ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಳ್ಳಿಗಳಲ್ಲಿ ನೀರು ಕೊರತೆಗೆ ಜಿಲ್ಲಾಧಿಕಾರಿಗಳೇ ಹೊಣೆ: ಸಿಎಂ

|
Google Oneindia Kannada News

ಬೆಂಗಳೂರು, ಏಪ್ರಿಲ್ 18: ಗ್ರಾಮೀಣ ಪ್ರದೇಶಗಳಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸರಬರಾಜಿಗಾಗಿ ಈಗಾಗಲೇ ಅಗತ್ಯ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ. ಇದರ ಜವಾಬ್ದಾರಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೇರಿದ್ದಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಕೊರತೆಯಾದಲ್ಲಿ, ಅದಕ್ಕೆ ಜಿಲ್ಲಾಧಿಕಾರಿಗಳೇ ನೇರ ಹೊಣೆ ಹೊರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಮಂಗಳವಾರ, ತಮ್ಮ ಕಚೇರಿಯಲ್ಲಿ ತಮ್ಮ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ, ಸಚಿವರೊಂದಿಗೆ ಬರ ನಿರ್ವಹಣೆ ಸಭೆ ನಡೆಸಿದ ಸಿದ್ದರಾಮಯ್ಯ, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಪ್ರಾದೇಶಿಕ ಆಯುಕ್ತರೊಂದಿಗೆ ವೀಡಿಯೋ ಕಾನ್ಫರೆನ್ಸ್ ಕೂಡಾ ನಡೆಸಿದರು.

Siddaramaiah instructs officials to handle drought situation effectively

ಜೂನ್ ತಿಂಗಳವರೆಗೆ ಜನರಿಗೆ ಕುಡಿಯುವ ನೀರು, ಉದ್ಯೋಗ, ಜಾನುವಾರುಗಳಿಗೆ ಮೇವು ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಬರ ನಿರ್ವಹಣೆ ಕೆಲಸ ಸವಾಲಿನದ್ದಾಗಿದ್ದು ಅದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕೆಂದು ಅವರು ಸೂಚಿಸಿದರು.

English summary
Chief Minister of Karnataka has strictly instucted the Deputy Collectors of Various districts of the state to handle hassle -free steps to fight against the drought situation in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X