RSS Chapter Removed: ಹೆಡ್ಗೆವಾರ್‌ಗೆ ಕೋಕ್ ನೀಡಿ ಅಂಬೇಡ್ಕರ್ ಕವನ ಪಠ್ಯಕ್ಕೆ ಸೇರಿಸಿದ ಸರ್ಕಾರ!
ಬೆಂಗಳೂರು: ಇಷ್ಟುದಿನ ವಿವಾದದ ಗೂಡಾಗಿದ್ದ ಪಠ್ಯಪುಸ್ತಕ ಪರಿಷ್ಕರಣೆ ವಿಚಾರಕ್ಕೆ ಅಂತೂ ಕನ್‌ಕ್ಲ್ಯೂಷನ್ ಸಿಕ್ಕಿದೆ. ರಾಜ್ಯ ಸರ್ಕಾರ ಪಠ್ಯಪುಸ್ತಕ ಪರಿಷ್ಕರಣೆ ಮಾಡುವುದನ್ನು ಈಗ ಸ್ವತಃ ಶಿಕ್ಷಣ ಸಚಿವರೇ ಕನ್ಫರ್ಮ್ ಮಾಡಿದ್ದಾರೆ. ಹೆಡ್ಗೆವಾರ್‌ಗೆ ಪಠ್ಯಕ್ಕೆ ಕೋಕ್ ನೀಡಿ, ಸಂವಿಧಾನ ಶಿಲ್ಪಿ ಅಂಬೇಡ್ಕರ್‌ರ ಕವನ ಪಠ್ಯಕ್ಕೆ ಸೇರಿಸಲಿದೆಯಂತೆ ರಾಜ್ಯ ಸರ್ಕಾರ! ಹಾಗಾದರೆ ಶಿಕ್ಷಣ ಸಚಿವರು ಹೇಳಿದ್ದು ಏನು? ಸಂಪೂರ್ಣ ಮಾಹಿತಿ ಇಲ್ಲಿದೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಈ ಪ್ರಶ್ನೆ ಕಾಡುತ್ತಿತ್ತು. ಹಿಂದೆ ಬಿಜೆಪಿ ಸರ್ಕಾರ ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ್ದಾಗ ವಿವಾದ ಭುಗಿಲೆದ್ದಿತ್ತು. ಹೀಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಈ ವಿಚಾರದಲ್ಲಿ ಕಾಂಟ್ರವರ್ಸಿ ಆಗಿತ್ತು. ಇಂದು ಸಂಪುಟ ಸಭೆಯ ಬಳಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ, ರಾಜ್ಯದಲ್ಲಿ ಪಠ್ಯಪುಸ್ತಕದಲ್ಲಿ ಬದಲಾವಣೆ ಫಿಕ್ಸ್ ಎಂದಿದ್ದಾರೆ. ಈ ಮೂಲಕ ಕೆ.ಬಿ. ಹೆಡ್ಗೆವಾರ್ & ವಿನಾಯಕ ದಾಮೋದರ ಸಾವರ್ಕರ್ ಮತ್ತು ಚಕ್ರವರ್ತಿ ಸೂಲಿಬೆಲೆ ಪಠ್ಯಗಳು ಮಕ್ಕಳ ಪುಸ್ತಕದಿಂದ ಹೊರಬೀಳಲಿವೆ. ಇದರ ಜೊತೆಗೆ ಇನ್ನೊಂದು ಮಹತ್ವದ ನಿರ್ಧಾರವನ್ನೂ ರಾಜ್ಯ ಸರ್ಕಾರ ಕೈಗೊಂಡಿದೆ.

