ಹಾಸನದಲ್ಲಿ ಗಣಪತಿ ಮೆರವಣಿಗೆ ವೇಳೆ ಘೋರ ದುರಂತ: ಸಿದ್ದರಾಮಯ್ಯ ಕೊಟ್ಟ ಸೂಚನೆ ಏನು?
ಹಾಸನ, ಸೆಪ್ಟೆಂಬರ್ 13: ಹಾಸನ ಜಿಲ್ಲೆಯಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಸಂಭವಿಸಿದ ಭೀಕರ ಅಪಘಾತದ ಹಿನ್ನೆಲೆಯಲ್ಲಿ ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡರು ನೀಡಿದ ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ರಾತ್ರಿಯಿಡೀ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಘಟನೆ ನಡೆದ ಕ್ಷಣದಿಂದ ರಾತ್ರಿಯಿಡೀ ಅಧಿಕಾರಿಗಳ ತಂಡ-ವೈದ್ಯರ ತಂಡಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡರು ತೀವ್ರ ನಿಗಾ ವಹಿಸಿದ್ದಾರೆ ಎಂದು ಸಿಎಂ ತಿಳಿಸಿದರು.
ಮೃತರ ಕುಟುಂಬಗಳ ಜೊತೆ ಸತತ ಸಂಪರ್ಕದಲ್ಲಿದ್ದ ಅಧಿಕಾರಿಗಳು ಮೃತರ ಮರಣೋತ್ತರ ಪರೀಕ್ಷೆ ರಾತ್ರಿಯೇ ನಡೆಯಲು ಬೇಕಾದ ಅಗತ್ಯ ಕ್ರಮ ಕೈಗೊಂಡರು. ವೈದ್ಯರ ತಂಡ ಬೆಳಗಾಗುವವರೆಗೂ ಕಾಯದೇ ರಾತ್ರಿಯೇ ಮರಣೋತ್ತರ ಪರೀಕ್ಷೆ ಮತ್ತು ಕಾನೂನು ಪ್ರಕ್ರಿಯೆ ಮುಗಿಸಿ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದೆ. ಗಾಯಾಳುಗಳ ಚಿಕಿತ್ಸೆಗೆ ಖುದ್ದಾಗಿ ಜಿಲ್ಲಾ ವೈದ್ಯಾಧಿಕಾರಿಗಳೇ ಉಸ್ತುವಾರಿ ವಹಿಸಿದ್ದು, ಅಗತ್ಯ ವೈದ್ಯರ ತಂಡವನ್ನು ರಚಿಸಿದ್ದಾರೆ. ಅಗತ್ಯವಾದ ಎಲ್ಲಾ ಆಧುನಿಕ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ವೈದ್ಯಾಧಿಕಾರಿಯವರ ಜೊತೆ ನಿರಂತರ ಸಂಪರ್ಕದಲ್ಲಿರುವ ಉಸ್ತುವಾರಿ ಸಚಿವರು ಆಸ್ಪತ್ರೆಗಳಿಗೆ ಭೇಟಿ ನೀಡುತ್ತಿದ್ದು, ಮೃತರ ಕುಟುಂಬದವರ ಜೊತೆಗೂ ಮಾತನಾಡುತ್ತಿದ್ದಾರೆ ಎಂದು ತಿಳಿಸಿದರು.

ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದರು. ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ ಎಂದು ಹೇಳಿದರು.
ಹಾಸನ ದುರಂತ ಎಲ್ಲ ಮೃತ ದೇಹಗಳನ್ನು ರಾತ್ರಿಯ ಮರಣೋತ್ತರ ಪರೀಕ್ಷೆ ಮಾಡಿ ಕುಟುಂಬಸ್ಥರಿಗೆ ಹಸ್ತಾಂತರ ಮಾಡಿರುವ ಸರ್ಕಾರ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡರು ಬೆಳಗಿನ ಬೆಳಗಿನ ಜಾವ 3:00 ವರೆಗೂ ಎಲ್ಲಾ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದು ಎಲ್ಲ ಮೃತ ದೇಹಗಳು ಮರಣೋತ್ತರ ಪರೀಕ್ಷೆಯಾಗಿ ಅವರ ಕುಟುಂಬರಿಸ್ತರಿಗೆ ಹಸ್ತಾಂತರ ಮಾಡುವಂತೆ ಎಲ್ಲರ ಜೊತೆ ಸತತ ಸಂಪರ್ಕದಲ್ಲಿದ್ದು ರಾತ್ರಿಯ ಮರಣೋತ್ತರ ಪರೀಕ್ಷೆ ಮಾಡಿ ಮೃತ ದೇಹಗಳನ್ನು ಅರ್ಥಾಂತರಿಸಲಾಗಿದೆ ಎಂದು ಸಿಎಂ ಕಚೇರಿ ತಿಳಿಸಿದೆ.












Click it and Unblock the Notifications