Liquor Price: ಲೋಕಸಭೆ ಚುನಾವಣೆ ನಂತರ ಮದ್ಯ ಪ್ರಿಯರಿಗೆ ಶಾಕ್ ನೀಡಲಿದೆ ಸಿದ್ದರಾಮಯ್ಯ ಸರ್ಕಾರ
ಬೆಂಗಳೂರು, ಮೇ. 18: 2024-25ನೇ ಸಾಲಿನ ಬಜೆಟ್ ಮಂಡನೆ ವೇಳೆ ರಾಜ್ಯದಲ್ಲಿ ಮದ್ಯದ ದರ ಮತ್ತೆ ಹೆಚ್ಚಿಸಲು ಸಿದ್ದರಾಮಯ್ಯ ಸರ್ಕಾರ ನಿರ್ಧರಿಸಿ ಮದ್ಯ ಪ್ರಿಯರಿಗೆ ಶಾಕ್ ನೀಡಿತ್ತು. ಬಳಿಕ ಅಬಕಾರಿ ಸ್ಲಾಬ್‌ಗಳ ಮೇಲೆ ಇದ್ದ ತೆರಿಗೆಯನ್ನು ಕಡಿಮೆ ಮಾಡುವ ಬಗ್ಗೆ ಘೋಷಿಸಿತ್ತು. ಐಎಂಎಲ್ ಮತ್ತು ಬಿಯರ್‌ನ ತೆರಿಗೆ ಸ್ಲಾಬ್‌ಗಳನ್ನು ಪರಿಷ್ಕರಿಸಲಾಗುವುದು ಎಂದು ತಿಳಿಸಿತ್ತು. ಈಗ ಮತ್ತೆ ಮದ್ಯ ಪ್ರಿಯರಿಗೆ ಶಾಕ್ ನೀಡಲು ಮುಂದಾಗಿದೆ.
ಕಾಂಗ್ರೆಸ್ ತನ್ನ ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಒದಗಿಸಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಈ ಯೋಜನೆಗಳಿಗೆ ಆರ್ಥಿಕ ಬಿಕ್ಕಟ್ಟು ಉಂಟಾಗದಂತೆ ತಡೆಯಲು ಅಗ್ಗದ ಮದ್ಯದ ಬೆಲೆಯನ್ನು ಹೆಚ್ಚಿಸಲು ಸರ್ಕಾರ ಸದ್ದಿಲ್ಲದೆ ಯೋಜನೆಗಳನ್ನು ರೂಪಿಸುತ್ತಿದೆ. ಲೋಕಸಭೆ ಚುನಾವಣೆಯ ನಂತರ ಈ ಆದೇಶ ಜಾರಿಗೆ ಬರಲಿದೆ.

ಚುನಾವಣೆ ಬಳಿಕ ಹೆಚ್ಚಾಗಲಿದೆ ಮದ್ಯದ ಬೆಲೆ!
ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ಮತ್ತು ಕೇರಳದಂತಹ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕವು ಅನೇಕ ಬ್ರಾಂಡ್‌ಗಳ ಮದ್ಯದ ಬೆಲೆ ಕಡಿಮೆಯಿದೆ. ಹೀಗಾಗಿ ಗ್ಯಾರಂಟಿ ಯೋಜನೆಗಳಿಗೆ ಆರ್ಥಿಕ ಸಂಪನ್ಮೂಲಗಳನ್ನು ಹೆಚ್ಚಿಸುವ ತನ್ನ ಪ್ರಯತ್ನಗಳಲ್ಲಿ, ದೇಶೀಯ ಮದ್ಯದ (IML) ಬೆಲೆಗಳನ್ನು ಹೆಚ್ಚಿಸುವ ಕಡೆಗೆ ಸರ್ಕಾರ ತನ್ನ ಗಮನ ಹರಿಸಿದೆ.
ರಾಜ್ಯದ ಬೊಕ್ಕಸಕ್ಕೆ ಹರಿದು ಬರುವ ಆದಾಯದಲ್ಲಿ ಸಿಂಹಪಾಲಿರುವುದು ಅಬಕಾರಿ ಇಲಾಖೆಗೆ. ಸರ್ಕಾರದ ಆದಾಯಕ್ಕೆ ಗಣನೀಯ ಕೊಡುಗೆ ನೀಡುತ್ತದೆ. ಆದರೆ, ಹೊರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹಲವು ಸ್ಪ್ಯಾಬ್‌ಗಳ ಅಗ್ಗದ ಮದ್ಯಗಳ ಬೆಲೆ ತುಂಬಾ ಕಡಿಮೆಯಿದೆ. ಇದು ರಾಜ್ಯದೊಳಗೆ ಅಗ್ಗದ ಮದ್ಯದ ಮಾರಾಟ ಹೆಚ್ಚಾಗಲು ಕಾರಣವಾಗಿದೆ. ಹೀಗಾಗಿ ಸರ್ಕಾರ ಮದ್ಯದ ಬೆಲೆ ಹೆಚ್ಚಿಸಲು ಚಿಂತನೆ ನಡೆಸುತ್ತಿದೆ.