ಅಂಬೇಡ್ಕರ್ ಕವನ ಪಠ್ಯಕ್ಕೆ ಸೇರ್ಪಡೆ!
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಂಪುಟ ಸಭೆ ವಿಧಾನಸೌಧದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನ ಕೈಗೊಳ್ಳಲಾಗಿದೆ. ಪಠ್ಯ ಪರಿಷ್ಕರಣೆ ನಿರ್ಧಾರ ಕೂಡ ಇದರಲ್ಲಿ ಸೇರಿದ್ದು, ಕೆ.ಬಿ. ಹೆಡ್ಗೆವಾರ್ ಮತ್ತು ವಿನಾಯಕ ದಾಮೋದರ ಸಾವರ್ಕರ್ ಹಾಗೂ ಚಕ್ರವರ್ತಿ ಸೂಲಿಬೆಲೆ ಪಾಠಗಳನ್ನು ತೆಗೆದು. ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಕವನ ಪಠ್ಯಕ್ಕೆ ಸೇರಿಸಲು ಸರ್ಕಾರ ನಿರ್ಧರಿಸಿದೆ. ಈ ಮೂಲಕ ಕಳೆದ 1 ತಿಂಗಳಿಂದ ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಕಾಡುತ್ತಿದ್ದ ಪ್ರಶ್ನೆ ಕ್ಲಿಯರ್ ಆದಂತಾಗಿದೆ.
262 ಕೋಟಿ ರೂಪಾಯಿ ಕಥೆ ಏನು?
ಈಗಾಗಲೇ ಶಿಕ್ಷಣ ಇಲಾಖೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪರಿಷ್ಕರಣೆ ಮಾಡಿದ್ದ ಪಠ್ಯಪುಸ್ತಕ ಮುದ್ರಿಸಿಬಿಟ್ಟಿದೆ. ಶಾಲೆಗಳಿಗೂ ಮುದ್ರಣವಾಗಿರುವ ಪುಸ್ತಕ ತಲುಪಿಸಲು ಸಿದ್ಧತೆ ನಡೆಸಿದಿತ್ತು. ಕರ್ನಾಟಕದಲ್ಲಿ 72 ಸಾವಿರಕ್ಕೂ ಹೆಚ್ಚು ಸರ್ಕಾರಿ ಮತ್ತು ಖಾಸಗಿ ಅನುದಾನಿತ ಶಾಲೆಗಳಿವೆ. 1 ಕೋಟಿಗೂ ಹೆಚ್ಚು ಮಕ್ಕಳು ಓದುತ್ತಿದ್ದಾರೆ, ಈಗಾಗಲೇ ಶಿಕ್ಷಣ ಇಲಾಖೆ ಪಠ್ಯಪುಸ್ತಕ ಮುದ್ರಣ ಮಾಡಲು 262 ಕೋಟಿ ರೂಪಾಯಿ ಖರ್ಚು ಮಾಡಿದೆ. ಇದೀಗ ರಾಜ್ಯ ಸರ್ಕಾರ ಪಠ್ಯಪುಸ್ತಕ ಪರಿಷ್ಕರಣೆ ಮಾಡಿದೆ. ಆದರೆ ಇದಕ್ಕೆಲ್ಲಾ ಬಿಜೆಪಿ ಸರ್ಕಾರವನ್ನೇ ಹೊಣೆ ಮಾಡುತ್ತಿದ್ದೆ ಹೊಸ ಕಾಂಗ್ರೆಸ್ ಸರ್ಕಾರ.
ರೋಹಿತ್ ಚಕ್ರತೀರ್ಥ ವಿರುದ್ಧ ಕಾನೂನು ಕ್ರಮ?
ಬಿಜೆಪಿ ಅವಧಿಯಲ್ಲಿ ಪಠ್ಯ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ಕೈಗೊಳ್ಳಲು ಹಲವರು ಒತ್ತಾಯ ಮಾಡಿದ್ದಾರೆ. ಇದರ ಜೊತೆ ಹಲವು ಸಂಘ ಸಂಸ್ಥೆಗಳು ಕೂಡ ರೋಹಿತ್ ಚಕ್ರತೀರ್ಥ ಸಮಿತಿ ನಿರ್ಧಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿವೆ. ಈ ಹೊತ್ತಲ್ಲಿ ರಾಜ್ಯ ಸರ್ಕಾರಕ್ಕೆ 262 ಕೋಟಿ ರೂಪಾಯಿ ನಷ್ಟ ಆಗಿದೆ ಅನ್ನೋ ಆರೋಪ ಕೇಳಿ ಬಂದಿದೆ. ಹೀಗಾಗಿ ರೋಹಿತ್ ಚಕ್ರತೀರ್ಥ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತಾ ಸಿಎಂ ಸಿದ್ದರಾಮಯ್ಯ ಸರ್ಕಾರ? ಎಂಬ ಅನುಮಾನ ಭುಗಿಲೆದ್ದಿದೆ.

ಬಿಜೆಪಿ ನಾಯಕರ ತೀವ್ರ ವಿರೋಧ!
ಇಷ್ಟೆಲ್ಲದರ ನಡುವೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಶಾಸಕ ಸಿಟಿ ರವಿ ಕೂಡ ಕಾಂಗ್ರೆಸ್ ನಿರ್ಧಾರಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದು ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿದ್ದಾರೆ. ಮಾಜಿ ಶಿಕ್ಷಣ ಸಚಿವ ಬಿಸಿ ನಾಗೇಶ್ ಕೂಡ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇಷ್ಟೆಲ್ಲದರ ಮಧ್ಯೆ ಇಂದು ನಡೆದ ಸಂಪುಟ ಸಭೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ನಿರ್ಧಾರ ಕೈಗೊಂಡಿದೆ ರಾಜ್ಯ ಸರ್ಕಾರ. ಹೀಗಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಗುದ್ದಾಟಕ್ಕೆ ಹೊಸ ವಿಷಯ ಸೇರ್ಪಡೆ ಆದಂತಾಗಿದೆ. ಗ್ಯಾರಂಟಿಗಳ ವಿರುದ್ಧದ ಫೈಟ್ ರೀತಿಯೇ ಪಠ್ಯಪುಸ್ತಕ ಪರಿಷ್ಕರಣೆ ವಿಚಾರ ಕೂಡ ಕಿರಿಕ್ ತರೋದು ಗ್ಯಾರಂಟಿ.












Click it and Unblock the Notifications