7th Pay Commission: ಏಳನೇ ವೇತನ ಆಯೋಗ ವರದಿ ಸಲ್ಲಿಕೆ: ಶೇ. 27.5 ರಷ್ಟು ಹೆಚ್ಚಳಕ್ಕೆ ಶಿಫಾರಸು: ಸಿದ್ದರಾಮಯ್ಯ ಏನಂದ್ರು?
ಬೆಂಗಳೂರು, ಮಾರ್ಚ್ 16: ರಾಜ್ಯದ 7ನೇ ವೇತನ ಆಯೋಗವು ಇಂದು( ಶನಿವಾರ) ವರದಿಯನ್ನು ಸಲ್ಲಿಸಿದ್ದು ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು
ಗುರುವಾರ ನಿವೃತ್ತ ಕಾರ್ಯದರ್ಶಿ ಮುಖ್ಯ ಕಾರ್ಯದರ್ಶಿ, ಕೆ ಸುಧಾಕರ ರಾವ್ ಅಧ್ಯಕ್ಷತೆಯ ಏಳನೇ ವೇತನ ಆಯೋಗದ ವರದಿ ಸ್ವೀಕರಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವೇತನ ಆಯೋಗದ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿತ್ತು. ಈ ಅವಧಿಯು ಮಾರ್ಚ್ 15ರಂದು ಮುಕ್ತಾಯಗೊಂಡಿದೆ.

ನಿನ್ನೆ ನಾನು ಮೈಸೂರಿನಲ್ಲಿದ್ದ ಕಾರಣ ವರದಿ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಅದಕ್ಕಾಗಿ ಇಂದು ವರದಿಯನ್ನು ಸ್ವೀಕರಿಸಲಾಗಿದೆ. ವರದಿಯಲ್ಲಿ ಕನಿಷ್ಠ ಮೂಲವೇತನವನ್ನು 17000 ರೂ ಗಳಿಂದ 27 ಸಾವಿರ ರೂಗಳಿಗೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದೆ. ಇದರೊಂದಿಗೆ ಇನ್ನೂ ಅನೇಕ ಶಿಫಾರಸುಗಳಿದ್ದು ವರದಿಯನ್ನು ಆರ್ಥಿಕ ಇಲಾಖೆಗೆ ನೀಡಲಾಗಿದೆ. ಆರ್ಥಿಕ ಇಲಾಖೆಯು ವರದಿಯನ್ನು ಕೂಲಂಕಷವಾಗಿ ಅಧ್ಯಯನ ಮಾಡಿದ ನಂತರ ನೀಡುವ ಸಲಹೆಗಳ ಆಧಾರದಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಆಯೋಗದ ಸದಸ್ಯರಾದ ಪಿ.ಬಿ. ರಾಮಮೂರ್ತಿ, ಶ್ರೀಕಾಂತ್ ವನಹಳ್ಳಿ , ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಕಾ ಡಾ.ಕೆ.ವಿ. ತ್ರಿಲೋಕಚಂದ್ರ, ಹಣಕಾಸು ಇಲಾಖೆ ಕಾರ್ಯದರ್ಶಿ ಡಾ. ಪಿ.ಸಿ. ಜಾಫರ್, ವೇತನ ಆಯೋಗದ ಸದಸ್ಯ ಕಾರ್ಯದರ್ಶಿ ಹೆಫ್ಸಿಬಾರಾಣಿ ಕೊರ್ಲಪಾಟಿ ಉಪಸ್ಥಿತರಿದ್ದರು.
-
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications