್ಕೆ ತೆರಳುತ್ತಿದ್ದಾರೆ.
ರಾಜ್ಯ ಕಾಂಗ್ರೆಸ್‌ಗೆ ತಲೆನೋವಾಗಿ ಪರಿಣಮಿಸಿರುವ ಸಂಪುಟ ವಿಸ್ತರಣೆಗೆ ಅಂತಿಮ ಮೊಳೆ ಹೊಡೆಯಲು ಸಂಪುಟ ಸೇರಲಿರುವ ಪಟ್ಟಿಯಲ್ಲಿ ತೆಗೆದುಕೊಂಡೇ ಸಿದ್ದರಾಮಯ್ಯ ನಾಗ್ಪುರಕ್ಕೆ ಹೊರಟಿದ್ದಾರೆ ಎನ್ನಲಾಗಿದೆ.

ನಾಗ್ಪುರದಲ್ಲಿ ರಾಹುಲ್ ಗಾಂಧಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರನ್ನು ಭೇಟಿಯಾಗಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಿ ಸಂಪುಟ ಸೇರಲಿರುವ ಶಾಸಕರ ಅಂತಿಮ ಪಟ್ಟಿಗೆ ಅಂತಿಮ ಒಪ್ಪಿಗೆ ಪಡೆದುಕೊಳ್ಳಲಿದ್ದಾರೆ. ಇವರ ಈ ಕಾರ್ಯಕ್ಕೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಹ ಸಾಥ್ ನೀಡಲಿದ್ದಾರೆ.
ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಅವರು ಇಂದು ಸಂಜೆ ನಾಗ್ಪುರಕ್ಕೆ ವಿಮಾನ ಹತ್ತಲಿದ್ದು. ನಾಳೆ ರಾತ್ರಿ ಅಥವಾ ಬುಧವಾರ ಬೆಳಿಗ್ಗೆ ನಗರಕ್ಕೆ ವಾಪಸ್ಸಾಗಲಿದ್ದಾರೆ.
ಆದಷ್ಟು ಶೀಘ್ರದಲ್ಲಿ ಸಂಪುಟ ವಿಸ್ತರಣೆ ಮಾಡಿ, ಎದುರಾಗುವ ಅಡೆತಡೆಗಳನ್ನು, ಅಸಮಾಧಾನಗಳನ್ನು ಶಮನಗೊಳಿಸಿ ಲೋಕಸಭೆ ಚುನಾವಣೆ ವೇಳೆಗೆ ಕಾಂಗ್ರೆಸ್‌ನಲ್ಲಿ ಯಾವುದೇ ಸಮಸ್ಯೆ ಇಲ್ಲದಂತೆ ಇರಿಸಿಕೊಳ್ಳಬೇಕು ಎಂದು ಹೈಕಮಾಂಡ್ ಆದೇಶ ನೀಡಿದೆ ಹಾಗಾಗಿ ಕೆಲವೇ ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡಲಾಗುತ್ತಿದೆ.












Click it and Unblock the Notifications