ʼರಾಜ್ಯದ ಎಲ್ಲಾ ಶಾಸಕರಿಗೆ ಬಂಪರ್ ಗಿಫ್ಟ್; ಪ್ರತಿ ಕ್ಷೇತ್ರಕ್ಕೂ ಕೋಟಿ.. ಕೋಟಿ.. ಅನುದಾನʼ
ತುಮಕೂರು, ನವೆಂಬರ್ 29: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ಶಾಸಕರಿಗೆ 25 ಕೋಟಿ ರೂ. ಅನುದಾನ ನೀಡಲು ತೀರ್ಮಾನ ಮಾಡಿದ್ದಾರೆ. ವಿರೋಧ ಪಕ್ಷದ ಶಾಸಕರಿಗೂ 10 ರಿಂದ 15 ಕೋಟಿ ರೂ. ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಗೃಹ ಸಚಿವರಾದ ಪರಮೇಶ್ವರ್ ಹೇಳಿದ್ದಾರೆ. ಈ ಮೂಲಕ ರಾಜ್ಯದ ಎಲ್ಲಾ ಶಾಸಕರಿಗೆ ಬಂಪರ್ ಗಿಫ್ಟ್ ಸಿಗಲಿದೆ.
ಈ ಕುರಿತು ತುಮಕೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿ, ಈ ಹಿಂದಿನ ಬಿಜೆಪಿ ಸರ್ಕಾರವು ಕಾಂಗ್ರೆಸ್ ಪಕ್ಷದ ಶಾಸಕರಿಗೆ 10 ಕೋಟಿ ರೂ. ನೀಡುತ್ತಿದ್ದರು. ತಮ್ಮ ಪಕ್ಷದ ಶಾಸಕರಿಗೆ 50 ಕೋಟಿ ರೂ. ಅನುದಾನ ನೀಡಿದ್ದರು ಎಂದು ಗೃಹ ಸಚಿವರಾದ ಪರಮೇಶ್ವರ್ ಅವರು ಆರೋಪಿಸಿದರು.
ತುಮಕೂರು ಜಿಲ್ಲೆಯಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ವಿವಿಧ ಇಲಾಖೆಗಳ ಯೋಜನೆಯ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲು ಡಿ.2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು.
ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದೆ. ಇಂಧನ ಸಚಿವ ಕೆ.ಜೆ.ಜಾರ್ಜ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಬೃಹತ್ ಕೈಗಾರಿಕೆ ಸಚಿವ ಎಂಬಿ.ಪಾಟೀಲ್, ಕಂದಾಯ ಸಚಿವ ಕೃಷ್ಣಬೈರೇಗೌಡ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಮುಂತಾದ ಸಚಿವರು, ಜಿಲ್ಲೆಯ ಎಲ್ಲ ಕ್ಷೇತ್ರಗಳ ಶಾಸಕರು ಹಾಗೂ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದರು.
ಸುಮಾರು ರೂ. 938 ಕೋಟಿ ಮೊತ್ತದ 825 ಕಾಮಗಾರಿಗಳಿಗೆ ಶಂಕುಸ್ಥಾಪನೆ, 94 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ನೂತನ ಕಾಮಗಾರಿಗಳ ಉದ್ಘಾಟನೆ. ವಿವಿಧ ಇಲಾಖೆಗಳ 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು ವಿತರಣೆ, ಕಂದಾಯ ಇಲಾಖೆಯಿಂದ ಇ-ಸ್ವತ್ತು, ಹಕ್ಕು ಪತ್ರ ವಿತರಿಸಲಾಗುವುದು ಎಂದು ತಿಳಿಸಿದರು.
