ಸಿಎಂ ಯಡಿಯೂರಪ್ಪ ಕುರಿತು ಸ್ಪೋಟಕ ಮಾಹಿತಿ ಹೊರಹಾಕಿದ ಸಿದ್ದರಾಮಯ್ಯ!

ಬೆಂಗಳೂರು, ಅ. 22: ಈ ಉಪ ಚುನಾವಣೆಯ ಮೂಲಕ ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗೆ ಇಳಿಸುವ ಪ್ರಯತ್ನ ನಿಜವಾಗಿಯೂ ಬಿಜೆಪಿಯಲ್ಲಿ ಆರಂಭವಾಗಿದೆಯಾ? ಹೌದು ಅಂಥದ್ದೊಂದು ಟಾಸ್ಕ್‌ನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಪಕ್ಷದಲ್ಲಿರುವ ಕೆಲವು ಹಿರಿಯ ನಾಯಕರು 'ಸಂತೋಷ'ದಿಂದ ಕೊಟ್ಟಿದ್ದಾರೆ ಎಂಬ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ.

ಸಿಎಂ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವ ಪ್ರಯತ್ನ ಆರಂಭವಾಗಿದೆ ಎಂದು ಸ್ವತಃ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬಹಿರಂಗ ಪಡಿಸಿದ್ದಾರೆ. ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಮೇಲೆಯೂ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಒಬ್ಬ ಕಾಡು ಮನುಷ್ಯ. ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಈ ವ್ಯಕ್ತಿಯನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿ ತಕ್ಷಣ ಕಾಡಿಗೆ ಕೊಂಡು ಹೋಗಿ ಬಿಡಬೇಕು.

ತಮ್ಮ ಪಕ್ಷ ಸೇರಬೇಕಾದರೆ ಹತ್ತು ವರ್ಷ ಪಕ್ಷದ ಕಚೇರಿಯ ಕಸಗುಡಿಸಬೇಕು ಎಂದು ಕೆ.ಎಸ್. ಈಶ್ವರಪ್ಪ ಹೇಳಿದ್ದರು. ಈ ನಳಿನ್ ಕುಮಾರ್ ಕಟೀಲ ಅವರನ್ನು ಇನ್ನು ಒಂದು ಹತ್ತು ವರ್ಷ ಕಚೇರಿಯ ಕಸಗುಡಿಸಲು ಹಚ್ಚಿದರೆ ಏನಾದರೂ ಸ್ವಲ್ಪ ಬುದ್ದಿ ಬರಬಹುದೇನೋ ಎಂದು ಸಿದ್ದರಾಮಯ್ಯ ಅವರು ಸಲಹೆ ಕೊಟ್ಟಿದ್ದಾರೆ.

ಅವರ ಬೆನ್ನಿನಲ್ಲಿಯೂ ಎಲುಬು ಇಲ್ಲ

ಅವರ ಬೆನ್ನಿನಲ್ಲಿಯೂ ಎಲುಬು ಇಲ್ಲ

ನಳಿನ್ ಕುಮಾರ್ ಕಟೀಲು ನಾಲಗೆಯಲ್ಲಿ ಮಾತ್ರ ಅಲ್ಲ, ಬೆನ್ನಿನಲ್ಲಿಯೂ ಎಲುಬು ಇಲ್ಲ. ಈ ಬೆನ್ನೆಲುಬಿಲ್ಲದ ಅಧ್ಯಕ್ಷನಿಗೆ ತಮ್ಮದೇ ಪಕ್ಷದ ಶಾಸಕರು ಪ್ರತಿದಿನ ತಮ್ಮದೇ ಮುಖ್ಯಮಂತ್ರಿ ವಿರುದ್ಧ ಟೀಕಾಪ್ರಹಾರ ಮಾಡುತ್ತಿದ್ದಾರೆ. ಆದರೆ ಅವರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ತೂ ಕಟೀಲಿಗಿಲ್ಲ ಎಂದಿದ್ದಾರೆ ಎಂದು ಶಾಸಕ ಯತ್ನಾಳ್ ಅವರ ಮುಖ್ಯಮಂತ್ರಿ ಬದಲಾವಣೆ ಕುರಿತು ಮಾತನಾಡಿದ್ದನ್ನು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ನಳಿನ್ ಕುಮಾರ್ ಕಟೀಲ್ ಎಂಬ ಪೋಕರಿ!

ನಳಿನ್ ಕುಮಾರ್ ಕಟೀಲ್ ಎಂಬ ಪೋಕರಿ!

