ಹೆಣಗಳ ಮೇಲೆ ಹಣ ಮಾಡಿರುವ ‘ಸಿಎಂ’ ಇದ್ದರೆ ಅದು ಬಸವರಾಜ ಬೊಮ್ಮಾಯಿ : ಸಿದ್ದರಾಮಯ್ಯ ಹೀಗೆ ಹೇಳಿದ್ಯಾಕೆ?

ಹಾವೇರಿ, ನವೆಂಬರ್‌ 04: ಬಿಜೆಪಿ ಅಂದರೆ ಭ್ರಷ್ಟಾಚಾರ ಜನತಾ ಪಾರ್ಟಿ. ಕೋವಿಡ್ ವೇಳೆ ಹೆಣಗಳಿಂದಲೂ ಹಣ ಲೂಟಿ ಮಾಡಿದ್ದಾರೆ. ಕರ್ನಾಟಕ ಇತಿಹಾಸದಲ್ಲಿ ಇದೆ ಮೊದಲು. ಹೆಣಗಳ ಮೇಲೆ ಹಣ ಮಾಡಿರುವ ಸಿಎಂ ಇದ್ದರೆ ಅದು ಬಸವರಾಜ ಬೊಮ್ಮಾಯಿ ಎಂದು ಸಿಎಂ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದರು.

ಹೆಣಗಳ ಮೇಲೂ ಹಣ ಮಾಡಿದವರ ಮಗ ಗೆಲ್ಲಬೇಕಾ? ಕೊರೋನಾ ಸಂದರ್ಭದಲ್ಲಿ ಸತ್ತ ಹೆಣಗಳ ಲೆಕ್ಕದಲ್ಲೂ ಲಂಚ ಪಡೆದು ದಾಖಲೆ ಮಾಡಿದವರು ಬಸವರಾಜ ಬೊಮ್ಮಾಯಿ. ಸತ್ತ ಹೆಣಗಳ‌ ಲೆಕ್ಕದಲ್ಲೂ ಲಂಚ ಪಡೆದ ಏಕೈಕ ಸರ್ಕಾರ ಬೊಮ್ಮಾಯಿ ಅವರದ್ದಾಗಿತ್ತು. ಕೋವಿಡ್ ಸಂದರ್ಭದಲ್ಲೂ, ಸಂಕಷ್ಟದಲ್ಲಿ ನರಳುವಾಗಲೂ ಲಂಚ ಪಡೆದವರ ಪುತ್ರನನ್ನು ಸೋಲಿಸಿ ಎಂದರು.

Siddaramaiah If There Is A CM Who Has Made Money On Dead Bodies It Is Basavaraj Bommai

ಯಾಸಿರ್ ಪಠಣ ಗೆಲ್ಲಬೇಕಾ? ನೀವೇ ನಿರ್ಧಾರ ಮಾಡಿ. 160 ಬರವಸೆಗಳ ಪೈಕಿ 158 ಭರವಸೆ ಈಡೇರಿಸಿದ್ದೇವೆ. 5 ಗ್ಯಾರಂಟಿ ಯೋಜನೆಗಳನ್ನು ಸಹ ಜಾರಿ ಮಾಡಿದ್ದೇವೆ. ಗ್ಯಾರಂಟಿಗಳನ್ನು ಜಾರಿ ಮಾಡಲು ಸಾಧ್ಯವಿಲ್ಲ ಅಂತ ಪ್ರಧಾನ ಮಂತ್ರಿಗಳು ಹೇಳಿದ್ದರು. ಗ್ಯಾರಂಟಿ ಜಾರಿಯಾದರೆ ರಾಜ್ಯ ದಿವಾಳಿ ಆಗುತ್ತೆ ಎಂದು ಹೇಳಿದ್ದರು. ಅಧಿಕಾರ ವಹಿಸಿಕೊಂಡ ಕೂಡಲೇ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ.

