• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಸಿಎಂ ಯಡಿಯೂರಪ್ಪರಿಗೆ ದೂರವಾಣಿ ಕರೆ ಮಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ

|

ಬೆಂಗಳೂರು, ಮೇ 13: ಲಾಕ್‌ಡೌನ್ ಜಾರಿಯಲ್ಲಿರುವಾಗ ಸರ್ಕಾರ ಕೃಷಿ ಉತ್ಪನ್ನಗಳ ಮಾರಾಟ ನಿಯಂತ್ರಣ ಮತ್ತು ಅಭಿವೃದ್ಧಿ ಕಾಯಿದೆಗೆ ತಿದ್ದುಪಡಿ ತರಲು ಸುಗ್ರೀವಾಜ್ಞೆ ಹೊರಡಿಸಿದೆ. ಆದರೆ ರಾಜ್ಯಪಾಲರು ಅಂಕಿತ ಹಾಕಲು ನಿರಾಕರಿಸಿದ್ದು, ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ಕಳಿಸುವಂತೆ ಸೂಚಿಸಿ ಸರ್ಕಾರಕ್ಕೆ ಹಿಂದಿರುಗಿಸಿದ್ದಾರೆ. ಕೇಂದ್ರ ಸರ್ಕಾರದ ಒತ್ತಡ ಇರುವುದರಿಂದ ಸಿಎಂ ಯಡಿಯೂರಪ್ಪ ಅವರು ಸುಗ್ರೀವಾಜ್ಞೆಗೆ ಒಪ್ಪಿಗೆ ಪಡೆಯಲು ನಾಳೆಯೆ ತುರ್ತು ಸಂಪುಟ ಸಭೆ ಕರೆದಿದ್ದಾರೆ. ಇದೇ ಸಂದರ್ಭದಲ್ಲಿ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ.

ಈ ಮಧ್ಯೆ ಎಪಿಎಂಸಿ ಕಾಯಿದೆಗೆ ತಿದ್ದುಪಡಿ ತರುವ ಪ್ರಸ್ತಾವನೆ ಕೈ ಬಿಡುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ. ಯಡಿಯೂರಪ್ಪ ದೂರವಾಣಿ ಕರೆ ಮಾಡಿ ಮಾತನಾಡಿರುವ ಸಿದ್ದರಾಮಯ್ಯ ಅವರು, ಕಾಯಿದೆಗೆ ತಿದ್ದುಪಡಿ ತಂದರೆ ಆಗಬಹುದಾದ ತೊಂದರೆಗಳ ಬಗ್ಗೆ ವಿವರಿಸಿದ್ದಾರೆ.

ಏನಿದು ಎಪಿಎಂಸಿ ಕಾಯಿದೆ ತಿದ್ದುಪಡಿ ಸುಗ್ರೀವಾಜ್ಞೆ? ಅದಕ್ಕೆ ಅಷ್ಟೊಂದು ವಿರೋಧ ಯಾಕೆ?

ಕಾಯಿದೆಗೆ ತಿದ್ದುಪಡಿ ತಂದು ಬಹುರಾಷ್ಟ್ರೀಯ ಕಂಪನಿಗಳು ಕೃಷಿ ಮಾರುಕಟ್ಟೆ ಪ್ರವೇಶ ಮಾಡಿದರೆ ಸರ್ಕಾರದ ಹಿಡಿತ ಇಲ್ಲದಂತೆ ಆಗುತ್ತದೆ. ಕೃಷಿ ಉತ್ಪನ್ನಗಳಿಗೆ ದರ ನಿಗಧಿ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳಲು ಅವಕಾಶ ಇಲ್ಲದಂತೆ ಆಗುತ್ತದೆ. ತಿದ್ದುಪಡಿಯಿಂದ ರೈತರಿಗೆ ಆಗುವ ಅನುಕೂಲಕ್ಕಿಂತ ಅನಾನುಕೂಲವೇ ಜಾಸ್ತಿ. ಹೀಗಾಗಿ ನಿರ್ಧಾರ ಮರು ಪರಿಶೀಲಿಸಿ ಎಂದು ಸಿದ್ದರಾಮಯ್ಯ ಅವರು ಯಡಿಯೂರಪ್ಪ ಅವರಿಗೆ ಹೇಳಿದ್ದಾರೆ. ಜೊತೆಗೆ ಸರ್ಕಾರ ರೈತರ ಪರವಾಗಿರಬೇಕು ಎಂದು ಒತ್ತಾಯಿಸಿದ್ದಾರೆ.

English summary
Siddaramaiah has told Yediyurappa that the decision should be re-examined. In addition, the government has demanded the support of the farmers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X