ಹೊಸ ವರ್ಷಕ್ಕೆ ಸಚಿವ ಸಂಪುಟ ಪುನಾರಚನೆ: ಸುಳಿವು ನೀಡಿದ ಸಿದ್ದರಾಮಯ್ಯ

ಬೆಂಗಳೂರು, ಜನವರಿ 02: ಹೊಸ ವರ್ಷಕ್ಕೆ ಸಂಪುಟ ಪುನರಚನೆ ಆಗುತ್ತಾ ಎನ್ನುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳಿವು ನೀಡಿದ್ದಾರೆ. ಸಚಿವ ಸಂಪುಟ ಪುನಾರಚನೆ ಕುರಿತಂತೆ ಹೈ ಕಮಾಂಡ್ ಜೊತೆಗೆ ಚರ್ಚಿಸಿ ನಿರ್ಧರಿಸುತ್ತೇನೆ ಎಂದು ತಿಳಿಸಿದರು.

ಹೊಸ ವರ್ಷಕ್ಕೆ ಸಂಪುಟದಲ್ಲಿ ಸರ್ಜರಿ ಮಾಡುತ್ತೀರಾ, ಸಂಪುಟ ಪುನಾರಚನೆ ಆಗುತ್ತಾ ಎಂದು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸಂಪುಟ ಪುನರ್ ರಚನೆ ಕುರಿತಂತೆ ಹೈಕಮಾಂಡ್ ಜೊತೆಗೆ ಚರ್ಚಿಸಿ ನಿರ್ಧರಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಇನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯಿಂದಾಗಿ ಇದೀಗ ಸಚಿವ ಸಂಪುಟ ಪುನಾರಚನೆಗೆ ಮತ್ತೆ ಜೀವ ಪಡೆದಿದೆ.

Siddaramaiah Hints At Cabinet Reshuffle For New Year

ಡಿಸೆಂಬರ್ ಅಂತ್ಯಕ್ಕೆ ಸಂಪುಟ ಪುನರಚನೆ ಕುರಿತು ಚರ್ಚೆಯಾಗಿದ್ದು, ಇದೀಗ ಹೊಸ ವರ್ಷದ ಆರಂಭದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುಡ್‌ ನ್ಯೂಸ್‌ ನೀಡಿದ್ದಾರೆ. ಕಳೆದ ವರ್ಷವೇ ಸಚಿವ ಸ್ಥಾನಕ್ಕಾಗಿ ಹಲವು ಶಾಸಕರು ಆಗ್ರಹಿಸಿದ್ದಾರೆ. ಇನ್ನೂ ಮಾರ್ಚ್‌ ನಲ್ಲಿ ಬಜೆಟ್‌ ಅಧಿವೇಶನ ನಡೆಯಲಿದ್ದು, ಬಜೆಟ್ ಅಧಿವೇಶನದ ವೇಳೆ ಕೆಲ ಬದಲಾವಣೆ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಕೇವಲ ಒಂದೇ ಸ್ಥಾನಕ್ಕೆ ಈ ಒಂದು ಸಂಪುಟ ಪುನಾರಚನೆ ಸೀಮಿತವಾಗುತ್ತಾ ಅಥವಾ ಹೆಚ್ಚು ಮಂದಿ ಬದಲಾವಣೆ ನಿಶ್ಚಿತನಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯ ಮೇಲೆ ಕುತೂಹಲ ಮೂಡಿಸಿದೆ.

ಇನ್ನೂ ಸಂಕ್ರಾಂತಿ ಬಳಿಕ ಸಚಿವ ಸಂಪುಟ ರಚನೆಯಾಗಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಈ ಬಾರಿಯ ಸಂಪುಟ ಪುನರ್‌ ರಚನೆ ವೇಳೆ ಸಂಪುಟದಿಂದ ಕೆಲವರನ್ನು ಕೈಬಿಡುವ ಸಾಧ್ಯತೆಯ ಬಗ್ಗೆಯೂ ಮಾತುಗಳು ಕೇಳಿ ಬರುತ್ತಿದ್ದರೂ, ಯಾವ ಸಚಿವರಿಗೆ ಕೊಕ್ ನೀಡಲಾಗುತ್ತದೆ ಎನ್ನುವ ವಿಚಾರದಲ್ಲಿ ಸ್ಪಷ್ಟತೆಯಿಲ್ಲ. ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವುದು ಬಹುತೇಕ ಖಚಿತ ಎನ್ನುವ ಮಾಹಿತಿಯಿದೆ.

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆಯವರು ರಾಜಿನಾಮೆ ನೀಡಬೇಕೆಂಬ ಪ್ರತಿಪಕ್ಷಗಳ ಒತ್ತಾಯ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ , ಆತ್ಮಹತ್ಯೆ ಮಾಡಿಕೊಂಡಿರುವ ಬೀದರ್ ನ ಗುತ್ತಿಗೆದಾರನ ಡೆತ್ ನೋಟ್ ನಲ್ಲಿ ಸಚಿವ ಪ್ರಿಯಾಂಕ ಖರ್ಗೆಯವರ ಹೆಸರಿರುವುದಿಲ್ಲ. ಈ ಪ್ರಕರಣದಲ್ಲಿ ಅವರ ಪಾತ್ರವಾಗಲಿ , ಸಾಕ್ಷ್ಯವಾಗಲಿ ಇಲ್ಲ. ಆದ್ದರಿಂದ ರಾಜಿನಾಮೆ ಕೊಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಯಾವುದೇ ವಿಚಾರಣೆಗೆ ತಾನು ಸಿದ್ಧವಿರುವುದಾಗಿ ಸಚಿವರು ತಿಳಿಸಿದ್ದಾರೆ.

ಆದರೆ ಇಂತಹದೇ ಪ್ರಕರಣದಲ್ಲಿ ಹಿಂದೆ ಬಿಜೆಪಿಯ ಕೆ.ಎಸ್.ಈಶ್ವರಪ್ಪಅವರ ಹೆಸರನ್ನು ಡೆತ್ ನೋಟ್ ನಲ್ಲಿ ಬರೆಯಲಾಗಿತ್ತು. ಪ್ರಕರಣದ ಸಂಬಂಧ ದಾಖಲಾಗಿರುವ ದೂರಿನ ತನಿಖೆಯನ್ನು ಸಿಐಡಿ ಗೆ ವಹಿಸಲಾಗಿದ್ದು, ವರದಿ ಬಂದ ನಂತರ ಸೂಕ್ತ ಕ್ರಮಕೈಗೊಳ್ಳಲಾಗುವುದು. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಿಜೆಪಿಯವರು ತನಿಖೆಯನ್ನು ಸಿಬಿಐ ಗೆ ವಹಿಸಬೇಕೆಂದು ಒತ್ತಾಯಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದ ಪೊಲೀಸರ ಬಗ್ಗೆ ಬಿಜೆಪಿಯವರಿಗೆ ನಂಬಿಕೆಯಿಲ್ಲವೇ? ಬಿಜೆಪಿಯವರು ಅಧಿಕಾರದಲ್ಲಿದ್ದಾಗ , ಒಂದು ಪ್ರಕರಣವನ್ನೂ ಸಿಬಿಐಗೆ ವಹಿಸಿರಲಿಲ್ಲ. ಆದ್ದರಿಂದ ಸಿಬಿಐಗೆ ತನಿಖೆ ವಹಿಸಬೇಕೆಂಬ ಬೇಡಿಕೆ ಮುಂದಿರಿಸಲು ಬಿಜೆಪಿಯವರಿಗೆ ನೈತಿಕತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+