ಅಜ್ಜನೂ ಮುಖ್ಯಮಂತ್ರಿಯಾಗಿ, ಅಪ್ಪನೂ ಮುಖ್ಯಮಂತ್ರಿ ಆಗಿದ್ದವರ ಮಗನ ವಿರುದ್ಧ ಸಾಮಾನ್ಯ ಕುಟುಂಬದ ಪೈಲ್ವಾನ್ ಪಠಾಣ್ ಕಣದಲ್ಲಿದ್ದಾರೆ. ಇವರನ್ನು ಗೆಲ್ಲಿಸಿ, ವಿಧಾನಸೌಧಕ್ಕೆ ಕಳುಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಮೊಮ್ಮಗ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ವಿರುದ್ಧ ಸಾಮಾನ್ಯ ಕುಟುಂಬದ ಪಠಾಣ್ ಅವರನ್ನು ಗೆಲ್ಲಿಸಿ ಎಂದರು. ಅಜ್ಜಂಪೀರ್ ಖಾದ್ರಿ ನನಗೆ ತುಂಬಾ ಬೇಕಾದವರು. ನನಗಾಗಿ ಖಾದ್ರಿ ಶಾಸಕ ಸ್ಥಾನ ತ್ಯಜಿಸಲು ಸಿದ್ದರಾಗಿದ್ದರು. ನಾನು ಸೋತು, ಖಾದ್ರಿ ಗೆದ್ದಿದ್ದಾಗ ಸ್ವತಃ ಖಾದ್ರಿಯವರೇ ಬಂದು ಅವರು ಶಾಸಕ ಸ್ಥಾನವನ್ನು ನನಗಾಗಿ ಬಿಟ್ಟು ಕೊಡಲು ಸಿದ್ದರಾಗಿದ್ದರು. ನಮ್ಮಿಬ್ಬರ ನಡುವೆ ಅಷ್ಟು ಆತ್ಮೀಯತೆ. ಹೀಗಾಗಿ ನಮ್ಮ ಮಾತಿಗೆ ಬೆಲೆ ನೀಡಿ ನಾಮಪತ್ರ ವಾಪಾಸ್ ಪಡೆದು ಪಠಾಣ್ ಅವರನ್ನು ಗೆಲ್ಲಿಸಲು ಟೊಂಕ ಕಟ್ಟಿ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ಸಾಧ್ಯವೇ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಇಡೀ ದೇಶಕ್ಕೆ ಸುಳ್ಳುಗಳ ಮೇಲೆ ಸುಳ್ಳುಗಳನ್ನು ಹೇಳಿದ್ದರು. ಆದರೆ ನಮ್ಮ ಸರ್ಕಾರ ಜಾರಿಗೆ ಬಂದ ಎಂಟೇ ತಿಂಗಳಲ್ಲಿ ಐದಕ್ಕೆ ಐದೂ ಗ್ಯಾರಂಟಿಗಳನ್ನೂ ಜಾರಿ ಮಾಡಿದ್ದೇವೆ. ರಾಜ್ಯದ ಲಕ್ಷಾಂತರ ತಾಯಂದಿರು ಗ್ಯಾರಂಟಿಗಳ ಅನುಕೂಲಗಳನ್ನು ಪ್ರತೀ ದಿನ ಪಡೆಯುತ್ತಿದ್ದಾರೆ. ಮೋದಿ ಅವರ ಸುಳ್ಳುಗಳು ಮಾತ್ರ ನಿಲ್ಲುತ್ತಲೇ ಇವೆ ಎಂದು ಟೀಕಿಸಿದರು.

ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ರೈತರ ಸಾಲ ಮನ್ನಾ ಮಾಡಿ ಎಂದರೆ, ರೈತರ ಸಾಲ ಮನ್ನಾ ಮಾಡಲು ನಮ್ಮ ಬಳಿ ಪ್ರಿಂಟಿಂಗ್ ಮೆಷಿನ್ ಇಲ್ಲ ಎಂದು ಯಡಿಯೂರಪ್ಪ ಹೇಳಿದ್ದರು‌. ಹೋಗಲಿ ಬಸವರಾಜ ಬೊಮ್ಮಾಯಿ ಅವರೂ ಮುಖ್ಯಮಂತ್ರಿಯಾಗಿ ರೈತರ ಸಾಲ ಮನ್ನಾ ಮಾಡಲಿಲ್ಲ. ಇವರು ಯಾವ ಮುಖ ಇಟ್ಟುಕೊಂಡು ರೈತರ ಮತ ಕೇಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+