ಎಲ್ಲಾ ಗ್ರಾಮಗಳು ಪೋಡಿಮುಕ್ತ, ಕೆರೆ-ಕಟ್ಟೆ ಒತ್ತುವರಿ ತೆರವುಗೊಳಿಸಿ : ಸಿದ್ದರಾಮಯ್ಯ ಖಡಕ್‌ ಸೂಚನೆ

ಬೆಂಗಳೂರು,ಏಪ್ರಿಲ್ 10 : ನಮ್ಮದು ಹಳ್ಳಿಗಳ ಮತ್ತು ರೈತರ ದೇಶ. ಗ್ರಾಮಗಳು ಮತ್ತು ರೈತರು ನೆಮ್ಮದಿಯಾಗಿ ಉತ್ಪಾದನೆಯಲ್ಲಿ ತೊಡಗಬೇಕಾದರೆ ಸರ್ವೇ ಕಾರ್ಯ ಸರಿಯಾಗಿ ಪೂರ್ಣಗೊಳ್ಳಬೇಕು. ಕೆರೆ ಕಟ್ಟೆಗಳ ಒತ್ತುವರಿ ತೆರವುಗೊಳಿಸಬೇಕು, ಪೋಡಿ ಮುಕ್ತ ಗ್ರಾಮಗಳಾಗಬೇಕು. ಇದಕ್ಕಾಗಿ ಇಲಾಖೆಯ ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಶ್ರಮಿಸಿ, ಧ್ವನಿ ಇಲ್ಲದವರ ಪರವಾಗಿ ಕೆಲಸ ಮಾಡುವುದೇ ನಿಜವಾದ ಪುಣ್ಯದ ಕಾರ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಕಂದಾಯ ಇಲಾಖೆ ಸರ್ಕಾರಕ್ಕೆ ಮಾತೃ ಇಲಾಖೆ ಇದ್ದಂತೆ, ಕಂದಾಯ ಇಲಾಖೆ ರೈತರಿಗೆ ಸಂಪರ್ಕ ಇರುವ ಇಲಾಖೆ, ಜನರ ಕಷ್ಟಗಳಿಗೆ ಸ್ಪಂದಿಸುವ ಇಲಾಖೆ, ಇಲಾಖೆ ಜನರ ಕಷ್ಟಗಳಿಗೆ ಸ್ಪಂದಿಸಿದರೆ ಮಾತ್ರ ಸಮಸ್ಯೆಗಳಿಗೆ ಪರಿಹಾರ ಸಿಗುತ್ತವೆ, ಮುಂದಿನ 2 ವರ್ಷದಲ್ಲಿ ಸಂಪೂರ್ಣ ಪೋಡಿ ಮುಕ್ತ ಗ್ರಾಮಗಳಾಗಬೇಕು. ಇದಕ್ಕೆ ಸರ್ಕಾರದಿಂದ ಸಂಪೂರ್ಣ ಸಹಕಾರ ಸಿಗುತ್ತದೆ ಎಂದರು.

Siddaramaiah instructed that all villages should become free from encroachments

ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ನಡೆದ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ ಇಲಾಖೆಯ ನೌಕರರ ಸಂಘಗಳ 36ನೇ ರಾಷ್ಟ್ರೀಯ ಭೂಮಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಒಂದೂವರೆ ವರ್ಷದಲ್ಲಿ 26 ಲಕ್ಷ ಸರ್ವೇ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದ್ದಕ್ಕೆ ಸಚಿವರಿಗೆ ಮೆಚ್ಚುಗೆ ಕಂದಾಯ ಇಲಾಖೆ ಸರ್ಕಾರದ ಮಾತೃ ಇಲಾಖೆ ರೀತಿ ಇದೆ. ಈ ಇಲಾಖೆ ಅಚ್ಚುಕಟ್ಟಾಗಿ ಕೆಲಸ ಮಾಡಿದರೆ ರೈತ ಸಮುದಾಯ ನೆಮ್ಮದಿಯಾಗಿರುತ್ತದೆ.

ಕೃಷ್ಣಬೈರೇಗೌಡರ ನೇತೃತ್ವದಲ್ಲಿ ಕಂದಾಯ ಇಲಾಖೆಯಲ್ಲಿ ಅತ್ಯುತ್ತಮ ಕೆಲಸಗಳಾಗುತ್ತಿವೆ ಎಂದು ಮೆಚ್ಚುಗೆ ಸೂಚಿಸಿದರು. ಕೃಷ್ಣಬೈರೇಗೌಡರು ಇಲಾಖೆಯನ್ನು ಚೆನ್ನಾಗಿ ಅರ್ಥಮಾಡಿಕೊಂಡು, ನಾಲಗೆ ತುದಿಯಲ್ಲಿ ಅಂಕಿ ಅಂಶ ಇಟ್ಟುಕೊಂಡಿರುವ ಸಮರ್ಥ ಮಂತ್ರಿ. ಕೇವಲ ಮಂತ್ರಿ ಆದರೆ ಸಾಲದು. ಪರಿಣತಿ, ಕಾಳಜಿ ಇರಬೇಕು. ಇವೆರಡೂ ಕೃಷ್ಣಬೈರೇಗೌಡ ಅವರಲ್ಲಿದೆ ಎಂದು ಸಿಎಂ ಮೆಚ್ಚುಗೆ ಸೂಚಿಸಿದರು.

ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿ ಕಂದಾಯ ಇಲಾಖೆಯ, ನೌಕರರ ಬಹಳಷ್ಟು ಸಮಸ್ಯೆಗಳನ್ನು ಬಗೆಹರಿಸಿದ್ದೇನೆ. ತಹಶೀಲ್ದಾರ್, ಎಸಿ ಕಚೇರಿಗಳಲ್ಲಿ ಸುಗಮವಾಗಿ, ಪ್ರಾಮಾಣಿಕವಾಗಿ ಕೆಲಸಗಳು ಆದರೆ ನಾಡಿನ ಜನತೆ, ರೈತ ಸಮುದಾಯ ಅತ್ಯಂತ ನೆಮ್ಮದಿಯಾಗಿರುತ್ತದೆ ಎಂದರು. ಕಂದಾಯ ಇಲಾಖೆಗೆ ಅಗತ್ಯ ಇರುವಷ್ಟು ಹಣ ಕೊಟ್ಟಿದ್ದೇವೆ, ಮುಂದೆಯೂ ಕೊಡುತ್ತೇವೆ. ಅಗತ್ಯ ಸಿಬ್ಬಂದಿ ಬಲವನ್ನೂ ಕೊಟ್ಟಿದ್ದೇವೆ.

ಪರವಾನಗಿ ಭೂಮಾಪಕರ ಕಾಯಂ: ಖಾಲಿ ಇರುವ ಎಲ್ಲಾ ಸರ್ವೇಯರ್ ಹುದ್ದೆಗಳ ನೇಮಕಾತಿ ಅತ್ಯಂತ ಪಾರದರ್ಶಕವಾಗಿ ಆಗಿದೆ. ಸದ್ಯದಲ್ಲೇ ನೇಮಕಾತಿ ಪತ್ರವನ್ನೂ ಕೊಡುತ್ತೇವೆ ಎಂದರು. ಹಿಂದೆ ಗೋವಿಂದೇಗೌಡರು ಪ್ರಾಮಾಣಿಕವಾಗಿ ಒಂದು ಲಕ್ಷ ಶಿಕ್ಷಕರ ನೇಮಕಾತಿ ಆಗಿರುವ ರೀತಿಯಲ್ಲೇ ಕೃಷ್ಣಬೈರೇಗೌಡರು ಸರ್ವೇಯರ್ ಗಳ ನೇಮಕಾತಿ ಮಾಡುವ ಕೆಲಸ ಮಾಡುತ್ತಿದ್ದಾರೆ. 1227 ಪರವಾನಗಿ ಭೂಮಾಪಕರ ಕಾಯಂ ಮಾಡಲು ಗಂಭೀರ ಚಿಂತನೆ ಮಾಡಲಾಗುವುದು. ಜೊತೆಗೆ 36 ಮಂದಿ ಎಡಿಎಲ್ ಆರ್ ಗಳ ನೇಮಕವನ್ನೂ ಸದ್ಯದಲ್ಲೇ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ ಇಲಾಖೆಯ ನೌಕರರ ಸಂಘಗಳ ಪದಾಧಿಕಾರಿಗಳು ಹಾಗೂ ಪರವಾನಗಿ ಭೂಮಾಪಕರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಗಳಿಗೆ ಭಿನ್ನವತ್ತಳೆಯನ್ನು ಸಲ್ಲಿಸಿದ್ದಾರೆ. ಪರಿಶೀಲಿಸಿ ಅಗತ್ಯ ಕ್ರಮ ವಹಿಸಲಾಗುವುದು ಎಂದರು. ಇನ್ನು ಮುಂದೆ ಪ್ರತೀ ವರ್ಷ ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತೀ ವರ್ಷ ಆಚರಿಸಬೇಕು ಎಂದು ಸೂಚಿಸಿದರು. ಇದೇ ಸಂದರ್ಭದಲ್ಲಿ ಭೂಮಾಪಕರಿಗೆ 465 ಆಧುನಿಕ ತಂತ್ರಜ್ಞಾನ ಆಧಾರಿತ ರೋವರ್ ಉಪಕರಣಗಳನ್ನು ವಿತರಣೆ ಮಾಡಿ ಇಲಾಖೆಯ ಸ್ಮರಣಸಂಚಿಕೆಯನ್ನು ಬಿಡುಗಡೆ ಮಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+