ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದಿದ್ದರೆ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು: ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ಜು.29: ಬಿಜೆಪಿ ಸರ್ಕಾರ ಕೊಲೆಗಡುಕ ಸರ್ಕಾರವಾಗಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ತಕ್ಷಣ ಕಿತ್ತುಹಾಕದಿದ್ದರೆ ರಾಜ್ಯದ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುಳ್ಯದಲ್ಲಿ ಮಸೂದ್ ಮತ್ತು ಪ್ರವೀಣ್ ನೆಟ್ಟಾರ್ ಹತ್ಯೆ ನಡೆದಿರುವ ಬೆನ್ನಲ್ಲಿಯೇ ಇಂದು ಸುರತ್ಕಲ್ ನಲ್ಲಿ ಫಾಝೀಲ್ ಎಂಬ ಯುವಕನ ಕೊಲೆ ನಡೆದಿರುವುದು ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿರುವುದಕ್ಕೆ ಸಾಕ್ಷಿ ಎಂದು ಅವರು ಟ್ವೀಟ್ ಮಾಡಿದ್ದಾರೆ.

ದಕ್ಷಿಣ ಕನ್ನಡದ ಸರಣಿ ಹತ್ಯೆಗಳನ್ನು ಖಂಡಿಸದೆ, ದುಷ್ಕರ್ಮಿಗಳನ್ನು ಬಂಧಿಸಿ ಜೈಲಿಗೆ ಅಟ್ಟದೆ, ಅವರ ದುಷ್ಕೃತ್ಯವನ್ನು ಕ್ರಿಯೆಗೆ- ಪ್ರತಿಕ್ರಿಯೆ ಎಂದು ಸಮರ್ಥನೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಇದಕ್ಕೆ ಹೊಣೆಗಾರರು. ಅವರು ಮಂಗಳೂರು ಜಿಲ್ಲೆಯಲ್ಲಿರುವಾಗಲೇ ನಡೆದಿರುವ ಹತ್ಯೆ ಅವರ ಮುಖಕ್ಕೆ ಮಂಗಳಾರತಿ ಮಾಡಿದಂತಿದೆ ಎಂದು ಹೇಳಿದ್ದಾರೆ.

Siddaramaiah has demanded the resignation of Home Minister Araga Jnanendra

ಅಸಮರ್ಥ ಗೃಹ ಸಚಿವರಿಗೆ ಪೊಲೀಸ್ ಇಲಾಖೆಯ ಮೆಲೆ ಯಾವುದೇ ನಿಯಂತ್ರಣ ಇಲ್ಲದಂತಾಗಿದೆ. ಇದರಿಂದಾಗಿ ದುಷ್ಕರ್ಮಿಗಳು ರಾಜಾರೋಷವಾಗಿ ತ್ಯಾಕಾಂಡವನ್ನು ಮುಂದುವರಿಸಿದ್ದಾರೆ. ಗೃಹ ಸಚಿವ ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜದಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು ಎಂದು ಹೇಳಿದ್ದಾರೆ.

ಕೊಲೆಗಡುಕರು ಯಾವುದೇ ಪಕ್ಷ, ಪಂಥ, ಜಾತಿ, ಧರ್ಮದವರಾಗಿದ್ದರೂ ಅವರನ್ನು ಪತ್ತೆ ಹಚ್ಚಿ ಜೈಲಿಗೆ ಅಟ್ಟಬೆಕಾಗಿರುವುದು ರಾಜ್ಯ ಬಿಜೆಪಿ ಸರ್ಕಾರದ ಕರ್ತವ್ಯ. ಹೆಣಗಳನ್ನು ಮುಂದಿಟ್ಟುಕೊಂಡು ರಾಜಕಿಯ ಲಾಭ-ನಷ್ಟದ ಲೆಕ್ಕಾಚಾರ ಹಾಕುತ್ತಿರುವುದು ಅತ್ಯಂತ ದುರದೃಷ್ಟಕರ ಎಂದು ಅಸಮಾಧಾನ ವ್ಯಕ್ತಪಡಿಡಿಸದ್ದಾರೆ.

ತಪ್ಪಿತಸ್ಥರು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅವರನ್ನು ಹೆಡೆಮುರಿ ಕಟ್ಟಿ ಜೈಲಿಗೆ ಅಟ್ಟಬೇಕು. ಆದರೆ, ಬಿಜೆಪಿ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಹಾಕಲು ಮತ್ತು ಜನಾಕ್ರೋಶವನ್ನು ಶಾಂತಗೊಳಿಸಲು ತನಿಖೆಯ ನೆಪದಲ್ಲಿ ಆರೋಪಿಗಳ ಹೊರತಾಗಿ ಅಮಾಯಕರಿಗೂ ಕಿರುಕುಳ ನೀಡುವುದು ಸಲ್ಲದು ಎಂದು ಟ್ವೀಟ್‌ಗಳನ್ನು ಮಾಡಿದ್ದಾರೆ.

Recommended Video

ಆಸ್ತಿ ಮಾಲೀಕರು ಕಟ್ಟಡದ ಪ್ಲಿಂತ್ ಲೈನ್ (ಬಿಪಿಎಲ್) ಸರಿಪಡಿಸುವಾಗ ಹುಷಾರ್ !! | OneIndia Kannada

English summary
Leader of Opposition Siddaramaiah has expressed outrage that the BJP government is a thug government and if Home Minister Araga Jnanendra is removed immediately, it will be difficult for the people of the state to come out of their homes.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X