'ಸಿದ್ದರಾಮಯ್ಯನವರು ಕೊನೆಯ ಬಜೆಟ್ ಮಂಡಿಸಿದ್ದಾರೆ'
ಬೆಂಗಳೂರು, ಮಾರ್ಚ್08: ಮುಖ್ಯಮಂತ್ರಿಗಳಿಗೆ ಯಾಕೆ ಈ ದುರ್ಬುದ್ಧಿ ಎಂದು ಪ್ರತಿಯೊಬ್ಬರೂ ಈ ರಾಜ್ಯದಲ್ಲಿ ಪ್ರಶ್ನೆ ಮಾಡುತ್ತಿದ್ದಾರೆ. ಈ ಬಜೆಟ್ಟನ್ನು ಸಿದ್ದರಾಮಯ್ಯನವರು ಮಂಡಿಸಿಲ್ಲ, ಜಮೀರ್ ಅಹ್ಮದ್ ಖಾನ್ ಅವರೇ ಮಂಡಿಸಿದರೇ ಎಂಬ ಅನುಮಾನ ನನಗಿದೆ. ಸಿದ್ದರಾಮಯ್ಯನವರು ಕೊನೆಯ ಬಜೆಟ್ ಮಂಡಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಹೇಳಿದರು.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಲ್ಪಸಂಖ್ಯಾತರನ್ನು ತೃಪ್ತಿ ಪಡಿಸಲು ಹೋಗಿ ಧರ್ಮ ಧರ್ಮಗಳ ನಡುವೆ ವಿಭಜನೆ ಮಾಡುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ಹಿಂದೂಗಳು- ಮುಸಲ್ಮಾನರನ್ನು ಒಡೆಯುವ ಕೆಲಸಕ್ಕೆ ಇವರು ಕೈ ಹಾಕಿದ್ದಾರೆ. ಮದರಸಾಕ್ಕೆ ಹಣ ಕೊಟ್ಟಿದ್ದಾರೆ. ಮೌಲ್ವಿಗಳ ಹಣ ಹೆಚ್ಚಿಸಿದ್ದಾರೆ. ಮದುವೆಗೆ 50 ಸಾವಿರ ನೀಡಿದ್ದಾರೆ. ಹಾಗಿದ್ದರೆ ಹಿಂದೂಗಳಲ್ಲಿ ಬಡವರಿಲ್ಲವೇ ಎಂದು ಪ್ರಶ್ನಿಸಿದರು.

ಈ ಬಜೆಟ್‌ನಿಂದ ರಾಜ್ಯದ ಕೃಷಿಕರು, ಕೃಷಿ ಕ್ಷೇತ್ರ, ಯುವಕರು, ಮಹಿಳೆಯರು, ಬಡವರಿಗೆ ಯಾವುದೇ ಅನುಕೂಲ ಆಗಲಾರದು. ಇದು ಅಭಿವೃದ್ಧಿಗೆ ಪೂರಕವಲ್ಲ ಎಂದರು. ಸಿದ್ದರಾಮಯ್ಯನರಿಗೆ ಅಲ್ಪಸಂಖ್ಯಾತರ ಬಗೆಗಿನ ಪ್ರೀತಿ, ಕಾಳಜಿ ಎಲ್ಲರಿಗೂ ಗೊತ್ತಿದೆ. ಆದರೆ, ಹಣಕಾಸಿನ ಸಚಿವರಾಗಿ ಅವರು ಈ ಮಟ್ಟಕ್ಕೆ ಇಳಿಯುವರೆಂದು ನಾವ್ಯಾರೂ ನಿರೀಕ್ಷೆ ಮಾಡಿರಲಿಲ್ಲ. ಮುಸ್ಲಿಂ ವಿದ್ಯಾರ್ಥಿಗಳಿಗೆ ಹೊರದೇಶಕ್ಕೆ ಹೋಗಲು ಕೊಡುವ ಮೊತ್ತವನ್ನು 20 ಲಕ್ಷದಿಂದ 30 ಲಕ್ಷಕ್ಕೆ ಏರಿಸಿದ್ದಾರೆ. ಯಾಕೆ ಹಿಂದೂಗಳಲ್ಲಿ ಯಾರಿಗೂ ಕೊಡಬೇಕೆಂದು ನಿಮಗೆ ಅನಿಸಲಿಲ್ಲವೇ ಸಿದ್ದರಾಮಯ್ಯನವರೇ ಎಂದು ಕೇಳಿದರು.
ಸ್ವರಕ್ಷಣಾ ಕಲೆ ತರಬೇತಿಗೆ ಮುಸ್ಲಿಂ ಮಹಿಳೆಯರಿಗೆ ಹಣ ಮೀಸÀಲಿಟ್ಟಿದ್ದಾರೆ. ಯಾಕೆ ಸಿದ್ದರಾಮಯ್ಯನವರೇ, ಹಿಂದೂಗಳಲ್ಲಿರುವ ಮಹಿಳೆಯರಿಗೆ ಆತ್ಮಸ್ಥೈರ್ಯ ಕೊಡುವ ಸ್ವರಕ್ಷಣಾ ಕಲೆ ತರಬೇತಿ ಪಡೆಯಲು ಯೋಜನೆ ಕೊಡಬೇಕೆಂದು ಅನಿಸಿಲ್ಲ ಎಂದು ಪ್ರಶ್ನಿಸಿದರು. ಅಲ್ಪಸಂಖ್ಯಾತರಿಗೆ ಪ್ರತ್ಯೇಕ ಬಜೆಟ್ ಮಂಡಿಸಿಲ್ಲ ಎಂಬುದನ್ನು ಬಿಟ್ಟರೆ, ಇನ್ನೆಲ್ಲ ಅಂಶಗಳು ಈ ಬಜೆಟ್‍ನಲ್ಲಿವೆ ಎಂದು ಟೀಕಿಸಿದರು. ಮದುವೆಗೆ 50 ಸಾವಿರ; ಹಿಂದೂಗಳಲ್ಲಿ ಬಡವರಿಲ್ಲವೇ ಹಾಗಿದ್ದರೆ ಎಂದು ಕೇಳಿದರು.
ಪರಿಶಿಷ್ಟರಿಗೆ ಮೀಸಲಿಟ್ಟ ಎಸ್‍ಇಪಿ, ಟಿಎಸ್‍ಪಿ ಹಣ 25 ಸಾವಿರ ಕೋಟಿಯನ್ನು ಬೇರೆ ಬೇರೆ ಕಾರ್ಯಕ್ಕೆ ವರ್ಗಾವಣೆ ಮಾಡಿದ್ದಾರೆ. ಸಾಲ 1 ಲಕ್ಷ 16 ಸಾವಿರ ಕೋಟಿಗೆ ಏರಿದೆ. ಮೊದಲ ಬಜೆಟ್‍ನಲ್ಲಿ ಮಿಗತೆ ಆಯವ್ಯಯ ಪತ್ರ ಕೊಟ್ಟಿದ್ದ ಸಿದ್ದರಾಮಯ್ಯನವರು ತಮ್ಮ ಅಂತಿಮ ಬಜೆಟ್ ವೇಳೆ ಬೃಹತ್ ಪ್ರಮಾಣದ ಸಾಲ ಮಾಡಿದ್ದಾರೆ ಎಂದು ಟೀಕಿಸಿದರು.
ಹಣಕಾಸು ಖಾತೆಯನ್ನು ಹೊತ್ತ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ರಾಜ್ಯದ ಜನತೆಯ ನಿರೀಕ್ಷೆಯನ್ನು ಹುಸಿ ಮಾಡಿದೆ. ನಿಖರ ಭರವಸೆ ನೀಡುವ ಯೋಜನೆ ಹಾಗೂ ಅದಕ್ಕೆ ಅನುದಾನ ಪ್ರಕಟಿಸದೆ ಆಕರ್ಷಕ ಕಾರ್ಯಕ್ರಮಗಳನ್ನು ಘೋಷಿಸಿ, ಜನರ ಮೂಗಿಗೆ ತುಪ್ಪ ಸವರಲು ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ.ಅಲ್ಪಸಂಖ್ಯಾತರ ಹೆಸರಿನಲ್ಲಿ ಮುಸ್ಲಿಂ ಸಮುದಾಯವನ್ನು ಓಲೈಸಲು ಒತ್ತು ನೀಡಿರುವ ಬಜೆಟ್. ಶಿಕ್ಷಣದ ಕ್ಷೇತ್ರದ ಸಮಗ್ರ ಅಭಿವೃದ್ಧಿ ಬಗ್ಗೆ ಯಾವುದೇ ಕೊಡುಗೆ ನೀಡಿಲ್ಲ. ಉದ್ಯೋಗ ಸೃಷ್ಟಿಗೆ ಅವಕಾಶವಿರುವ ಕೈಗಾರಿಕೆಗಳಿಗೆ ಉತ್ತೇಜನವೇ ಇಲ್ಲ ಎಂದು ಆಕ್ಷೇಪಿಸಿದ್ದಾರೆ.
ವಿಶೇಷವಾಗಿ ಕೃಷಿ ವಲಯಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ರೈತರ ನಿರೀಕ್ಷೆಗಳನ್ನು ಸಂಪೂರ್ಣವಾಗಿ ಹುಸಿಗೊಳಿಸಿದೆ. ದಿನೇ ದಿನೇ ಗ್ರಾಮೀಣ ಪ್ರದೇಶಗಳಿಂದ ಗುಳೇ ಹೋಗುವ ಪರಿಸ್ಥಿತಿ ಉದ್ಭವಿಸಿರುವ ಹಿನ್ನೆಲೆಯಲ್ಲಿ, ಅದನ್ನು ತಡೆಯುವ ಯಾವುದೇ ಕಾರ್ಯಕ್ರಮವನ್ನೂ ಪ್ರಕಟಿಸಿಲ್ಲ. ಹಾಗಾಗಿ ಇದು ಗ್ರಾಮೀಣ ಹಾಗೂ ರೈತ ವಿರೋಧಿ ಬಜೆಟ್ ಎಂದು ತಿಳಿಸಿದ್ದಾರೆ. ಸರ್ಕಾರಿ ಶಾಲೆಗಳ ಕಟ್ಟಡಗಳ ವಿಸ್ತರಣೆ ಹಾಗೂ ನವೀಕರಣಕ್ಕೆ ಬಜೆಟ್ ನಲ್ಲಿ ಯಾವುದೇ ಹಣ ನೀಡದೇ, ಕೇವಲ 5,000 ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸುವುದಾಗಿ ಘೋಷಿಸಿ ಗುಣಮಟ್ಟದ ಶಿಕ್ಷಣ ಹಾಗೂ ಮೂಲ ಸೌಕರ್ಯದತ್ತ ದೃಷ್ಟಿ ಹರಿಸದೆ ಕೈ ತೊಳೆದುಕೊಳ್ಳಲಾಗಿದೆ.
ಸಾಂಸ್ಕೃತಿಕ ವಲಯ ಹಾಗೂ ಪ್ರವಾಸೋದ್ಯಮವನ್ನು ಬಹುವಾಗಿ ವಿಸ್ತರಿಸುವ ನಿರ್ದಿಷ್ಟವಾದ ಯೋಜನೆಗಳನ್ನು ಬಜೆಟ್ ನಲ್ಲಿ ಪ್ರಕಟಿಸದೇ ಈ ಕ್ಷೇತ್ರಗಳ ಬೆಳವಣಿಗೆ ಪೆÇ್ರೀತ್ಸಾಹ ನೀಡುವ ಪೆÇಳ್ಳು ಭರವಸೆ ನೀಡಲಾಗಿದೆ.
ಪರಿಶಿಷ್ಟ, ಹಿಂದುಳಿದ ಹಾಗೂ ಅತಿ ಹಿಂದುಳಿದ ಸಮುದಾಯದವರ ಜಪ ಮಾಡಿ ರಾಜಕೀಯವಾಗಿ ಬೆಳೆದು ಬಂದ ಸಿದ್ದರಾಮಯ್ಯನವರು ಈ ಸಮುದಾಯಗಳ ಏಳಿಗೆಗೆ ಯಾವ ಯೋಜನೆಗಳನ್ನೂ ಪ್ರಕಟಿಸಿಲ್ಲ. ವಿವಿಧ ಹಿಂದುಳಿದ ವರ್ಗಗಳ ನಿಗಮಗಳಿಗೆ ಈ ಹಿಂದಿನ ಬಜೆಟ್ ನಲ್ಲಿ ಘೋಷಣೆಯಾದ ಪೂರ್ಣ ಪ್ರಮಾಣದ ಅನುದಾನವನ್ನೇ ಬಿಡುಗಡೆ ಮಾಡಿಲ್ಲ.
ಕುಲಕಸುಬು ಆಧಾರಿತ ಸಮುದಾಯಗಳ ಬದುಕು ರಕ್ಷಿಸಲು ಯಾವುದೇ ಕಾರ್ಯಕ್ರಮಗಳನ್ನು ಕೊಡದೇ ಕೇವಲ ಅಧಿಕಾರಕ್ಕೆ ಬರಲು ಮಾತ್ರ ದಲಿತ, ಹಿಂದುಳಿದವರ ಜಪ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಅಭಿವೃದ್ಧಿಯಲ್ಲಿ ಹಿಂದುಳಿದ ಸಮುದಾಯಗಳ ಕಷ್ಟದ ತಾಪವನ್ನು ಕಡಿಮೆ ಮಾಡುವ ಯಾವುದೇ ಯೋಜನೆ ಪ್ರಕಟಿಸದೇ ಒಬಿಸಿ ಸಮುದಾಯಗಳ ಹಿತಾಸಕ್ತಿಯನ್ನು ಪೂರ್ಣ ಕಡೆಗಣಿಸಲಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಶಿಕ್ಷಣ ತರಬೇತಿ ಪಡೆದು ಉದ್ಯೋಗಕ್ಕಾಗಿ ಕಾದು ಕುಳಿತಿರುವ ಶಿಕ್ಷಕ ಸಮುದಾಯವನ್ನು ಸಂಪೂರ್ಣ ನಿರಾಸೆಗೊಳಿಸುವ ಮೂಲಕ ಶಿಕ್ಷಣ ಕ್ಷೇತ್ರವನ್ನು ಗಟ್ಟಿಗೊಳಿಸುವಲ್ಲಿ ತನ್ನ ನಿರಾಸಕ್ತಿಯನ್ನು ಮುಖ್ಯಮಂತ್ರಿ ಬಜೆಟ್ ಮೂಲಕ ತೋರಿಸಿದ್ದಾರೆ. ಕೆಳ ಮಧ್ಯಮ ವರ್ಗಗಳ ಅಭ್ಯುದಯ ಕೇಂದ್ರೀಕರಿಸುವ ಯಾವ ಯೋಜನೆಯೂ ಇಲ್ಲ. ವಸತಿ ಸಮಸ್ಯೆ ನೀಗಿಸಲು ಈ ಬಜೆಟ್ ನಲ್ಲಿ ಯಾವುದೇ ಯೋಜನೆ ಪ್ರಕಟಿಸಿಲ್ಲದಿರುವುದು ಈ ಸರ್ಕಾರ ಕೇವಲ ಬಡವರ ವಿರೋಧಿ ಮಾತ್ರ ಅಲ್ಲ, ಮಧ್ಯಮ ಹಾಗೂ ಕೆಳವರ್ಗಗಳ ವಿರೋಧಿ ಎನ್ನುವುದನ್ನು ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ತೋರಿಸಿದ್ದಾರೆ ಎಂದು ಟೀಕಿಸಿದ್ದಾರೆ.
