ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಮೇ ತಿಂಗಳಲ್ಲಿ ಉರುಳಲಿದೆ: ಭವಿಷ್ಯ ನುಡಿದ ಮಾಜಿ ಸಿಎಂ
ಬೆಂಗಳೂರು, ಡಿಸೆಂಬರ್ 11: ವಿಧಾನಸಭಾ ಚುನಾವಣೆಯಲ್ಲಿ ಬರೋಬ್ಬರಿ 135 ಸ್ಥಾನಗಳನ್ನ ಗೆದ್ದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷಗಳು ತಿರುಗಿ ಬಿದಿದ್ದು, ಸಿದ್ದರಾಮಯ್ಯ ಸರ್ಕಾರ ಪತನವಾಗಲಿ ಎಂದು ಹಲವು ವಿಪಕ್ಷ ನಾಯಕರು ಭವಿಷ್ಯ ನುಡಿಯುತ್ತಿದ್ದಾರೆ.
ಹೌದು, ಸಿದ್ದರಾಮಯ್ಯ ಸರ್ಕಾರ ಉರುಳಲಿದೆ ಅಂತ ಹೇಳೋದನ್ನು ಜೆಡಿಎಸ್ ಪಕ್ಷದ ರಾಜ್ಯಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಮುಂದುವರಿಸಿದ್ದಾರೆ. ಭಾನುವಾರ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ಮಾತಾಡಿದ ಅವರು, ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಮೇ ತಿಂಗಳಲ್ಲಿ ಉರುಳಲಿದೆ ಎಂದು ಹೇಳಿದರು.

ಇನ್ನೂ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ಸ್ಥಗಿತಗೊಂಡಿದ್ದರೆ ಅದಕ್ಕೆ ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳು, ಮೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಉರುಳುತ್ತೆ ಮತ್ತು ಅದಾದ ಬಳಿಕವೇ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಶುರುವಾಗುತ್ತವೆ ಎಂದು ಹೇಳಿದರು.
50-60 ಮಂದಿ ಶಾಸಕರ ಜೊತೆ ಪ್ರಭಾವಿ ಸಚಿವ ಬಿಜೆಪಿ ಸೇರ್ಪಡೆ
ತಮ್ಮ ಅಕ್ರಮಗಳಿಂದ ಪಾರಾಗಲು ಬಿಜೆಪಿ ಕೇಂದ್ರ ನಾಯಕರ ಜತೆ ಚೌಕಾಸಿ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರದ ಪ್ರಭಾವೀ ಮಂತ್ರಿಯೊಬ್ಬರು ಐವತ್ತು-ಅರವತ್ತು ಶಾಸಕರನ್ನು ಕರೆದುಕೊಂಡು ಹೋಗಲು ಸಿದ್ಧವಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ಸರಕಾರದಲ್ಲಿ ಎಲ್ಲವೂ ಸರಿ ಇಲ್ಲ. ಈ ಸರಕಾರ ಯಾವಾಗ ಹೋಗುತ್ತೋ ಗೊತ್ತಿಲ್ಲ. ಪ್ರಭಾವೀ ಮಂತ್ರಿಯೊಬ್ಬರು ತಮ್ಮ ಮೇಲಿರುವ ಅಕ್ರಮಗಳಿಂದ ಪಾರಾಗಲು ಹರಸಾಹಸ ಮಾಡುತ್ತಿದ್ದಾರೆ. ಕೇಂದ್ರ ಬಿಜೆಪಿ ನಾಯಕರ ಕೈಕಾಲು ಕಟ್ಟುತ್ತಿದ್ದಾರೆ. ಸುಮಾರು ಐವತ್ತು-ಅರವತ್ತು ಶಾಸಕರನ್ನು ಕರೆದುಕೊಂಡು ಬೇಲಿ ಹಾರಲು ತಯಾರಿ ನಡೆಸುತ್ತಿದ್ದಾರೆ ಎಂದು ಯಾರೋ ಮೊನ್ನೆ ನನಗೆ ಮಾಹಿತಿ ನೀಡಿದರು ಎಂದರು.

