ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಟಿವಿ ಜ್ಯೋತಿಷಿಗಳಂತಾದ ಪ್ರಧಾನ ಮಂತ್ರಿ ನರೇಂದ್ರ ಮೋದಿ!

|
Google Oneindia Kannada News

ಬೆಂಗಳೂರು, ಅ. 20: ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರನ್ನು ಉದ್ದೇಶಿಸಿ ಭಾಷಣ ಮಾಡಿದ್ದಾರೆ. ಕೊರೊನಾ ವೈರಸ್ ನಿಯಂತ್ರಣದ ಕುರಿತು ಮಾತನಾಡಿದ್ದಾರೆ. ಜನರು ಕೊರೊನಾ ವೈರಸ್ ನಿಯಂತ್ರಣದ ಹಿನ್ನೆಲೆಯಲ್ಲಿ ಹೇಗೆ ಜೀವನ ಮಾಡಬೇಕು ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣದಲ್ಲಿ ವಿವರಿಸಿದ್ದಾರೆ.

ಕೊರೊನಾ ವೈರಸ್ ನಿಯಂತ್ರಣದ ಬಗ್ಗೆ ನೀವು ನಿರ್ಲಕ್ಷ ವಹಿಸಿದ್ದರಿಂದ ಕೊರೊನಾ ಹೆಚ್ಚಾಗಬಹುದು. ಕೊರೊನಾಕ್ಕೆ ಲಸಿಕೆ ಸಿಗುವವರೆಗೆ ಕೋವಿಡ್ ಹೋಗಿದೆ ಎಂದು ಕೊಳ್ಳಬೇಡಿ. ಹಾಗೆ ಅಂದುಕೊಳ್ಳುವುದರಿಂದ ನಿಮ್ಮ ಕುಟುಂಬವನ್ನು ನೀವು ಅಪಾಯಕ್ಕೆ ತಳ್ಳುತ್ತೀರಿ. ಈ ಹಬ್ಬಗಳ ಸಂದರ್ಭದಲ್ಲಿ ಜನರು ಕೊರೊನಾ ವೈರಸ್ ಕುರಿತು ಮರೆತಿದ್ದಾರೆ. ಮಾಸ್ಕ್ ಇಲ್ಲದೆಯೆ ಓಡಾಡುತ್ತಿದ್ದಾರೆ. ಲಸಿಕೆ ಬರುವ ತನಕ ಸ್ಯಾನಿಟೈಸರ್ ಉಪಯೋಗ, ಆಗಾಗ ಕೈತೊಳೆಯುವುದು ಸೇರಿದಂತೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಲಹೆ-ಸೂಚನೆಗಳನ್ನು ನೀಡಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣದ ಮುಖ್ಯಾಂಶಗಳುಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣದ ಮುಖ್ಯಾಂಶಗಳು

ಪ್ರಧಾನಿ ಮೋದಿ ಅವರ ಭಾಷಣಕ್ಕೆ ರಾಜ್ಯ ವಿರೋಧ ಪಕ್ಷಗಳ ನಾಯಕ ಸಿದ್ದರಾಮಯ್ಯ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಭಾಷಣಕ್ಕೂ ಮೊದಲು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿತ್ತು ಎಂದಿದ್ದಾರೆ. ಸಿದ್ದರಾಮಯ್ಯ ಅವರು ತೀವ್ರ ವಾಗ್ದಾಳಿಯನ್ನು ಪ್ರಧಾನಿ ಮೋದಿ ಅವರ ಮೇಲೆ ಮಾಡಿದ್ದಾರೆ.

ಪ್ರಧಾನಿ ಆತ್ಮಾವಲೋಕನ ಮಾಡಿಕೊಳ್ಳಲಿ

ಪ್ರಧಾನಿ ಆತ್ಮಾವಲೋಕನ ಮಾಡಿಕೊಳ್ಳಲಿ

ಜನತೆಗೆ ಕರ್ತವ್ಯಪಾಲನೆಯ ಪಾಠ ಮಾಡುವ ಮೊದಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತನ್ನ ಕರ್ತವ್ಯಪಾಲನೆ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿತ್ತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಕೊರೊನಾ ಸೋಂಕಿನ ನಿಯಂತ್ರಣ ಮತ್ತು ಅದರಿಂದಾಗಿ ಕಷ್ಟ-ನಷ್ಟಕ್ಕೀಡಾಗಿರುವ ಜನತೆಗೆ ಪರಿಹಾರ ನೀಡಲು ಕೇಂದ್ರ ಸರ್ಕಾರ ಏನು ಮಾಡಿದೆ?. ಮುಂದಿನ ದಿನಗಳಲ್ಲಿ ಏನು ಮಾಡಲಿದೆ ಎನ್ನುವುದನ್ನು ದೇಶದ ಜನತೆಗೆ ತಿಳಿಸಬೇಕಾಗಿತ್ತು ಎಂದಿದ್ದಾರೆ.

