ದೀಪಾವಳಿ ಕೊಡುಗೆ: ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ
Recommended Video

ಬೆಂಗಳೂರು, ಅಕ್ಟೋಬರ್ 06: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಕೊಡುಗೆಯಾಗಿ ತುಟ್ಟಿ ಭತ್ಯೆ ಹೆಚ್ಚಳ ಮಾಡಿದೆ.
ಹಣಕಾಸು ಖಾತೆ ಹೊಂದಿರುವ ಸಿದ್ದರಾಮಯ್ಯ ಅವರು ತುಟ್ಟಿಭತ್ಯೆ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿ ಮಂಜೂರಾತಿ ನೀಡಿದ್ದಾರೆ. ನೌಕರರ ಮೂಲವೇತನದ ಶೇ. 4.25ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡುವ ನಿರೀಕ್ಷೆಯಿತ್ತು. ಆದರೆ, ಶೇ 2ರಷ್ಟು ಮಾತ್ರ ಹೆಚ್ಚಳವಾಗಿದ್ದು, ಇದು ಜುಲೈ 1ರಿಂದಲೇ ಅನ್ವಯವಾಗಲಿದೆ.

ಈ ಕೊಡುಗೆಯಿಂದ ಸುಮಾರು 6 ಲಕ್ಷ ಸರ್ಕಾರಿ ನೌಕರರಿಗೆ ಅನುಕೂಲವಾಗಲಿದೆ. ತುಟ್ಟಿಭತ್ಯೆ ಹೆಚ್ಚಳದಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಅಂದಾಜು 660 ಕೋಟಿ ರೂ. ಹೆಚ್ಚಿಗೆ ಹೊರೆಯಾಗಲಿದೆ.
ಕೇಂದ್ರ ಸರ್ಕಾರ ತನ್ನ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿದ ಬೆನ್ನಲ್ಲೇ ರಾಜ್ಯಸರ್ಕಾರವೂ ನೌಕರರ ತುಟ್ಟಿಭತ್ಯೆ ಮಾಡುವ ನಿರೀಕ್ಷೆಯಿತ್ತು. ಆದರೆ, ಸಿದ್ದರಾಮಯ್ಯ ಸರ್ಕಾರ ವಿಳಂಬ ನೀತಿ ಅನುಸರಿಸಿತು.
ರಾಜ್ಯ ಸರ್ಕಾರಿ ನೌಕರರು, ಜಿಲ್ಲಾ ಪಂಚಾಯತ್ ಗಳ ಪೂರ್ಣಾವಧಿ ನೌಕರರು, ಕಾಲಿಕ ವೇತನ ಶ್ರೇಣಿಗಳಲ್ಲಿ ಪೂರ್ಣಾವಧಿ ವರ್ಕ್ ಚಾರ್ಜ್ ನೌಕರರು, ಸರ್ಕಾರದ ಸಹಾಯಾನುದಾನ ಪಡೆಯುವ ಶಿಕ್ಷಣ ಸಂಸ್ಥೆಗಳ, ವಿಶ್ವವಿದ್ಯಾಲಯಗಳ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರಿಗೂ ತುಟ್ಟಿಭತ್ಯೆ ಹೆಚ್ಚಳದ ಲಾಭ ದೊರೆಯಲಿದೆ.
ಸರ್ಕಾರಿ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರು, ರಾಜ್ಯ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನ ಪಡೆಯುವವರು ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೂ ಈ ಹೆಚ್ಚಳ ಅನ್ವಯವಾಗಲಿದೆ.
ತುಟ್ಟಿ ಭತ್ಯೆ(dearness allowance) : ಭಾರತದಲ್ಲಿ, ತುಟ್ಟಿಭತ್ಯೆಯು ಒಬ್ಬ ವ್ಯಕ್ತಿಯ ಸಂಬಳದ ಭಾಗವಾಗಿದೆ. ತುಟ್ಟಿಭತ್ಯೆಯನ್ನು ಮೂಲ ಸಂಬಳದ ಶೇಕಡಾವಾರು ಲೆಕ್ಕ ಆಧಾರಿಸಿ ಲೆಕ್ಕಮಾಡಲಾಗುತ್ತದೆ. ನಂತರ, ಈ ಮೊತ್ತವನ್ನು ಮನೆ ಬಾಡಿಗೆ ಭತ್ಯೆಯ ಜೊತೆಗೆ ಮೂಲ ಸಂಬಳಕ್ಕೆ ಸೇರಿಸಿ ಒಟ್ಟು ಸಂಬಳವನ್ನು ಪಡೆಯಲಾಗುತ್ತದೆ. ದರಗಳು ಗ್ರಾಮೀಣ/ನಗರ ಪ್ರದೇಶಗಳ ಪ್ರಕಾರ ಬದಲಾಗುತ್ತವೆ.
-
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications