Siddaramaiah: ಪಡಿತರ ಚೀಟಿ ಹೊಂದಿಲ್ಲದ ಈ ಕುಟುಂಬಗಳಿಗೆ 15 ದಿನಗಳ ಒಳಗಾಗಿ ಬಿಪಿಎಲ್ ಕಾರ್ಡ್:‌ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ನವೆಂಬರ್ 26: ಪಡಿತರ ಚೀಟಿ ಹೊoದಿಲ್ಲದ ಬುಡಕಟ್ಟು ಕುಟುoಬಗಳಿಗೆ 15 ದಿನಗಳ ಒಳಗಾಗಿ ಬಿಪಿಎಲ್ ಪಡಿತರ ಚೀಟಿ ಒದಗಿಸಿ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಅಧಿಕಾರಿಗಳಿಗೆ ಸೂಚಿಸಿದರು.

ಅರಣ್ಯ ಹಾಗೂ ಅರಣ್ಯದಂಚಿನಲ್ಲಿ ವಾಸಿಸುವ ಬುಡಕಟ್ಟು ಸಮುದಾಯಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ಕುರಿತು ನಡೆದ ಸಭೆಯಲ್ಲಿ ಸಿದ್ದರಾಮಯ್ಯ ಅವರು ಮಾತನಾಡಿ, ಅರಣ್ಯ ಹಾಗೂ ಅರಣ್ಯದಂಚಿನಲ್ಲಿ ವಾಸಿಸುವ ಬುಡಕಟ್ಟು ಸಮುದಾಯಗಳ ಜನರಿಗೆ ಮನೆ, ಕುಡಿಯುವ ನೀರು, ರಸ್ತೆ ಸಂಪರ್ಕ, ವಿದ್ಯುತ್ ಸಂಪರ್ಕ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ರಸ್ತೆಗಳ ಅಭಿವೃದ್ಧಿಗೆ ಮತ್ತು ಕುಡಿಯುವ ನೀರು ಸೌಲಭ್ಯ ಕಲ್ಪಿಸಲು ಯಾವುದೇ ಅಡ್ಡಿ ಉಂಟು ಮಾಡಬಾರದು. ಪ್ರತಿ ಹಾಡಿಯಲ್ಲಿ ಕುಡಿಯುವ ನೀರಿನ ಸoಪರ್ಕ ಕಲ್ಪಿಸಬೇಕು ಎಂದರು.

Siddaramaiah Instructed To Provide BPL Cards To Tribal Families Within 15 Days

ಅರಣ್ಯ ಹಕ್ಕು ಸಮಿತಿಗಳ ಮುoದೆ ಬಾಕಿಯಿರುವ ಅರ್ಜಿಗಳನ್ನು ನಿಗದಿತ ಅವಧಿಯ ಒಳಗಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು.ಆರೋಗ್ಯ ಇಲಾಖೆಯಲ್ಲಿ ಬುಡಕಟ್ಟು ಜನರನ್ನು ಸ್ಥಳೀಯವಾಗಿ ನೇಮಕ ಮಾಡುವ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬುಡಕಟ್ಟು ಸಮುದಾಯದವರಿಗೆ ಹಾಡಿಗಳಲ್ಲಿ ಸ್ಮಶಾನ ಭೂಮಿ ಒದಗಿಸಬೇಕು. ಬುಡಕಟ್ಟು ಸಮುದಾಯ ಕಲ್ಪಿಸುವ ವಿಷಯದಲ್ಲಿ ಕoದಾಯ, ಅರಣ್ಯ ಮತ್ತು ಸಮಾಜ ಕಲ್ಯಾಣ ಇಲಾಖೆಗಳು ಸಮನ್ವಯದಿoದ ಕಾರ್ಯ ನಿರ್ವಹಿಸಬೇಕು. ಸಂಪರ್ಕ ರಸ್ತೆಗಳ ದುರಸ್ತಿ, ಉನ್ನತೀಕರಣಕ್ಕೆ ರಾಜ್ಯ ಸರ್ಕಾರದ ಹಂತದಲ್ಲಿ ಇರುವ ಅವಕಾಶಗಳನ್ನು ಬಳಸಿಕೊಳ್ಳಬೇಕು.ಎರಡು ತಿoಗಳ ಒಳಗಾಗಿ ಮತ್ತೆ ಸಭೆ ಕರೆದು ಈ ಎಲ್ಲಾ ವಿಷಯಗಳ ಕುರಿತು ಪರಿಶೀಲನೆ ನಡೆಸಲಾಗುವುದು. ಅದರ ಒಳಗಾಗಿ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಸಿದ್ದರಾಮಯ್ಯ ಅವರು ಸೂಚಿಸಿದರು.

ನಿವೇಶನ ರಹಿತರು ಒಪ್ಪಿಗೆ ಸೂಚಿಸಿದರೆ ಅವರಿಗೆ ಬೇರೆ ಕಡೆ ನಿವೇಶನ ಒದಗಿಸಿ ಪುನರ್ವಸತಿ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು. ಇದಕ್ಕಾಗಿ ಅರಣ್ಯದ ಅಂಚಿನಲ್ಲಿ ಜಮೀನುಗಳನ್ನು ಗುರುತಿಸಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮoತ್ರಿ ಅವರು ಸೂಚನೆ ನೀಡಿದರು. ನಿವೇಶನ ಇದ್ದರೂ ಮನೆಯಿಲ್ಲದವರಿಗೆ ರಾಜೀವ್‌ ಗಾಂಧಿ ವಸತಿ ನಿಗಮದ ವತಿಯಿಂದ ಮನೆ ಮಂಜೂರಾತಿಗೆ ಕ್ರಮ ಕೈಗೊಳ್ಳಬೇಕು ಎಂದರು. ಮೈಸೂರು ಜಿಲ್ಲೆಯಲ್ಲಿ 2963ಕುಟುಂಬಗಳಿಗೆ ನಿವೇಶನ ಇರುವುದಿಲ್ಲ.

1222 ಕುಟುಂಬಗಳಿಗೆ ನಿವೇಶನ ಇದ್ದರೂ, ಮನೆ ಇರುವುದಿಲ್ಲ. ಚಾಮರಾಜನಗರ ಜಿಲ್ಲೆಯಲ್ಲಿ 5164 ಕುಟುಂಬಗಳಿಗೆ ಪಕ್ಕಾ ಮನೆಯಿದ್ದು. 234 ಕುಟುಂಬಗಳಿಗೆ ನಿವೇಶನ ಇರುವುದಿಲ್ಲ. 2761 ಕುಟುಂಬಗಳಿಗೆ ನಿವೇಶನ ಇದ್ದರೂ, ಮನೆ ಇರುವುದಿಲ್ಲ. ಕೊಡಗು ಜಿಲ್ಲೆಯಲ್ಲಿ 2882 ಕುಟುಂಬಗಳಿಗೆ ಪಕ್ಕಾ ಮನೆಯಿದೆ. 1050 ಕುಟುಂಬಗಳಿಗೆ ನಿವೇಶನ ಇರುವುದಿಲ್ಲ. 1182 ಕುಟುಂಬಗಳಿಗೆ ನಿವೇಶನ ಇದ್ದರೂ ಮನೆ ಇರುವುದಿಲ್ಲ. ಗೃಹ ನಿರ್ಮಾಣದ ಕುರಿತು ಕ್ರಮ ವಹಿಸುವಂತೆ ಸಿಎಂ ಸೂಚಿಸಿದರು.

ವಿದ್ಯುತ್‌ ಸಂಪರ್ಕ ಕಲ್ಪಿಸಲು ಬಾಕಿಯಿರುವ ಪ್ರಸ್ತಾವನೆಗಳಿಗೆ ಶೀಘ್ರ ಅನುಮತಿ ನೀಡಿ ಶಾಶ್ವತ ವಿದ್ಯುತ್‌ ಸಂಪರ್ಕ ಕಲ್ಪಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ಮೈಸೂರು ಜಿಲ್ಲೆಯಲ್ಲಿ 194 ಹಾಡಿಗಳು ಅರಣ್ಯದಂಚಿನಲ್ಲಿದ್ದು, ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ. ಅರಣ್ಯದೊಳಗಿರುವ 21 ಹಾಡಿಗಳ ಪೈಕಿ ಮೂರು ಹಾಡಿಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದ್ದು, 18 ಹಾಡಿಗಳಿಗೆ ವಿದ್ಯುತ್‌ ಸಂಪರ್ಕ ಇರುವುದಿಲ್ಲ. 18 ಹಾಡಿಗಳಿಗೆ ಇಂಧನ ಇಲಾಖೆಯಿಂದ ಸೋಲಾರ್‌ ದೀಪಗಳನ್ನು ಅಳವಡಿಸಲಾಗಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಅರಣ್ಯದಂಚಿನಲ್ಲಿರುವ ಎಲ್ಲಾ 125 ಹಾಡಿಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ.

ಅರಣ್ಯದೊಳಗಿರುವ 33 ಹಾಡಿಗಳ ಪೈಕಿ 15 ಹಾಡಿಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ. ಇನ್ನುಳಿದಿರುವ 18 ಹಾಡಿಗಳಿಗೆ ಇಂಧನ ಇಲಾಖೆಯಿಂದ ಸೋಲಾರ್‌ ದೀಪಗಳನ್ನು ಅಳವಡಿಸಲಾಗಿದೆ. ಕೊಡುಗು ಜಿಲ್ಲೆಯಲ್ಲಿ ಅರಣ್ಯದಂಚಿನಲ್ಲಿರುವ 211 ಹಾಡಿಗಳ ಪೈಕಿ 154 ಹಾಡಿಗಳಿಗೆ ಹಾಗೂ ಅರಣ್ಯದೊಳಗಿರುವ 74 ಹಾಡಿಗಳ ಪೈಕಿ 57 ಹಾಡಿಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ. 17 ಹಾಡಿಗಳಿಗೆ ವಿದ್ಯುತ್‌ ಸಂಪರ್ಕ ಇರುವುದಿಲ್ಲ. 5 ಹಾಡಿಗಳಿಗೆ ಸೋಲಾರ್‌ ದೀಪಗಳನ್ನು ಅಳವಡಿಸಲಾಗಿದೆ.

ಮೈಸೂರು ಜಿಲ್ಲೆಯಲ್ಲಿ 215ಹಾಡಿಗಳಿದ್ದು, 49,778 ಜನರು ವಾಸಿಸುತ್ತಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ 158 ಹಾಡಿಗಳಿದ್ದು, 27,763 ಜನರು ವಾಸಿಸುತ್ತಿದ್ದಾರೆ. ಕೊಡಗು ಜಿಲ್ಲೆಯಲ್ಲಿ 228 ಹಾಡಿಗಳಿದ್ದು, 26,909 ಮಂದಿ ವಾಸಿಸುತ್ತಿದ್ದಾರೆಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+