ಕರ್ನಾಟಕದಲ್ಲಿ ಮದ್ಯದ ಬ್ರ್ಯಾಂಡ್‌ಗಳನ್ನು ಬೆಲೆಯ ಆಧಾರದ ಮೇಲೆ 18 ಬ್ಯಾಂಡ್‌ಗಳಾಗಿ ವರ್ಗೀಕರಿಸಲಾಗಿದೆ. ಮದ್ಯ ಮಾರಾಟದಿಂದ ಬರುವ ಆದಾಯದಲ್ಲಿ ಮೊದಲ ಐದು ಬ್ಯಾಂಡ್‌ಗಳು ಶೇ.75ರಷ್ಟು ಕೊಡುಗೆ ನೀಡುತ್ತವೆ. ಆದಾಯವನ್ನು ಹೆಚ್ಚಿಸುವ ಪ್ರಯತ್ನದಲ್ಲಿ, ಎರಡರಿಂದ ಐದನೇ ಬ್ಯಾಂಡ್‌ಗಳಲ್ಲಿ ಮದ್ಯದ ಬೆಲೆಯನ್ನು ಶೇಕಡಾ 100 ರಷ್ಟು ಹೆಚ್ಚಿಸಲು ಸರ್ಕಾರ ಯೋಜಿಸಿದೆ. ಇದರ ಪರಿಣಾಮವಾಗಿ ಶೇಕಡಾ 7 ರಿಂದ 8 ರಷ್ಟು ಬೆಲೆ ಏರಿಕೆಯಾಗುವ ನಿರೀಕ್ಷೆಯಿದೆ.
ದೇಶೀಯ ಮದ್ಯದ ಬೆಲೆಯನ್ನು ಜುಲೈ 2023 ರಲ್ಲಿ ಕೊನೆಯದಾಗಿ ಹೆಚ್ಚಿಸಲಾಗಿದ್ದರೂ, ನಂತರ ಯಾವುದೇ ಪರಿಷ್ಕರಣೆ ಮಾಡಲಾಗಿಲ್ಲ. ಸರ್ಕಾರವು ತನ್ನ ಬಜೆಟ್‌ನಲ್ಲಿ ಘೋಷಣೆಯಂತೆ, ಲೋಕಸಭೆ ಚುನಾವಣೆಯ ನಂತರ ನೆರೆಯ ರಾಜ್ಯಗಳ ಬೆಲೆಗಳನ್ನು ನೋಡಿ ಕರ್ನಾಟಕದಲ್ಲಿ ಮದ್ಯದ ಬೆಲೆಯನ್ನು ಹೆಚ್ಚಳ ಮಾಡಲು ಉದ್ದೇಶಿಸಿದೆ. ಈ ನಿಟ್ಟಿನಲ್ಲಿ, ಇತರ ರಾಜ್ಯಗಳಲ್ಲಿ ಚಾಲ್ತಿಯಲ್ಲಿರುವ ಸರಾಸರಿ ದರಗಳ ಆಧಾರದ ಮೇಲೆ ರಾಜ್ಯದಲ್ಲಿಯೂ ಬೆಲೆ ಹೆಚ್ಚಳಕ್ಕೆ ಸರ್ಕಾರ ಯೋಜಿಸಿದೆ.
ಕಡಿಮೆಯಾಗಲಿದೆ ದುಬಾರಿ ಬ್ರ್ಯಾಂಡ್ ಬೆಲೆ
ಅಗ್ಗದ ಮದ್ಯದ ಬ್ರ್ಯಾಂಡ್‌ಗಳ ಬೆಲೆಗಳನ್ನು ಹೆಚ್ಚಿಸಲು ಚಿಂತಿಸಲಾಗುತ್ತಿದೆ. ಆದರೆ, ಹೆಚ್ಚು ದುಬಾರಿ ಬ್ರ್ಯಾಂಡ್‌ಗಳು ಬೇರೆಡೆ ದರಗಳೊಂದಿಗೆ ಹೊಂದಾಣಿಕೆ ಮಾಡಲು ಬೆಲೆ ಇಳಿಕೆ ಮಾಡಲಾಗುತ್ತದೆ. ಅರೆ ಪ್ರೀಮಿಯಂ ಮದ್ಯಗಳು ಶೇಕಡಾ 10 ರಷ್ಟು ಕಡಿತವನ್ನು ಕಾಣಬಹುದು. ಹಾಗೆಯೇ ಪ್ರೀಮಿಯಂ ವಿದೇಶಿ ಬ್ರಾಂಡ್‌ಗಳ ಬೆಲೆಗಳು ಶೇಕಡಾ 12 ರಿಂದ 15 ರಷ್ಟು ಕಡಿಮೆಯಾಗಬಹುದು.
2023 ರ ವಿಧಾನಸಭಾ ಚುನಾವಣೆಯ ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರವು ಈಗಾಗಲೇ ಮೂರು ಬಾರಿ ಬಿಯರ್ ಬೆಲೆಯನ್ನು ಹೆಚ್ಚಿಸಿದೆ. ಆರಂಭದಲ್ಲಿ ಶೇ.20ರಷ್ಟು ಹೆಚ್ಚುವರಿ ಸುಂಕ ವಿಧಿಸಲಾಗಿದ್ದು, ನಂತರ ಹೆಚ್ಚುವರಿ ಅಬಕಾರಿ ಸುಂಕವನ್ನು (ಎಇಡಿ) 185 ರಿಂದ ಶೇ.195ಕ್ಕೆ ಹೆಚ್ಚಿಸಲಾಗಿದೆ. ಇದರ ಪರಿಣಾಮವಾಗಿ ಬಿಯರ್ ಬೆಲೆಗಳು ಪ್ರತಿ ಬಾಟಲಿಗೆ ರೂ 8 ರಿಂದ 15 ರೂಪಾಯಿಯಷ್ಟು ಏರಿಕೆಯಾಯಿತು. ಕಳೆದ ಏಳೆಂಟು ತಿಂಗಳುಗಳಲ್ಲಿ ಬಿಯರ್ ಬೆಲೆಯು ಪ್ರತಿ ಬಾಟಲಿಗೆ ಸುಮಾರು 40 ರೂ.ಗಳಷ್ಟು ಏರಿಕೆಯಾಗಿದೆ.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ










Click it and Unblock the Notifications