ಸತೀಶ್‌ ಜಾರಕಿಹೊಳಿ ಅವರ ಆ ಬೇಡಿಕೆಗೆ ಸ್ಪಂದಿಸಿದ ಸಿದ್ದರಾಮಯ್ಯ

ಬೆಂಗಳೂರು, ಆಗಸ್ಟ್ 23: ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಮಹಾಸ್ವಾಮಿಗಳು ಮತ್ತು ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದ ನಿಯೋಗದ ಮುಖ್ಯಮಂತ್ರಿಗಳನ್ನ ಭೇಟಿ ಮಾಡಿ. ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನದ ಕುರಿತು ಬೇಡಿಕೆ ಇಟ್ಟಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ತಮ್ಮನ್ನು ಭೇಟಿ ಮಾಡಿದ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಮಹಾಸ್ವಾಮಿಗಳು ಮತ್ತು ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದ ಶಾಸಕರ ಮತ್ತು ಸಮುದಾಯದ ಮುಖಂಡರ ನಿಯೋಗದ ಬೇಡಿಕೆಗೆ ಸಿಎಂ ಸ್ಪಂದಿಸಿ ಹೆಚ್ಚುವರಿ ಅನುದಾನ ಬಿಡುಗಡೆಗೊಳಿಸಲು ಸ್ಥಳದಲ್ಲೇ ಅಧಿಕಾರಿಗಳಿಗೆ ಸೂಚನೆ ನೀಡಿದರು.

Siddaramaiah Instructs To Release Additional Grant To Valmiki Development Corporation

ವಾಲ್ಮೀಕಿ ನಿಗಮಕ್ಕೆ ಈ ಹಿಂದೆ ನೀಡಲಾಗಿದ್ದ 84.63 ಕೋಟಿ ಅನುದಾನದಲ್ಲಿ 50 ಕೋಟಿಯನ್ನು ಎಸ್ ಐ ಟಿ ಅಧಿಕಾರಿಗಳು ಬ್ಯಾಂಕ್ ಖಾತೆಯಲ್ಲೇ ಫ್ರೀಜ್ ಮಾಡಿಟ್ಟಿದ್ದಾರೆ. ಪ್ರಕರಣದ ತನಿಖೆ ಮುಂದುವರೆದಿದ್ದು ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಆಗಿರುವ ಸುಮಾರು 30 ಕೋಟಿಯಷ್ಟು ಹಣವನ್ನು ವಾಪಾಸ್ ವಶಕ್ಕೆ ಪಡೆಯುವ ಪ್ರಯತ್ನ ಮುಂದುವರೆದಿದೆ. ಸದ್ಯದಲ್ಲೇ ಪೂರ್ತಿ ಹಣವನ್ನು ವಾಪಾಸ್ ವಶಕ್ಕೆ ಪಡೆಯುವ ಸಾಧ್ಯತೆಗಳಿವೆ.

ಅಲ್ಲಿಯವರೆಗೂ ವಾಲ್ಮೀಕಿ ಸಮುದಾಯದ ಅಭಿವೃದ್ಧಿ ಕೆಲಸಗಳಿಗೆ ತೊಂದರೆ ಆಗಬಾರದು ಎನ್ನುವ ಉದ್ದೇಶದಿಂದ ನಿಗಮಕ್ಕೆ ತಕ್ಷಣವೇ ಹೆಚ್ಚುವರಿ ಅನುದಾನ ಬಿಡುಗಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಕರಣ ಪೂರ್ತಿ ಇತ್ಯರ್ಥ ಆಗುವವರೆಗೂ ನಿಗಮದ ಮತ್ತು ಸಮುದಾಯದ ಕೆಲಸಗಳಿಗೆ ತೊಂದರೆ ಆಗಬಾರದು ಎನ್ನುವುದು ನಮ್ಮ ಆಧ್ಯತೆಯಾಗಿದೆ. ಹೀಗಾಗಿ ಹಣ ಬಿಡುಗಡೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿಗಳು ನಿಯೋಗಕ್ಕೆ ಸ್ಪಷ್ಟಪಡಿಸಿದರು. ಶಾಸಕರಾದ ಕಂಪ್ಲಿ ಗಣೇಶ್, ರಘುಮೂರ್ತಿ, ಕೋನರೆಡ್ಡಿ, ಸಮುದಾಯದ ಮುಖಂಡರಾದ ನಿವೃತ್ತ KAS ಅಧಿಕಾರಿ ಮೃತ್ಯುಂಜಯಪ್ಪ ಸೇರಿ ಸಮಾಜದ ಹಲವು ಹಿರಿಯರು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+