ಸಿದ್ದರಾಮಯ್ಯ ವಿರುದ್ಧ ರೆಬೆಲ್ ಆದ ಶಾಸಕರಿಗೆ ಮಹತ್ವದ ಸ್ಥಾನ : ಯಾವ ಹುದ್ದೆ? ಇಲ್ಲಿದೆ ಮಾಹಿತಿ
ಬೆಂಗಳೂರು,ಡಿಸೆಂಬರ್ 30: ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳ ಪೈಕಿ 20 ಕ್ಕೂ ಹೆಚ್ಚು ಕ್ಷೇತ್ರಗಳನ್ನ ಪಡೆಯಲು ಕಾಂಗ್ರೆಸ್ ಟಾರ್ಗೆಟ್ ಹಾಕಿಕೊಂಡಿದೆ. ಅದರಂತೆ ಕಾಂಗ್ರೆಸ್ ಪಾಳಯದಲ್ಲಿರುವ ಅಸಮಾಧಾನವನ್ನ ಶಮನಗೊಳಿಸಲು ಪಕ್ಷದಲ್ಲಿ ಬಂಡಾಯಗೊಂಡ ಶಾಸಕರ ಅಸಮಾಧಾನವನ್ನ ಶಮನಗೊಳಿಸಲು ಸಿದ್ದರಾಮಯ್ಯ ಮುಂದಾಗಿದ್ದಾರೆ.
ಹೌದು, ಮಂತ್ರಿಗಿರಿ ಮೇಲೆ ಕಣ್ಣೀಟ್ಟ ಶಾಸಕರಿಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ಕೆಲ ನಾಯಕರ ವಿರುದ್ಧ ಬಹಿರಂಗವಾಗಿ ಅಸಮಾಧಾನವನ್ನ ಹೊರಹಾಕಿದ್ರು, ಈ ಅಸಮಾಧಾನ ಮುಂದಿನ ಲೋಕಸಭಾ ಚುನಾವಣೆಯ ಮೇಲೆ ಹೆಚ್ಚು ಪರಿಣಾಯ ಬೀರಲಿದೆ ಎಂಬ ಲೆಕ್ಕಾಚಾರವನ್ನ ಹಾಕಿಕೊಂಡಿದ್ದಾರೆ. ಸಚಿವ ಸ್ಥಾನ ಕೈ ತಪ್ಪಿದ ಹಿನ್ನಲೆ ಬೇಸರಗೊಂಡ ಶಾಸಕರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ನೀಡಲು ಸಿದ್ದರಾಮಯ್ಯ ಪ್ಲಾನ್ ಹಾಕಿಕೊಂಡಿದ್ರು, ಆದರೆ ನಿಗಮ ಮಂಡಳಿಯನ್ನು ತಿರಸ್ಕರಿಸಿದ್ದಾರೆ. ಹೀಗಾಗಿ ರೆಬಲ್ ಶಾಸಕರಿಗೆ ಮಹತ್ವದ ಸ್ಥಾನವನ್ನ ಸಿದ್ದರಾಮಯ್ಯ ನೀಡಿದ್ದಾರೆ.

ಸಚಿವ ಸ್ಥಾನ ಸಿಗದಿದ್ದಕ್ಕೆ ಬೇಸರಗೊಂಡು ರೆಬೆಲ್ ಆಗಿರುವ ಬಸವರಾಜ್ ರಾಯರೆಡ್ಡಿ, ಬಿ.ಆರ್ ಪಾಟೀಲ್ ಹಾಗೂ ಆರ್.ವಿ ದೇಶಪಾಂಡೆಗೆ ವಿಶೇಷ ಹುದ್ದೆಗೆ ನೇಮಕ ಮಾಡಲಾಗಿದೆ. ಅಲ್ಲದೇ ಮೂವರಿಗೂ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗಿದೆ. ಈ ಹಿಂದೆ ಶಾಸಕರ ಪತ್ರಗಳಿಗೆ ಸಚಿವರು ಕಿಮ್ಮತ್ತು ನೀಡುತ್ತಿಲ್ಲ ಎಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಆಕ್ರೋಶ ವ್ಯಕ್ತಪಡಿಸಿದ್ದ ಹಿರಿಯ ಶಾಸಕರಿಗೆ ಇದೀಗ ಸಿಎಂ ಸಿದ್ದರಾಮಯ್ಯ ಮಹತ್ತರ ಹುದ್ದೆಗಳನ್ನು ನೀಡಿದ್ದಾರೆ.

ಮೂವರು ಹಿರಿಯ ಶಾಸಕರಾದ ಆರ್. ವಿ. ದೇಶಪಾಂಡೆ, ಬಸವರಾಜ ರಾಯರೆಡ್ಡಿ ಮತ್ತು ಬಿ ಆರ್ ಪಾಟೀಲ್ ಅವರಿಗೆ ಸರ್ಕಾರದಲ್ಲಿ ಮಹತ್ವದ ಹುದ್ದೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದಾರೆ. ಇವರ ನೇಮಕಾತಿ ಕುರಿತು ಆದೇಶ ಹೊರಡಿಸಲಾಗಿದೆ. ಹಳಿಯಾಳ ಶಾಸಕ ಆರ್.ವಿ. ದೇಶಪಾಂಡೆ ಅವರನ್ನು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಅವರನ್ನು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರನ್ನಾಗಿ ನೇಮಿಸಲಾಗಿದೆ. ಆಳಂದ ಶಾಸಕ ಬಿ. ಆರ್. ಪಾಟೀಲ್ ಅವರನ್ನು ಮುಖ್ಯಮಂತ್ರಿಗಳ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ.












Click it and Unblock the Notifications