ಇಂದಿನ ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಗೈರು: ಕಾರಣ ಕೊಟ್ಟ ಸಿದ್ದರಾಮಯ್ಯ
ಬೆಂಗಳೂರು, ಜುಲೈ 14: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗಕ್ಕೆ ಮತ್ತೊಂದು ಪ್ರವಾಸಿ ತಾಣದ ಪ್ರಮುಖ ಸ್ಥಳ ಸೇರ್ಪಡೆಯಾಗಲಿದೆ. ಶಿವಮೊಗ್ಗ ಜಿಲ್ಲೆಯ ಜನರ ದಶಕಗಳ ಕನಸೊಂದು ಇದೀಗ ವಾಸ್ತವ ರೂಪ ಪಡೆದು ಲೋಕಾರ್ಪಣೆಗೆ ಸಜ್ಜಾಗಿದೆ. ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆಗೆ ಕ್ಷಣಗಣನೆ ಶುರುವಾಗಿದ್ದು, ಶಿವಮೊಗ್ಗದ ಸಾಗರ ತಾಲೂಕಿನ ಶರಾವತಿ ಹಿನ್ನೀರಿನ ಮೇಲೆ ನಿರ್ಮಾಣವಾಗಿರುವ, ಸಿಗಂದೂರು ಸೇತುವೆ ಈಗ ಉದ್ಘಾಟನೆಯ ಹೊಸ್ತಿಲಲ್ಲಿದೆ. ಆದರೆ, ಈ ಸೇತುವೆ ಲೋಕಾರ್ಪಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೈರಾಗುತ್ತಿದ್ದಾರೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಕಾರಣವನ್ನ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಾಗರ - ಸಿಗಂದೂರು ನಡುವಿನ ಸೇತುವೆ ಉದ್ಘಾಟನಾ ಸಮಾರಂಭಕ್ಕೆ ನನ್ನನ್ನು ತಡವಾಗಿ ಆಮಂತ್ರಿಸಿದ್ದು, ಬೇರೆಡೆ ಕಾರ್ಯಕ್ರಮಗಳನ್ನು ನಾನು ಹಮ್ಮಿಕೊಂಡಿರುವುದರಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ಮುಂದೂಡಿ, ಬೇರೊಂದು ದಿನ ಆಯೋಜಿಸಬೇಕು ಎಂದು ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದೇನೆ ಎಂದು ಸಿದ್ದರಾಮಯ್ಯ ಅವರು ಪತ್ರ ಬರೆದಿರುವ ಬಗ್ಗೆ ತಿಳಿಸಿದ್ದಾರೆ.

ಸಿದ್ದರಾಮಯ್ಯ ಪತ್ರದ ಸಾರಾಂಶ ಇಂತಿದೆ
ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಶಿವಮೊಗ್ಗ ಜಿಲ್ಲೆ ಸಾಗರದ ನೆಹರೂ ಕ್ರೀಡಾಂಗಣದಲ್ಲಿ ಇಂದು ಸಾಗರ - ಸಿಗಂದೂರು ನಡುವಿನ ಸೇತುವೆ ಉದ್ಘಾಟನಾ ಸಮಾರಂಭವನ್ನು ಏರ್ಪಡಿಸಿದೆ. ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರನ್ನು ಸಹಾ ಮುದ್ರಿಸಲಾಗಿದೆ. ಆದರೆ ನನಗೆ ಈ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡದ ಕಾರಣದಿಂದ ಈಗಾಗಲೇ ನನ್ನ ಅಧ್ಯಕ್ಷತೆಯಲ್ಲಿ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ.
ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆಯು ಇಂತಹ ರಾಜ್ಯಮಟ್ಟದ ಕಾರ್ಯಕ್ರಮ ಆಯೋಜನೆಗೆ ಮುನ್ನ ರಾಜ್ಯ ಸರ್ಕಾರವನ್ನು ಮುಂಚಿತವಾಗಿಯೇ ಸಂಪರ್ಕಿಸಿದ್ದರೆ ಮತ್ತಷ್ಟು ಸಮರ್ಪಕವಾಗಿರುತ್ತಿತ್ತು. ಮುಂದೆ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಸಂದರ್ಭದಲ್ಲಿ ರಾಜ್ಯ ಸರ್ಕಾರವನ್ನು ಸಕಾಲದಲ್ಲಿ ಸಂಪರ್ಕಿಸುವಂತೆ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆಗೆ ಸೂಚನೆ ನೀಡಬೇಕು ಎಂದು ತಮ್ಮಲ್ಲಿ ವಿನಂತಿಸುತ್ತೇನೆ.
ಇಂದಿನ ಕಾರ್ಯಕ್ರಮವನ್ನು ಮುಂದೂಡಿ, ನಿಮಗೆ ಅನುಕೂಲವಾಗುವ ಒಂದೆರೆಡು ದಿನಾಂಕಗಳನ್ನು ನನಗೆ ಒದಗಿಸಬೇಕೆಂದು ಕೋರುತ್ತೇನೆ. ಆ ಮೂಲಕ ಇಂಥದ್ದೊಂದು ಮಹತ್ವದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ನಾನು ಕೂಡ ಭಾಗವಹಿಸಲು ಸಾಧ್ಯವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಸಿಗಂದೂರು ಕಾರ್ಯಕ್ರಮ-ಶಿಷ್ಠಾಚಾರ ಪಾಲನೆಯಾಗಿಲ್ಲ
ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ ಸಚಿವರೂ ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರೂ, ಕೂಡ ಇಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೇ, ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ. ನನಗೆ ಪೂರ್ವನಿಯೋಜಿತ ಕಾರ್ಯಕ್ರಮಗಳಂತೆ ವಿಜಯಪುರ ಜಿಲ್ಲೆಗೆ ತೆರಳಬೇಕಾಗಿರುವುದರಿಂದ, ಸಾಗರ ತಾಲ್ಲೂಕಿನ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದರು.
ಬಿಜೆಪಿಯ ಈ ನಡೆಯನ್ನು ಪ್ರತಿಭಟಿಸಲು ಸಂಬಂಧಪಟ್ಟ ಸಾಗರ ತಾಲ್ಲೂಕಿನ ಇಂದಿನ ಕಾರ್ಯಕ್ರಮವನ್ನು ಸರ್ಕಾರದ ಯಾವುದೇ ಸಚಿವರು, ಸ್ಥಳೀಯ ಶಾಸಕರು ಭಾಗವಹಿಸುತ್ತಿಲ್ಲ. ನಮ್ಮ ನಡುವೆ ತಿಕ್ಕಾಟವನ್ನು ಪ್ರಾರಂಭಿಸಿರುವುದು ಕೇಂದ್ರ ಸರ್ಕಾರವೇ. ಇಲ್ಲಿ ಶಿಷ್ಠಾಚಾರದ ಪಾಲನೆಯಾಗಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ರಾಜ್ಯ ಸರ್ಕಾರದ ಪಾಲೂ ಇರುತ್ತದೆ. ಅಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಎಲ್ಲ ಶಿಷ್ಠಾಚಾರಗಳನ್ನೂ ತಪ್ಪದೇ ಪಾಲಿಸುತ್ತದೆ. ಇಂದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಿಗಾಗಲಿ, ಸಂಬಂಧಪಟ್ಟ ಇಲಾಖಾ ಸಚಿವರನ್ನಾಗಲೀ, ಸ್ಥಳೀಯ ಶಾಸಕರನ್ನಾಗಲೀ ಆಮಂತ್ರಣ ನೀಡಲಾಗಿಲ್ಲ ಎಂದು ಸಿದ್ದರಾಮಯ್ಯ ಅವರು ಹೇಳಿದರು.
-
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ -
SSLC ಪರೀಕ್ಷೆ ನಡೆಯುತ್ತಿರುವಾಗಲೇ ಅಂಕ 525ಕ್ಕೆ ಇಳಿಕೆ: ಸರ್ಕಾರದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ












Click it and Unblock the Notifications