ಸಿದ್ದರಾಮಯ್ಯಗೆ ಕೋವಿಡ್ ಸೋಂಕು; ಹೆಲ್ತ್ ಬುಲೆಟಿನ್

ಬೆಂಗಳೂರು, ಆಗಸ್ಟ್ 05 : ಮಾಜಿ ಮಖ್ಯಮಂತ್ರಿ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಜ್ವರ ಕಡಿಮೆಯಾಗಿದೆ. ಕೋವಿಡ್ ಸೋಂಕು ತಗುಲಿರುವ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬುಧವಾರ ನಗರದ ಮಣಿಪಾಲ್ ಆಸ್ಪತ್ರೆ ವೈದ್ಯರು ಸಿದ್ದರಾಮಯ್ಯ (71) ಆರೋಗ್ಯ ಬಗ್ಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದಾರೆ. 'ಸಿದ್ದರಾಮಯ್ಯಗೆ ಜ್ವರ ಕಡಿಮೆಯಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ' ಎಂದು ತಿಳಿಸಿದ್ದಾರೆ.

'ಚಿಕಿತ್ಸೆಗೆ ಸಿದ್ದರಾಮಯ್ಯ ಅವರು ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಅವರಿಗೆ ಕೋವಿಡ್ 19 ರೋಗದ ಲಕ್ಷಣಗಳು ಕಂಡುಬಂದಿಲ್ಲ. ತಜ್ಞ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ಇಟ್ಟಿದೆ' ಎಂದು ಆಸ್ಪತ್ರೆ ಹೇಳಿದೆ.

Siddaramaiah In Hospital Health Bulletin Of August 5

ಸಿದ್ದರಾಮಯ್ಯ ಅವರಿಗೆ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಸೋಮವಾರ ರಾತ್ರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದಿತ್ತು. ಆದ್ದರಿಂದ, ಕೋವಿಡ್ ವಾರ್ಡ್‌ನಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ.

ಮಣಿಪಾಲ್ ಆಸ್ಪತ್ರೆಯಲ್ಲಿ ಸಿದ್ದರಾಮಯ್ಯ ಅವರು 10 ದಿನ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಳಿಕ ಅವರ ಕೋವಿಡ್ ಪರೀಕ್ಷೆ ವರದಿ ನೆಗೆಟಿವ್ ಬಂದರೆ ಅವರನ್ನು ಡಿಸ್ಚಾರ್ಜ್ ಮಾಡಲಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ.

ಮಣಿಪಾಲ್ ಆಸ್ಪತ್ರೆಯಲ್ಲಿಯೇ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಹ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಕ್ಕ-ಪಕ್ಕದ ವಾರ್ಡ್‌ಗಳಲ್ಲಿ ಮುಖ್ಯಮಂತ್ರಿ ಮತ್ತು ಮಾಜಿ ಮುಖ್ಯಮಂತ್ರಿಗಳು ದಾಖಲಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+