'ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ಹೈಕಮಾಂಡ್ ಬೆಂಬಲದಿಂದ ಭಯಂಕರ ಭ್ರಷ್ಟಾಚಾರ ಶುರು ಮಾಡಿದೆ'
ಹುಬ್ಬಳ್ಳಿ, ಜುಲೈ 13: ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ತನ್ನ ಹೈಕಮಾಂಡ್ ಬೆಂಬಲದಿಂದ ಭಯಂಕರ ಭ್ರಷ್ಟಾಚಾರ ಶುರು ಮಾಡಿದೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಬಂಧನ ವಿಚಾರವಾಗಿ ಮಾತನಾಡಿದ ಅವರು, ಸಂಸದ ರಾಹುಲ್ ಗಾಂಧಿಯವರ ಬೆಂಬಲದಿಂದ ಬಹುದೊಡ್ಡ ಭ್ರಷ್ಟಾಚಾರ ನಡೆಸಿದೆ. ತೆಲಂಗಾಣ ಚುನಾವಣೆ ಸಂದರ್ಭದಲ್ಲಿ ಕೋಟಿ ಕೋಟಿ ಹಣ ಸಂಗ್ರಹ ಮಾಡಿದ್ದರು ಈ ಬಗ್ಗೆ ನಾನು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಇಂದು ವಾಲ್ಮೀಕಿ ಅಭವೃದ್ದಿ ನಿಗಮದ ಭ್ರಷ್ಟಾಚಾರದಲ್ಲಿ ನೂರಾರು ಜನರಿಗೆ ಹಣ ವರ್ಗಾವಣೆ ಮಾಡಿದ್ದಾರೆ. ಇದು ಸಂಪೂರ್ಣವಾಗಿ ಸಿದ್ಧರಾಮಯ್ಯ ಹಾಗೂ ಡಿ.ಕೆ.ಶಿವಕುಮಾರಗೆ ಗೊತ್ತಿದ್ದೇ ನಡೆದಿರೋ ಭ್ರಷ್ಟಾಚಾರ ಇದು 100 % ಭ್ರಷ್ಟಾಚಾರ ಸರ್ಕಾರ. ಕೋಟಿಗಟ್ಟಲೇ ಹಣ ಗೋಣಿ ಚೀಲದಲ್ಲಿ ತುಂಬಿಟ್ಟಿದ್ದಾರೆ. 40 ದಿನಗಳಾದ್ರೂ ಸಹ ನಾಗೇಂದ್ರಗೆ ಯಾವುದೇ ನೋಟೀಸ್ ನೀಡಿಲ್ಲಈಗ ಈಡಿ ಅಧಿಕಾರಿಗಳು ನಾಗೇಂದ್ರನನ್ನ ಬಂಧನ ಮಾಡಿದ ಕೂಡಲೇ ದದ್ದಲ್ ತನ್ನನ್ನೂ ಬಂಧನ ಮಾಡುವಂತೆ ದುಂಬಾಲು ಬಿದ್ದಿದ್ದಾರೆ. ಇಡಿ ಅಧಿಕಾರಿಗಳಿಂದ ಬಂಧನವಾದ ಕೂಡಲೇ ನಾಟಕವಾಡುತ್ತಿದ್ದಾರೆ.
ಸಿದ್ಧರಾಮಯ್ಯ ಸರ್ಕಾರ ಪರಮ ಭ್ರಷ್ಟ ಸರ್ಕಾರ ಇನ್ನು ಮುಡಾ ಹಗರಣದಲ್ಲಿ ಸಿದ್ಧರಾಮಯ್ಯ ಅವರದ್ದೇ ನೇರ ಕೈವಾಡವಿದ್ದು, ಬಹಳ ವ್ಯವಸ್ಥಿತವಾಗಿ ಮುಡಾ ದಲ್ಲಿ ಬಹುಬೆಲೆ ಬಾಳುವ ನಿವೇಶನ ಗುಳುಂ ಮಾಡಿದ್ದಾರೆ ಬರೋಬ್ಬರಿ 14 ನಿವೇಶನಗಳನ್ನ ಗುಳುಂ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಒಬ್ಬ ಕರುಡ ಭ್ರಷ್ಟ ಮುಖ್ಯಮಂತ್ರಿ ಆಗಿದ್ದು, ಕೂಡಲೇ ಸಿದ್ಧರಾಮಯ್ಯ ವಿರುದ್ಧ ಸೂಕ್ತ ತನಿಖೆಯಾಗಬೇಕು. ಮುಖ್ಯಮಂತ್ರಿ ಸಿದ್ಧರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.












Click it and Unblock the Notifications