ಬಜೆಟ್ ನಲ್ಲಿ ಘೋಷಿಸಿರುವ ಯೋಜನೆಗಳು ಕೇವಲ ಕಾಗದದಲ್ಲೇ ಉಳಿಯುವ ಸಾಧ್ಯತೆ ಗೋಚರವಾಗುತ್ತಿದೆ. 'ಹೇಳುವುದು ಒಂದು ಮಾಡುವುದು ಇನ್ನೊಂದು' ಎಂಬಂತೆ ಈ ಬಜೆಟ್ ಆಗಬಾರದು, ಕಳೆದ ಬಜೆಟ್ ನಲ್ಲಿ ಘೋಷಣೆಯಾಗಿದ್ದವೆಲ್ಲವೂ ಘೋಷಣೆಯಾಗಿಯೇ ಉಳಿದಿದೆ, ಈ ಬಜೆಟ್ ಗೂ ಅದೇ ಗತಿ ಆಗುವ ಸಾಧ್ಯತೆಯೇ ಹೆಚ್ಚು ಎನ್ನುವುದು ರಾಜ್ಯದ ದಯನೀಯ ಆರ್ಥಿಕ ಪರಿಸ್ಥಿತಿ ಹೇಳುತ್ತಿದೆ ಎಂದು ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದರು.
ತನ್ನ ತೆರಿಗೆ ಪಾಲನ್ನು ಪಡೆಯುವಲ್ಲಿ ಎಡವಿ ಬಿದ್ದಿರುವ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ಕೇಂದ್ರ ಸರ್ಕಾರದ ಮೇಲೆ ಆರೋಪ ಹೊರಿಸುವ ಅಂಶಗಳನ್ನು ಸೇರಿಸಿಕೊಂಡು ರಾಜ್ಯದ ಆರ್ಥಿಕ ಸ್ಥಿತಿಯ ನಿರ್ವಹಣೆಯ ವೈಫಲ್ಯವನ್ನು ಮುಚ್ಚಿಕೊಳ್ಳಲು ಹೊರಟಿದ್ದಾರೆ ಎಂದಿರುವ ಅವರು, ಕೃಷಿಕರು, ಕಾರ್ಮಿಕರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಎನ್‍ಎಚ್‍ಎಂ ನೌಕರರು ಸೇರಿದಂತೆ ಶ್ರಮಿಕ ವರ್ಗಗಳನ್ನು ಕಡೆಗಣಿಸಿ ಅಧಿಕಾರಕ್ಕೆ ಬರುವ ಮುನ್ನ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಯಾವುದೇ ಅಂಶಗಳನ್ನು ಬಜೆಟ್ ನಲ್ಲಿ ಕಾರ್ಯಗತಗೊಳಿಸಲು ಯಾವುದೇ ಹೊಸ ಭರವಸೆಯ ಹೆಜ್ಜೆ ಇಡದೇ ಕೊಟ್ಟ ಮಾತು ತಪ್ಪಿದ ಜನ ವಿರೋಧಿ ಬಜೆಟ್ ಸಿದ್ದರಾಮಯ್ಯನವರು ಮಂಡಿಸಿದ್ದಾರೆ ಎಂದಿದ್ದಾರೆ.