ದೇಶದ ಜನತೆಗೆ ಬುದ್ದಿವಾದ ಹೇಳುವ ಮೂಲಕ ಪ್ರಧಾನಿ ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳುವ ಹತಾಶಯದ ಪ್ರಯತ್ನವನ್ನು ಮಾತ್ರ ಮಾಡಿದ್ದಾರೆ. ಕೊರೊನಾ ಸೋಂಕು ಉಲ್ಬಣಕ್ಕೆ ಜನರ ನಿರ್ಲಕ್ಷಕ್ಕಿಂತ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹೊಣೆಗೇಡಿತನ ಪ್ರಮುಖ ಕಾರಣ ಎನ್ನುವುದನ್ನು ಪ್ರಧಾನಿ ಅವರು ಒಪ್ಪಿಕೊಂಡು ದೇಶದ ಜನತೆಯಲ್ಲಿ ಕ್ಷಮೆಯಾಚಿಸಬೇಕಾಗಿತ್ತು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಜನರ ನಿರ್ಲಕ್ಷಕ್ಕೆ ಪ್ರಧಾನಿ ಮೋದಿ ಕಾರಣ

ಜನರ ನಿರ್ಲಕ್ಷಕ್ಕೆ ಪ್ರಧಾನಿ ಮೋದಿ ಕಾರಣ

ಜಾಗಟೆ ಬಾರಿಸಿ, ದೀಪ ಹಚ್ಚಿ ಕೊರೊನಾ ಎದುರಿಸಲು ಕರೆನೀಡಿದ ಪ್ರಧಾನ ಮಂತ್ರಿ ಅವರ ಮೂಢತನದ ಭಾಷಣಗಳೇ ಕೊರೊನಾ ಸೋಂಕಿನ ಬಗ್ಗೆ ಜನರ ನಿರ್ಲಕ್ಷಕ್ಕೆ ಮುಖ್ಯ ಕಾರಣ. ರೋಗವನ್ನು ವೈಜ್ಞಾನಿಕವಾಗಿ ಎದುರಿಸಲು ಕರೆ ನೀಡಬೇಕಾದ ಪ್ರಧಾನಿ, ಟಿವಿ ಜ್ಯೋತಿಷಿಗಳ ರೀತಿಯಲ್ಲಿ ಪ್ರವಚನ ನೀಡಿದರೆ ಜನ ಮೂಢಮತಿಗಳಾಗದೆ ಇನ್ನೇನು ಆಗಲು ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.

ಇಪ್ಪತ್ತು ಲಕ್ಷ ಕೋಟಿ ರೂ. ಪ್ಯಾಕೇಜ್ ಏನಾಯ್ತು?

ಇಪ್ಪತ್ತು ಲಕ್ಷ ಕೋಟಿ ರೂ. ಪ್ಯಾಕೇಜ್ ಏನಾಯ್ತು?

ದೇಶದ ಜನತೆಗೆ ಕರ್ತವ್ಯಪಾಲನೆಯ ಪ್ರವಚನ ನೀಡಿದ ಪ್ರಧಾನಿಗಳು ಅದರ ಜೊತಗೆ ಕೊರೊನಾ ಪರಿಹಾರದ ಇಪ್ಪತ್ತು ಲಕ್ಷ ಕೋಟಿ ರೂಪಾಯಿಗಳ ಪ್ಯಾಕೇಜ್ ಏನಾಯಿತು? ಯಾರಿಗೆ? ಎಷ್ಟು ತಲುಪಿದೆ? ಪಿ.ಎಂ. ಕೇರ್ಸ್ ನಿಧಿಗೆ ಬಂದ ದುಡ್ಡೆಷ್ಟು? ಕೊರೊನಾ ನಿಯಂತ್ರಣ ಮತ್ತು ಪರಿಹಾರಕ್ಕಾಗಿ ಆ ನಿಧಿಯಿಂದ ಬಳಕೆಯಾದ ದುಡ್ಡಿನ ಮೊತ್ತವೆಷ್ಟು? ಎಂಬುದನ್ನೂ ತಿಳಿಸಬೇಕಿತ್ತು.

Recommended Video

Modi ಭಾಷಣ ಹೇಗಿತ್ತು ಗೊತ್ತಾ?? | Oneindia Kannada
ಕೊರೊನಾ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಲೂಟಿ

ಕೊರೊನಾ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಲೂಟಿ

ಕೊರೊನಾ ಸೋಂಕು ಹರಡುವ ಆರಂಭದಲ್ಲಿ ಪ್ರಧಾನಿ ಅವರು 'ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆ'ಯನ್ನು ಕಳೆದ ಜೂನ್ ತಿಂಗಳಲ್ಲಿ ಪ್ರಕಟಿಸಿದ್ದರು. ಅದು ಎಷ್ಟು ಜನರಿಗೆ ತಲುಪಿದೆ? ರಾಜ್ಯದ ಬಿಜೆಪಿ ಸರ್ಕಾರ ಅನ್ನಭಾಗ್ಯದಲ್ಲಿ ನೀಡಲಾಗುತ್ತಿದ್ದ ಅಕ್ಕಿಯನ್ನು ಹತ್ತರಿಂದ ಏಳು ಕಿಲೋಗೆ ಇಳಿಸಿದೆ, ಇಂದಿರಾ ಕ್ಯಾಂಟೀನ್‌ ಮುಚ್ಚಲು ಹೊರಟಿದೆ.

ಮಿತವ್ಯಯ ಪಾಲನೆ ಮಾಡಿ ಲಭ್ಯ ಇರುವ ಸಂಪನ್ಮೂಲವನ್ನು ಕೊರೊನಾ ನಿಯಂತ್ರಣಕ್ಕಾಗಿ ಬಳಸಬೇಕಾದ ರಾಜ್ಯದ ಬಿಜೆಪಿ ಸರ್ಕಾರ ಕೊರೊನಾ ಕಾಯಿಲೆಯ ಪರಿಹಾರದ ನೆಪದಲ್ಲಿ ಜನರ ತೆರಿಗೆ ಹಣವನ್ನು ಲೂಟಿ ಮಾಡುತ್ತಿದೆ. ಇದೇನಾದರೂ ಪ್ರಧಾನಿಯವರ ಗಮನಕ್ಕೆ ಬಂದಿದೆಯೇ? ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

English summary
Leader of Opposition Siddaramaiah has vehemently opposed Prime Minister Modi address to the nation. Siddaramaiah said tnat Prime Minister Narendra Modi should think before the speech. Siddaramaiah has made a fierce claim on Prime Minister Modi, Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X