ಸಣ್ಣಪುಟ್ಟವರು ಹೋಗಲು ಆಗುತ್ತದೆಯೇ? ದೊಡ್ಡವರು, ಅದರಲ್ಲೂ ಪ್ರಭಾವೀಗಳೇ ಈ ಸಾಹಸ ಮಾಡಲು ಸಾಧ್ಯ? ಅಯ್ಯೋ ದಯವಿಟ್ಟು ನಿಮ್ಮ ಜೊತೆ ಬಂದುಬಿಡ್ತಿನಿ. ಅಲ್ಲಿಯವರೆಗೂ ಐದಾರು ತಿಂಗಳು ರಿಲೀಫ್ ಕೊಡಿ ಅಂತ ಬೇಡಿಕೊಂಡು ಹೋಗಿದ್ದು ಗೊತ್ತು. ಮಹಾರಾಷ್ಟ್ರದಲ್ಲಿ ನಡೆದಂತೆ ಇಲ್ಲಿ ಯಾರು ಹುಟ್ಟಿಕೊಳ್ಳುತ್ತಾರೋ ಗೊತ್ತಿಲ್ಲ. ಈ ದೇಶದಲ್ಲಿ ಇವತ್ತಿನ ರಾಜಕಾರಣದಲ್ಲಿ ನೋಡಿದಾಗ ಏನು ಬೇಕಾದರೂ ನಡೆಯಬಹುದು. ಇಲ್ಲಿ ಯಾರಿಗೂ ಪ್ರಮಾಣಿಕತೆ, ನಿಷ್ಠೆ ಅನ್ನುವುದು ಉಳಿದಿಲ್ಲ. ಅವರವರ ಸ್ವಾರ್ಥಕ್ಕೆ ಏನೇನು ಆಗಬೇಕು ಮಾಡಿಕೊಂಡು ಹೋಗುತ್ತಿದ್ದಾರೆ ಅಷ್ಟೇ. ಇವತ್ತು ಇಲ್ಲಿ ಇರುತ್ತಾರೆ, ಅನುಕೂಲ ಆಗಬೇಕಾದರೆ ಇನ್ನೊಂದು ಕಡೆ ಹೋಗುತ್ತಾರೆ. ಇದು ಇವತ್ತಿನ ರಾಜಕಾರಣ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ವಿರುದ್ದ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ ನಡೆಸಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬರೀ ಹರಿಪ್ರಸಾದ್ ಅಲ್ಲ. ಇನ್ನೂ ಸಾಕಷ್ಟು ಜನ ಇದ್ದಾರೆ. ಒಂದೊಂದೇ ಧ್ವನಿ ಹೊರ ಬರುತ್ತದೆ ಎಂದರು ಅವರು. ಪಾಪ.. ಹರಿಪ್ರಸಾದ್ ಅವರ ಹೆಸರನ್ನಷ್ಟೇ ಏಕೆ ಹೇಳುತ್ತೀರಿ? ಅಧಿಕಾರದಲ್ಲಿ ಉಳಿದುಕೊಳ್ಳಲು ವ್ಯಾಪಾರ ಮಾಡಲು ಹೋಗಿದ್ದಾರೆ. ಮಾಡಿರುವ ಅಕ್ರಮಗಳನ್ನು ಸರಿಪಡಿಸಿಕೊಳ್ಳಲು ಹೋಗಿರುವ ಮಾಹಿತಿಯೂ ಇದೆ ನನಗೆ. ಹರಿಪ್ರಸಾದ್ ಒಬ್ಬರ ಹೆಸರು ಯಾಕೆ ಹೇಳ್ತೀರಾ? ಎಂದು ಪ್ರಶ್ನಿಸಿದರು.












Click it and Unblock the Notifications