-
ಕರ್ನಾಟಕ ರಾಜಕೀಯದಲ್ಲಿ ಫೋನ್ ಟ್ಯಾಪಿಂಗ್ ಚರ್ಚೆ ಜೋರು: ಗೃಹ ಸಚಿವರು ಹೇಳಿದ್ದೇನು? -
Karnataka Budget: ಡಿಕೆ ಶಿವಕುಮಾರ್ ಮೇಲೆ ನಿಗಾ ಇಡಲು ಸಿದ್ದರಾಮಯ್ಯರಿಂದ ತಂಡ ರಚನೆ: ಆರ್.ಅಶೋಕ್ -
Lunar Eclipse: ಮಾರ್ಚ್ 3 ಹುಣ್ಣಿಮೆ: ವರ್ಷದ ಮೊದಲ ಮಹಾ ಚಂದ್ರ ಗ್ರಹಣ – ನಾಲ್ಕು ರಾಶಿಗಳಿಗೆ ಅಶುಭ ಸೂಚನೆ -
ರಶ್ಮಿಕಾ ಮೊದಲ ಸಿನಿಮಾದಲ್ಲಿ ನಾನು ಹೀರೋ, ನೀನು ಬಾಲಿವುಡ್ಗೆ ಪಕ್ಕಾ ಹೋಗ್ತೀಯ ಎಂದಿದ್ದೆ: ನಟ ತ್ರಿವಿಕ್ರಮ್ -
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಜೋಡಿಯಿಂದ ಕರ್ನಾಟಕ ಸೇರಿ ದೇಶದ ಪ್ರಮುಖ ದೇವಸ್ಥಾನಗಳಲ್ಲಿ ಅನ್ನದಾನ ಸೇವೆ -
LPG Price: ಎಲ್ಪಿಜಿ ಗ್ಯಾಸ್ ಸಿಲಿಂಡರ್ ದರದಲ್ಲಿ ಭಾರೀ ಏರಿಕೆ: ಇಲ್ಲಿದೆ ಮಾರ್ಚ್ 1ರ ದರಪಟ್ಟಿ -
Gold Rate Today: ಆಭರಣ ಪ್ರಿಯರ ಗಮನಕ್ಕೆ: ಬೆಂಗಳೂರಿನಲ್ಲಿ ಇಂದು ಚಿನ್ನ-ಬೆಳ್ಳಿ ದರ ಹೇಗಿದೆ? ಇಲ್ಲಿದೆ ಮಾಹಿತಿ -
National Highway: ರಾಜ್ಯದಲ್ಲಿ ಹೊಸ ರಾಷ್ಟ್ರೀಯ ಹೆದ್ದಾರಿಯ ಮಹತ್ವದ ಅಪ್ಡೇಟ್ -
ಬೇರೆ ದೇಶಗಳಂತೆ ಭಾರತೀಯರಿಗೆ ಭಯದಿಂದ ನಿದ್ರಿಸುವ ಪರಿಸ್ಥಿತಿ ಅಲ್ಲ: ನಿವೃತ್ತ ಸೇನಾಧಿಕಾರಿ ಸುನೀಲ್ ಕುಮಾರ್ ಶಾಸ್ತ್ರಿ -
ಇರಾನ್ ಸುಪ್ರೀಂ ಯತೊಲ್ಲಾ ಅಲಿ ಖಮೇನಿ ಅಂತ್ಯ: ವಿಶ್ವದ ಮೇಲೆ 5 ಪರಿಣಾಮ ಸಾಧ್ಯತೆ: ಆಶಿಶ್ ಸಾರಡ್ಕ ಬರಹ -
Thalapathy Vijay: 400 ಕೋಟಿ ಆಸ್ತಿಗೆ ಒಡತಿ, ಲಂಡನ್ ಬೆಡಗಿ: ಯಾವ ಸಿನಿಮಾಗೂ ಕಡಿಮೆ ಇಲ್ಲ ದಳಪತಿ ವಿಜಯ್-ಸಂಗೀತಾ ಲವ್ ಸ್ಟೋರಿ -
Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಬಿಸಿಲೂ ಹೆಚ್ಚು












Click it and Unblock the Notifications