ಕೃಷಿ ಇಲಾಖೆಯಿಂದ ಫಲಾನುಭವಿ ರೈತರಿಗೆ ಟ್ರ್ಯಾಕ್ಟರ್, ಡೀಸೆಲ್ ಇಂಜಿನ್, ಪಿವಿಸಿ ಪೈಪ್, ತುಂತುರು ನೀರಾವರಿಯ ಕಿಟ್‌ಗಳು, ತೋಟಗಾರಿಕೆ ಇಲಾಖೆಯಲ್ಲಿ ಹನಿನೀರಾವರಿ, ಪವರ್‌ಫೀಡರ್ಸ್, ರೇಷ್ಮೇ ಇಲಾಖೆಯ 2100 ಫಲಾನುಭವಿಗಳಿಗೆ ಸೋಂಕು ನಿವರಣಾ ಕಿಟ್, ದೇವರಾಜು ಅರಸು ನಿಗಮದಿಂದ ಮಹಿಳೆಯರಿಗೆ 200 ಹೊಲಿಗೆ ಯಂತ್ರ, ಟ್ಯಾಕ್ಸಿ, ಕಾರ್ಮಿಕ ಇಲಾಖೆಯಿಂದ ವೆಲ್ಡಿಂಗ್ ಟೂಲ್ ಕಿಟ್ ಸೇರಿದಂತೆ ಜಿಲ್ಲಾಡಳಿತ ಗುರುತಿಸಿರುವ 1.50 ಲಕ್ಷ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳನ್ನು ಹಂಚಿಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ನಮ್ಮ ಸರ್ಕಾರವು ಎಲ್ಲ ಯೋಜನೆಗಳನ್ನು ಅನುಷ್ಟಾನಗೊಳಿಸುತ್ತಿದೆ. ಅಲ್ಲದೇ, ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದೇವೆ ಎಂಬುದು ಜನಸಮೂಹಕ್ಕೆ ಸಂದೇಶ ರವಾನೆಯಾಗಬೇಕು. ಸರ್ಕಾರದ ಮೇಲೆ ಟೀಕೆ ಟಿಪ್ಪಣಿಗಳನ್ನು ಮಾಡುವವರಿಗೆ ಉತ್ತರವಾಗಲಿದೆ ಎಂದರು.
ಕಂದಾಯ ಇಲಾಖೆಯಿಂದ 2000 ಸಾವಿರ ಹಕ್ಕು ಪತ್ರಗಳನ್ನು ಹಂಚಿಕೆ ಮಾಡಲಾಗುವುದು. ಗ್ಯಾರಂಟಿ ಯೋಜನೆಗಳನ್ನು ನೀಡುವ ಮೂಲಕ ನಮ್ಮ ಸರ್ಕಾರವು ಮಹಿಳಾ ಸಬಲೀಕರಣಕ್ಕೆ ಹೆಚ್ಚು ಪ್ರಾತಿನಿದ್ಯ ನೀಡಿದೆ. ಸಂಜೀವಿನಿ ಕಾರ್ಯಕ್ರಮದಡಿ 40 ಸಾವಿರ ಮಹಿಳೆಯರಿಗೆ 40 ಕೋಟಿ ರೂ. ನೀಡಲಾಗುತ್ತಿದೆ. ಎಲ್ಲ ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂಬುದು ನಮ್ಮ ಸರ್ಕಾರದ ಉದ್ದೇಶ ಎಂದು ತಿಳಿಸಿದರು.
ಜಿಲ್ಲೆಯ ಹಲವು ವರ್ಷಗಳ ಬೇಡಿಕೆಯಾದ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು. ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ಕೆಎಸ್‌ಸಿಎ ಅಧ್ಯಕ್ಷ ಎ.ರಘುರಾಮ್ ಭಟ್, ಕಾರ್ಯದರ್ಶಿ ಶಂಕರ್ ಸೇರಿದಂತೆ ಮುಂತಾದವರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಪಿ.ಗೊಲ್ಲಹಳ್ಳಿ ಮತ್ತು ಸೂರೆಕುಂಟೆ ವ್ಯಾಪ್ತಿಯಲ್ಲಿ 41 ಎಕರೆ ಭೂಮಿಯನ್ನು ಕೆಐಎಡಿಬಿ ವತಿಯಿಂದ ಕೆಎಸ್‌ಸಿಎ ಅವರಿಗೆ ಹಸ್ತಾಂತರಿಸಿದ್ದೇವೆ. ರೂ. 150 ಕೋಟಿ ವೆಚ್ಚದ ಸುಸಜ್ಜಿತ ಸ್ಟೇಡಿಯಂ, ನಿರ್ಮಾಣವಾಗುತ್ತಿದ್ದು, ಎರಡು ವರ್ಷದೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.
ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾಮಗಾರಿ, ಶಂಕುಸ್ಥಾಪನೆಗಳಿವೆ. ಯೋಜನೆಗಳ ಫಲಾನುಭವಿಗಳಿದ್ದಾರೆ. ಎಲ್ಲ ಕ್ಷೇತ್ರಗಳ ಅಭಿವೃದ್ಧಿಯಾದರೆ ಜಿಲ್ಲೆಯ ಅಭಿವೃದ್ಧಿ ಸಾಧ್ಯ. ಎಲ್ಲ ಜಿಲ್ಲೆಗಳ ಅಭಿವೃದ್ಧಿಯಾದರೆ ರಾಜ್ಯ ಅಭಿವೃದ್ಧಿಯಾಗುತ್ತದೆ ಎಂಬುದು ನಮ್ಮ ದೂರದೃಷ್ಟಿ. ಅಭಿವೃದ್ಧಿ ಕಾರ್ಯಕ್ರಮಗಳಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿಯವರಿಗೆ ವಿಪಕ್ಷದ ಶಾಸಕರು ಕಪ್ಪು ಭಾವುಟ ತೋರಿಸುವ ಅಗತ್ಯವಿಲ್ಲ ಎಂದು ಹೇಳಿದರು.
ತುಮಕೂರಿಗೆ ಮೆಟ್ರೋ ರೈಲು ಯೋಜನೆ ಡಿಪಿಆರ್ ನಡೆಯುತ್ತಿದೆ. ಹೈದ್ರಾಬಾದ್ ಮೂಲದ ಕಂಪನಿಗೆ ಟೆಂಡರ್ ಆಗಿದ್ದು, ಒಂದೂವರೆ ತಿಂಗಳಿಂದ ಮಾಡುತ್ತಿದೆ. ವಸಂತಾನರಸಾಪುರಲ್ಲಿ ಕೈಗಾರಿಕಾ ಪ್ರದೇಶದಲ್ಲಿ ಪಿಪಿಪಿ ಮಾದರಿಯಲ್ಲಿ ಟೌನ್‌ಶಿಪ್ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು. ಇನ್ನೂ ಡಿಸೆಂಬರ್ 5ರಂದು ಹಾಸನದಲ್ಲಿ ನಡೆಯುವ ಕಾರ್ಯಕ್ರಮದ ಕುರಿತು ನನ್ನ ಪ್ರತಿಕ್ರಿಯೆಯನ್ನು ಖಾಸಗಿ ಸುದ್ದಿ ವಾಹಿನಿಯೊಂದು ತಪ್ಪಾಗಿ ಸುದ್ದಿ ಪ್ರಸಾರ ಮಾಡಿದೆ ಎಂದು ಹೇಳಿದರು.
ಹಾಸನದ ಕಾರ್ಯಕ್ರಮದ ಕುರಿತು ಮಾತನಾಡಿ, ಅದರ ನನಗೆ ಗೊತ್ತಿಲ್ಲ ಎಂದು ಹೇಳಿದ್ದೆ. ಇದನ್ನು ಆಧರಿಸಿ, ಪರಮೇಶ್ವರ ಮತ್ತು ಸಿದ್ದರಾಮಯ್ಯ ಅವರು ಎಣ್ಣೆಸೀಗೆಕಾಯಿ ಎಂದು ತಪ್ಪಾಗಿ ಸುದ್ದಿ ಪ್ರಸಾರ ಮಾಡಲಾಗಿದೆ. ನಾನು ಮತ್ತು ರಾಜಣ್ಣ ಮಾತಾಡಿಕೊಂಡು, ಮೊದಲು ತುಮಕೂರಿನಲ್ಲಿ ಸ್ವಾಭಿಮಾನ ಸಮಾವೇಶ ಮಾಡಲು ಚಿಂತನೆ ನಡೆಸಿ, ಎರಡು ಸಭೆಗಳನ್ನು ಮಾಡಿದ್ದೇವೆ ಎಂದರು.

ಯಾವತ್ತು ಕೂಡ ನಾನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಟ್ಟಿಗೆ ಕೆಲಸ ಮಾಡಿದ್ದೇವೆ. ಈಗಲೂ ಒಟ್ಟಿಗಿದ್ದೇವೆ, ಮುಂದೆಯೂ ಒಟ್ಟಿಗೆ ಕೆಲಸ ಮಾಡುತ್ತೇವೆ. ಅವರು ನಮ್ಮ ನಾಯಕರಿದ್ದಾರೆ. ನಮ್ಮ ಮಧ್ಯೆ ಯಾವ ಡಿಫರೆನ್ಸ್, ಭಿನ್ನಾಭಿಪ್ರಾಯಗಳಿಲ್ಲ. ಯಾವ ಎಣ್ಣೆ ಸೀಗೆಕಾಯಿಯು ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications