ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿದ್ದರಾಮಯ್ಯಗೆ ಕೋವಿಡ್ ಸೋಂಕು; ಹೆಲ್ತ್ ಬುಲೆಟಿನ್

|
Google Oneindia Kannada News

ಬೆಂಗಳೂರು, ಆಗಸ್ಟ್ 05 : ಮಾಜಿ ಮಖ್ಯಮಂತ್ರಿ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಜ್ವರ ಕಡಿಮೆಯಾಗಿದೆ. ಕೋವಿಡ್ ಸೋಂಕು ತಗುಲಿರುವ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬುಧವಾರ ನಗರದ ಮಣಿಪಾಲ್ ಆಸ್ಪತ್ರೆ ವೈದ್ಯರು ಸಿದ್ದರಾಮಯ್ಯ (71) ಆರೋಗ್ಯ ಬಗ್ಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದಾರೆ. 'ಸಿದ್ದರಾಮಯ್ಯಗೆ ಜ್ವರ ಕಡಿಮೆಯಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ' ಎಂದು ತಿಳಿಸಿದ್ದಾರೆ.

ಆಸ್ಪತ್ರೆಯಲ್ಲೂ ಕಡತ ಪರಿಶೀಲನೆ ಮಾಡುತ್ತಿರುವ ಯಡಿಯೂರಪ್ಪ! ಆಸ್ಪತ್ರೆಯಲ್ಲೂ ಕಡತ ಪರಿಶೀಲನೆ ಮಾಡುತ್ತಿರುವ ಯಡಿಯೂರಪ್ಪ!

'ಚಿಕಿತ್ಸೆಗೆ ಸಿದ್ದರಾಮಯ್ಯ ಅವರು ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಅವರಿಗೆ ಕೋವಿಡ್ 19 ರೋಗದ ಲಕ್ಷಣಗಳು ಕಂಡುಬಂದಿಲ್ಲ. ತಜ್ಞ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ಇಟ್ಟಿದೆ' ಎಂದು ಆಸ್ಪತ್ರೆ ಹೇಳಿದೆ.

ಸಿದ್ದರಾಮಯ್ಯ ನಿವಾಸಕ್ಕೆ ಕ್ವಾರಂಟೈನ್ ಸ್ಟಿಕ್ಕರ್!ಸಿದ್ದರಾಮಯ್ಯ ನಿವಾಸಕ್ಕೆ ಕ್ವಾರಂಟೈನ್ ಸ್ಟಿಕ್ಕರ್!

Siddaramaiah In Hospital Health Bulletin Of August 5

ಸಿದ್ದರಾಮಯ್ಯ ಅವರಿಗೆ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಸೋಮವಾರ ರಾತ್ರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದಿತ್ತು. ಆದ್ದರಿಂದ, ಕೋವಿಡ್ ವಾರ್ಡ್‌ನಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ.

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸ ಸೀಲ್ ಡೌನ್‌ ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸ ಸೀಲ್ ಡೌನ್‌

ಮಣಿಪಾಲ್ ಆಸ್ಪತ್ರೆಯಲ್ಲಿ ಸಿದ್ದರಾಮಯ್ಯ ಅವರು 10 ದಿನ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಳಿಕ ಅವರ ಕೋವಿಡ್ ಪರೀಕ್ಷೆ ವರದಿ ನೆಗೆಟಿವ್ ಬಂದರೆ ಅವರನ್ನು ಡಿಸ್ಚಾರ್ಜ್ ಮಾಡಲಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ.

ಮಣಿಪಾಲ್ ಆಸ್ಪತ್ರೆಯಲ್ಲಿಯೇ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಹ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಕ್ಕ-ಪಕ್ಕದ ವಾರ್ಡ್‌ಗಳಲ್ಲಿ ಮುಖ್ಯಮಂತ್ರಿ ಮತ್ತು ಮಾಜಿ ಮುಖ್ಯಮಂತ್ರಿಗಳು ದಾಖಲಾಗಿದ್ದಾರೆ.

English summary
In a health bulletin Manipal hospitals said that leader of opposition and former chief minister of Karnataka Siddaramaiah has been stable since admission to hospital. Presently he has no fever and his vital parameters are stable.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X