ಹೀಗೆ ತಮ್ಮ ಶಾಸಕರನ್ನೂ ಕಂಟ್ರೋಲ್ ಮಾಡಲಾಗದ ಈ ಕಟೀಲ್ ನಮ್ಮ ಪಕ್ಷದ ಬಗ್ಗೆ ಕೂಗಾಡುತ್ತಾರೆ. ಮಂಗಳೂರಿನಲ್ಲಿ ಎಲ್ಲಿಯೋ ಬೀದಿ ಅಲೆಯುತ್ತಿದ್ದ ಈ ನಳಿನ್ ಕುಮಾರ್ ಕಟೀಲ್ ಎಂಬ ಪೋಕರಿಯನ್ನು ಯಾರೋ ತಮ್ಮ 'ಸಂತೋಷ'ಕ್ಕಾಗಿ ತಂದು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದರು.

ಇವರಿಗೆ ಕೊಟ್ಟಿರುವ ಕೆಲಸ ಪಕ್ಷ ಕಟ್ಟುವುದಲ್ಲ, ಬಿ.ಎಸ್. ಯಡಿಯೂರಪ್ಪ ಅವರನ್ನು ಕೆಡವುದು, ಅದನ್ನೇ ಮಾಡುತ್ತಾ ಇದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಆ ಮೂಲಕ ಯಡಿಯೂರಪ್ಪ ಅವರ ಮೇಲೆ ಮೃದುಧೋರಣೆ ತಾಳಿರುವ ಸಿದ್ದರಾಮಯ್ಯ ಅವರು, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಅವರು ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಪರೋಕ್ಷವಾಗಿ ಪ್ರಸ್ತಾಪ ಮಾಡಿದ್ದಾರೆ.

ಯಡಿಯೂರಪ್ಪ ಕೆಳಗಿಳಿಸುವುದೇ ಕಟೀಲ್ ಟಾಸ್ಕ!

ಯಡಿಯೂರಪ್ಪ ಕೆಳಗಿಳಿಸುವುದೇ ಕಟೀಲ್ ಟಾಸ್ಕ!

ಈಗ ನಡೆಯುತ್ತಿರುವ ಉಪಚುನಾವಣೆಗಳಲ್ಲಿ ಹೇಗಾದರೂ ಮಾಡಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿ ಅದರ ಹೊಣೆಯನ್ನು ಯಡಿಯೂರಪ್ಪ ಅವರ ತಲೆ ಮೇಲೆ ಕಟ್ಟಿ ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸಬೇಕು. ಇದು ನಳಿನ್ ಕುಮಾರ್ ಕಟೀಲು ಅವರಿಗೆ ಪಕ್ಷದೊಳಗಿನ ಕೆಲವು ನಾಯಕರೇ ಕೊಟ್ಟಿರುವ ಟಾಸ್ಕ್ ಎನ್ನುವುದು ಈಗ ಗುಟ್ಟಾಗಿ ಉಳಿದಿಲ್ಲ ಎಂದು ಸ್ಪೋಟಕ ಮಾಹಿತಿಯನ್ನು ಸಿದ್ದರಾಮಯ್ಯ ಅವರು ಹಂಚಿಕೊಂಡಿದ್ದಾರೆ.

Recommended Video

    Electric Bus ನ ವಿಶೇಷತೆ ಏನು ಅಂತೀರಾ?!! | Oneindia Kannada
    ಬಿಜೆಪಿ ಮಾನ ಕಳೆಯಲು ಕಟೀಲ್ ಒಬ್ಬ ಸಾಕು!

    ಬಿಜೆಪಿ ಮಾನ ಕಳೆಯಲು ಕಟೀಲ್ ಒಬ್ಬ ಸಾಕು!

    ಮಾತೆತ್ತಿದರೆ ಸಂಸ್ಕಾರ, ಸಂಸ್ಕೃತಿ ಎಂದು ಬೋದನೆ ಮಾಡುವ ಸಂಘ ಪರಿವಾರದಲ್ಲಿ ಯಾರಾದರೂ ಹಿರಿಯರು, ಮಾನವಂತರು ಉಳಿದಿದ್ದರೆ ಮೊದಲು ಈ ನಳಿನ್ ಕುಮಾರ್ ಕಟೀಲ್ ಅವರಿಗೆ ಸ್ವಲ್ಪ ಬುದ್ದಿ ಹೇಳಿ ನಾಲಿಗೆ ಬಿಗಿಹಿಡಿದು ಮಾತನಾಡಲು ಕಲಿಸಿ. ಇಲ್ಲದೆ ಇದ್ದರೆ ಇವರೊಬ್ಬರೇ ಸಾಕು ಎಲ್ಲರ ಮಾನ ಕಳೆಯಲು ಎಂದು ಸಿದ್ದರಾಮಯ್ಯ ಅವರು ಆರ್ಭಟಿಸಿದ್ದಾರೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+